ಸು.ಕೋರ್ಟ್ ಆವರಣದಲ್ಲೇ ಗುಂಡು ಹಾರಿಸಿಕೊಂಡು ಕಾನ್‌ಸ್ಟೇಬಲ್ ಆತ್ಮಹತ್ಯೆ
ಹೊಸದಿಲ್ಲಿ,ಜ.2: ಸುಪ್ರೀಂಕೋರ್ಟ್‌ನಲ್ಲಿ ಕರ್ತವ್ಯದಲ್ಲಿ ನಿಯೋಜನೆಗೊಂಡಿದ್ದ ಪೊಲೀಸ್ ಕಾನ್‌ಸ್ಟೇಬಲ್ ಒಬ್ಬಾತ ಸೋಮವಾರ ನ್ಯಾಯಾಲಯದ ಆವರಣದಲ್ಲೇ ಸರ್ವಿಸ್ ರಿವಾಲ್ವರ್‌ನಿಂದ ತನಗೆ ತಾನೇ ಗುಂಡಿಕ್ಕಿಕೊಂಡು ಆತ್ಮಹತ್ಯೆ ಗೈದಿದ್ದಾನೆ. ಮೃತನನ್ನು ಹೆಡ್‌ಕಾನ್‌ಸ್ಟೇಬಲ್ ಚಾಂದ್‌ಪಾಲ್ ಎಂದು ಗುರುತಿಸಲಾಗಿದ್ದು, ಆತ ಬೆಳಗ್ಗೆ 8:15ರ ವೇಳೆಗೆ ತನ್ನ ತಲೆಗೆ ಗುಂಡುಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತನ ಆತ್ಮಹತ್ಯೆಗೆ ಕಾರಣವೇನೆಂದು ತಿಳಿದುಬಂದಿಲ್ಲವೆಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Next Story





