Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಚಿವ ಮಹದೇವ ಪ್ರಸಾದ್ ರವರ ವ್ಯಕ್ತಿ...

ಸಚಿವ ಮಹದೇವ ಪ್ರಸಾದ್ ರವರ ವ್ಯಕ್ತಿ ಪರಿಚಯ

ವಾರ್ತಾಭಾರತಿವಾರ್ತಾಭಾರತಿ3 Jan 2017 1:44 PM IST
share
ಸಚಿವ ಮಹದೇವ ಪ್ರಸಾದ್ ರವರ ವ್ಯಕ್ತಿ ಪರಿಚಯ

ಎಚ್.ಎಸ್ ಮಹದೇವ ಪ್ರಸಾದ್: (ಜನನ 5-8-1958 ರಿಂದ ಮರಣ: 3-1-2017) 

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಹಾಲಹಳ್ಳಿಯವರಾದ ಎಚ್.ಎಸ್ ಮಹದೇವಪ್ರಸಾದ್ ಅವರು ರಾಜ್ಯಶಾಸ್ತ್ರ ಪದವೀಧರರು. ವೃತ್ತಿಯಿಂದ ಕೃಷಿಕರಾಗಿದ್ದರು.  ರಾಜಕೀಯ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ತಮ್ಮನ್ನು ಸಕ್ರೀಯವಾಗಿ ತೊಡಗಿಸಿ ಕೊಂಡಿದ್ದರು.  

ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರವನ್ನು 1994 ರಿಂದ 2013 ರವರೆಗೆ ಸತತ 5 ಬಾರಿ ಪ್ರತಿನಿಧಿಸಿ ವಿಜಯ ಪತಾಕೆಯನ್ನು ತನ್ನಲ್ಲೇ ಇರಿಸಿಕೊಂಡ ಹೆಗ್ಗಳಿಕೆ ಇವರದ್ದು. ಇದಕ್ಕೂ ಮುನ್ನ 1985 ಹಾಗೂ 1989 ರ ವಿಧಾನಸಭಾ ಚುನಾವಣೆಯಲ್ಲೂ ಗುಂಡ್ಲುಪೇಟೆ ಕ್ಷೇತ್ರದಿಂದ ಸ್ಪರ್ಧಿಸಿದ್ದರು.  2004ರಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾಗಿ ಸೇವೆ ಸಲ್ಲಿಸಿದರು.  2007ರಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವರಾಗಿ ಸೇವೆ ಸಲ್ಲಿಸಿದರು. 

ಪ್ರಸ್ತುತ ಸಿದ್ದರಾಮಯ್ಯ ನೇತೃತ್ವ ಸರಕಾರದಲ್ಲಿ ಸಹಕಾರ ಮತ್ತು ಸಕ್ಕರೆ ಸಚಿವರಾಗಿ ನೇಮಕಗೊಂಡ ಮಹದೇವ ಪ್ರಸಾದ್ ಅವರು ಸಹಕಾರ ಕ್ಷೇತ್ರವನ್ನು ಬಲಪಡಿಸಲು ಹಾಗೂ ಕಬ್ಬು ಬೆಳೆಗಾರರಿಗೆ ಉತ್ತಮ ಬೆಲೆ ದೊರಕಿಸಲು ಸತತವಾಗಿ ಶ್ರಮಿಸಿದರು.ರೈತರ ಬೆನ್ನೆಲುಬಿನಂತಿರುವ ಸಹಕಾರ ಕ್ಷೇತ್ರದಲ್ಲಿ ಮಹತ್ವದ ಉಪಕ್ರಮಗಳ ಮೂಲಕ ಅನ್ನದಾತನ ಸಂಕಷ್ಟಕ್ಕೆ ಸ್ಪಂದಿಸಿದರು. ಇವರ ಅವಧಿಯಲ್ಲಿ,

ಇಡೀ ದೇಶದಲ್ಲೇ ಮೊದಲ ಬಾರಿಗೆ ಶೂನ್ಯ ಬಡ್ಡಿ ದರದಲ್ಲಿ 3 ಲಕ್ಷ ರೂ.ಗಳವರೆಗಿನ ಕೃಷಿ ಸಾಲವನ್ನು ನೀಡಲಾಯಿತು. 

2015-16ನೇ ಸಾಲಿನಲ್ಲಿ 10 ಸಾವಿರ ಕೋಟಿ ರೂ.ಗಳ ಸಾಲವನ್ನು ಶೂನ್ಯ ಬಡ್ಡಿ ದರದಲ್ಲಿ ಸುಮಾರು 23 ಲಕ್ಷ ರೈತರಿಗೆ ನೀಡುವ ಗುರಿ ಮೀರಿದ ಸಾಧನೆಯನ್ನು ಸಹಕಾರ ಇಲಾಖೆ ಮಾಡಿದೆ. ಇದು ರೈತರ ಅಭ್ಯುದಯದ ಕುರಿತ ಅವರ ಬದ್ಧತೆಗೆ ಸಾಕ್ಷಿ.

ರಾಜ್ಯದ ಪ್ರಾಥಮಿಕ ಭೂ ಅಭಿವೃದ್ಧಿ ಬ್ಯಾಂಕ್‌ಗಳಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸದಸ್ಯರು ಪಡೆದ ಅವಧಿ ಸಾಲ ವಿವಿಧ ಕಾರಣಗಳಿಗಾಗಿ ಸುಸ್ತಿಯಾಗಿದ್ದವರ 32 ಕೋಟಿ ರೂ.ಗಳ ಸಾಲವನ್ನು ಮನ್ನಾ ಮಾಡಲಾಯಿತು.

ಅತ್ಯಂತ ಜನಪ್ರಿಯವಾಗಿರುವ ಯಶಸ್ವಿನಿ ಯೋಜನೆಯನ್ನು ನಗರ ಪ್ರದೇಶಗಳಿಗೂ ವಿಸ್ತರಿಸಲಾಯಿತು.

ಸಮಾಜದಲ್ಲಿ ನಿರ್ಲಕ್ಷ್ಯಕ್ಕೊಳಗಾಗಿರುವವರ ಆರ್ಥಿಕ ಬೆಳವಣಿಗೆಗೆ ಅನುಕೂಲವಾಗುವಂತೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು, ವಿಕಲಚೇತನರು, ಮಹಿಳೆಯರು ಹಾಗೂ ಬಿಪಿಎಲ್ ಕುಟುಂಬದ ತಲಾ ಒಬ್ಬ ಸದಸ್ಯರಿಗೆ ಸಹಕಾರ ಸಂಘಗಳ ಸದಸ್ಯತ್ವ ನೋಂದಣಿಯನ್ನು ಮಾಡಲಾಯಿತು.

ಸಕ್ಕರೆ ಕಾರ್ಖಾನೆಗಳು ಕಬ್ಬು ಬೆಳೆಗಾರರಿಗೆ ನ್ಯಾಯಯುತ ಬೆಲೆ ಒದಗಿಸುವಂತೆ ಮಾಡಲು ಸಚಿವರು ಸತತವಾಗಿ ಶ್ರಮಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X