ಸಂಸದ ನಳಿನ್ ರ ವಿರುದ್ಧ ಎಫ್ ಐ ಆರ್ ದಾಖಲು

ಕೊಣಾಜೆ, ಜ.3 : ಪ್ರಚೋದನಾತ್ಮಕ ಭಾಷಣ ಮಾಡಿದ ಮಂಗಳೂರು ಸಂಸದ ನಳಿನ್ ಕುಮಾರ್ ವಿರುದ್ಧ ಕೋರ್ಟ್ ಸೂಚನೆ ಮೇರೆಗೆ ಎಫ್ ಐ ಆರ್ ದಾಖಲಾಗಿದೆ ಎಂದು ತಿಳಿದು ಬಂದಿದೆ.
ಸಂಸದರ ವಿರುದ್ಧ ಕೊಣಾಜೆ ಠಾಣೆಯಲ್ಲಿ 2 ಪ್ರತ್ಯೇಕ ದೂರು ದಾಖಲಾಗಿತ್ತು.
ಈ ಬಗ್ಗೆ ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದು , ನ್ಯಾಯಾಲಯದ ಸೂಚನೆಯ ಪ್ರಕಾರ ನಡೆದುಕೊಳ್ಳುವುದಾಗಿ ಕಮೀಷನರ್ ಹೇಳಿದ್ದರು.
ಇದೀಗ ನ್ಯಾಯಾಲಯದ ಸೂಚನೆ ಮೇರೆಗೆ ಕೊಣಾಜೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ ಎಂದು ತಿಳಿದು ಬಂದಿದೆ.
ಜ. 1 ರಂದು ಕಾರ್ತಿಕ್ ರಾಜ್ ಕೊಲೆ ಪ್ರಕರಣದ ತ್ವರಿತ ತನಿಖೆಗೆ ಆಗ್ರಹಿಸಿ ಕೊಣಾಜೆಯಲ್ಲಿ ನಡೆಸಿದ ಪ್ರತಿಭಟನಾ ಸಭೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ‘ ಕೊಲೆಗಾರರನ್ನು 10 ದಿನಗಳೊಳಗೆ ಬಂಧಿಸದಿದ್ದರೆ ಜಿಲ್ಲೆಗೆ ಬೆಂಕಿ ಬೀಳುವ ಸಾಧ್ಯತೆ ಇದೆ ‘ ಎಂಬ ಪ್ರಚೋದನಾತ್ಮಕ ಹೇಳಿಕೆ ನೀಡಿದ್ದರು.
ಈ ಹೇಳಿಕೆಯ ವಿರುದ್ಧ ನಾನಾ ಕಡೆಯಿಂದಲೂ ಪ್ರತಿಭಟನೆ , ದೂರುಗಳು ದಾಖಲಾದ ನಂತರ ಎಚ್ಚೆತ್ತ ಸಂಸದರು ಬಳಿಕ ತನ್ನ ಹೇಳಿಕೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದರು .
Next Story





