ಸುಪ್ರೀಂ ಕೋರ್ಟ್ ಆವರಣದಲ್ಲೇ ಶೂಟ್ ಮಾಡಿಕೊಂಡ ಪೊಲೀಸ್

ಹೊಸದಿಲ್ಲಿ, ಜ.2: ಸುಪ್ರೀಂಕೋರ್ಟ್‌ನ ಗೇಟ್ 'ಜಿ' ಬಳಿ ಕಾರ್ಯ ನಿರ್ವಹಿಸುತ್ತಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಸ್ವತಃ ಗುಂಡಿಕ್ಕಿಕೊಂಡಿರುವ ಪ್ರಕರಣ ವರದಿಯಾಗಿದೆ.
ದಿಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಚಂದ್ ಪಾಲ್ ಸ್ವತಃ ಗುಂಡಿಕ್ಕಿಕೊಂಡು ಆತ್ಮಹತ್ಯೆಗೆ ಶರಣಾದವರು. ಪಾಲ್ ತಮ್ಮದೇ ಸರ್ವಿಸ್ ರೈಫಲ್ ಅನ್ನು ಹಿಡಿದುಕೊಂಡು ಸುಪ್ರೀಂಕೋರ್ಟ್‌ನ ಗೇಟ್ 'ಜಿ' ಬಳಿ ಗುಂಡಿಕ್ಕಿಕೊಂಡಿದ್ದಾರೆ. ಅವರನ್ನು ನ್ಯಾಯಾಲಯದ ಭದ್ರತಾ ವಿಭಾಗದಲ್ಲಿ ಕಾರ್ಯನಿರ್ವಹಿಸಲು ನೇಮಿಸಲಾಗಿತ್ತು. ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ.
Next Story





