Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ' ತಪ್ಪಾಗಿರಬಹುದು ' ಎಂದು ವಿಷಾದ...

' ತಪ್ಪಾಗಿರಬಹುದು ' ಎಂದು ವಿಷಾದ ವ್ಯಕ್ತಪಡಿಸಿದ ಸಂಸದ ನಳಿನ್

ವಾರ್ತಾಭಾರತಿವಾರ್ತಾಭಾರತಿ2 Jan 2017 7:20 PM IST
share
 ತಪ್ಪಾಗಿರಬಹುದು  ಎಂದು ವಿಷಾದ ವ್ಯಕ್ತಪಡಿಸಿದ ಸಂಸದ ನಳಿನ್

ಮಂಗಳೂರು, ಜ.2 : ಕಾರ್ತಿಕ್‌ರಾಜ್ ಹತ್ಯೆ ಪ್ರಕರಣದ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಭಾನುವಾರ ಕೊಣಾಜೆಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಯಾವುದೇ ಪ್ರಚೋದನಾಕಾರಿ ಹೇಳಿಕೆ ನೀಡಿಲ್ಲ. ಜಿಲ್ಲೆಯ ಶಾಂತಿ ಕದಡುವ ಯಾವುದೇ ದುರುದ್ದೇಶ ನನ್ನ ಹೇಳಿಕೆಯಲ್ಲಿ ಇರಲಿಲ್ಲ. ಆದಾಗ್ಯೂ ನೋವಿನಿಂದ ಆಡಿದ ಮಾತಿನ ಭರದಲ್ಲಿ ವ್ಯಕ್ತವಾದ ಕೆಲವು ಶಬ್ದಗಳ ಬಗ್ಗೆ ಈಗಾಗಲೇ ಮಾಧ್ಯಮಗಳ ಮೂಲಕ ವಿಷಾದ ವ್ಯಕ್ತಪಡಿಸಿದ್ದೇನೆ ಎಂದು ಸಂಸದ ನಳಿನ್‌ಕುಮಾರ್ ಕಟೀಲ್ ತಿಳಿಸಿದ್ದಾರೆ.

ಅಮಾಯಕ ಹಿಂದೂ ಯುವಕರ ಹತ್ಯೆಯಿಂದ ಜನತೆ ಆತಂಕಕ್ಕೀಡಾಗಿದ್ದಾರೆ. ಕಾರ್ತಿಕ್‌ರಾಜ್ ಹತ್ಯೆ ನಡೆದು ಎರಡು ತಿಂಗಳಾದರೂ ಆರೋಪಿಗಳ ಬಂಧನವಾಗಿಲ್ಲ. ಇದರಿಂದ ಸಹಜವಾಗಿಯೇ ಕಾರ್ಯಕರ್ತರಿಗೆ ನೋವಿದೆ. ಪೊಲೀಸ್ ಇಲಾಖೆಯನ್ನು ಎಚ್ಚರಿಸಲು ಪ್ರತಿಭಟನೆ ನಡೆಸಲಾಗಿತ್ತು. ಉದ್ದೇಶಪೂರ್ವಕವಾಗಿ ಯಾವುದೇ ಮಾತು ಆಡಿಲ್ಲ. ಜನತೆಯ ಭಾವನೆಯನ್ನು ಮಾತಿನ ಮೂಲಕ ವ್ಯಕ್ತಪಡಿಸಿದ್ದೇನೆ. ಮನಸ್ಸಿನ ನೋವು ವ್ಯಕ್ತ ಪಡಿಸುವಾಗ ಕೆಲವು ಶಬ್ದಗಳು ತಪ್ಪಾಗಿರಬಹುದು. ಇದಕ್ಕೆ ತಪ್ಪು ಅರ್ಥ ಕಲ್ಪಿಸುವ ಅಗತ್ಯ ಇಲ್ಲ ಎಂದು ಅವರು ಸ್ಪಷ್ಟ ಪಡಿಸಿದ್ದಾರೆ.


ಕ್ಷೇತ್ರದ ಸಂಸದನಾಗಿ ನನ್ನ ಜವಾಬ್ದಾರಿಯ ಪೂರ್ಣ ಅರಿವಿದೆ. ಜಿಲ್ಲೆಯ ಶಾಂತಿ ಕಾಪಾಡುವುದು ನಮ್ಮೆಲ್ಲರ ಹೊಣೆಗಾರಿಕೆ. ಅದೇ ರೀತಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ. ಕಾರ್ತಿಕ್‌ರಾಜ್ ಹತ್ಯೆ ಪ್ರಕರಣದ ಆರೋಪಿಗಳನ್ನು ಬಂಧಿಸಿ ಎನ್ನುವುದಷ್ಟೇ ನಮ್ಮ ಆಗ್ರಹ. ನ್ಯಾಯ ಸಿಗದಿದ್ದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೋರಾಟ ಅನಿವಾರ್ಯ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X