Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿದ್ಯಾರ್ಥಿಗಳ ಧ್ವನಿಯನ್ನು ದಮನಿಸಲು...

ವಿದ್ಯಾರ್ಥಿಗಳ ಧ್ವನಿಯನ್ನು ದಮನಿಸಲು ಯತ್ನ: ಎಸ್ ಐ ಓ ದ.ಕ. ಜಿಲ್ಲಾಧ್ಯಕ್ಷ ತಲ್ಹಾ ಇಸ್ಮಾಯೀಲ್

ವಾರ್ತಾಭಾರತಿವಾರ್ತಾಭಾರತಿ3 Jan 2017 10:37 PM IST
share
ವಿದ್ಯಾರ್ಥಿಗಳ ಧ್ವನಿಯನ್ನು ದಮನಿಸಲು ಯತ್ನ: ಎಸ್ ಐ ಓ ದ.ಕ. ಜಿಲ್ಲಾಧ್ಯಕ್ಷ ತಲ್ಹಾ ಇಸ್ಮಾಯೀಲ್

ಬಂಟ್ವಾಳ, ಜ.3 : ಇಂದು ನಮ್ಮ ದೇಶದಲ್ಲಿ ತಮಗಾಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತಿದರೆ ಅದನ್ನು ಅಪರಾಧವಾಗಿ ಪರಿಗಣಿಸುತ್ತಿರುವ ಅಧಿಕಾರದಲ್ಲಿರುವ ಸರಕಾರ ಹಾಗೂ ಕೆಲ ಸ್ಥಾಪಿತ ಹಿತಾಸಕ್ತಿಗಳು, ಅದನ್ನು ನೆಪವಾಗಿಟ್ಟುಕೊಂಡು ವಿದ್ಯಾರ್ಥಿಗಳ ಧ್ವನಿಯನ್ನು ಅಡಗಿಸಲು ವ್ಯವಸ್ಥಿತವಾಗಿ ಷಡ್ಯಂತ್ರ ರೂಪಿಸಲಾಗುತ್ತಿದೆ ಎಂದು ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ (ಎಸ್ ಐ ಓ) ದ.ಕ‌.‌ ಜಿಲ್ಲಾಧ್ಯಕ್ಷ ತಲ್ಹಾ ಇಸ್ಮಾಯೀಲ್ ತಿಳಿಸಿದರು.

ಅವರು ದೆಹಲಿಯ ಜವಾಹರ್ ಲಾಲ್ ನೆಹರೂ ವಿವಿಯ ವಿದ್ಯಾರ್ಥಿಯಾದ  ನಜೀಬ್ ಅಹ್ಮದ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬಂಟ್ವಾಳ ತಾಲೂಕು ಎಸ್ ಐ‌ ಓ ವತಿಯಿಂದ ಕೈಕಂಬ ಜಂಕ್ಷನ್ ಹಾಗೂ ಬಿ.ಸಿ.ರೋಡ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆ ಹಾಗೂ ಪ್ರಾತ್ಯಕ್ಷಿಕೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

ನಜೀಬ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಲಿಘಢ್ ಮುಸ್ಲಿಂ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ರೈಲು ರೂಕೋ ಪ್ರತಿಭಟನೆ ನಡೆಸಿದರೆಂಬ ಕಾರಣಕ್ಕಾಗಿ ಬಂಧಿಸಲಾಯಿತು. ನ್ಯಾಯಯುತ ಬೇಡಿಕೆಯನ್ನು ಪೂರೈಸಲು ಆಗ್ರಹಿಸಿ ಪ್ರತಿಭಟನೆ ಮಾಡಿದ ಜೆಎನ್ ಯು ವಿನ ಹಲವು ವಿದ್ಯಾರ್ಥಿಗಳನ್ನು ಕುಲಪತಿ ಅಮಾನತು ಮಾಡಿದ್ದಾರೆ. ಇದನ್ನೆಲ್ಲಾ ಗಮನಿಸುವಾಗ ವಿದ್ಯಾರ್ಥಿಗಳ ಮೇಲೆ ನಡೆಯುವ ಯಾವುದೇ ರೀತಿಯ ದೌರ್ಜನ್ಯ, ಹಿಂಸೆಗಳನ್ನು ಪ್ರಶ್ನಿಸಿಬಾರದೆಂದು ಪರೋಕ್ಷವಾಗಿ ಎಚ್ಚರಿಕೆ ನೀಡುತ್ತಿರುವ ಸರಕಾರವು, ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ವಿದ್ಯಾರ್ಥಿಗಳ ಬಗ್ಗೆ ಯಾವುದೇ ಕಾಳಜಿ ವಹಿಸದವರು ಕುಲಪತಿಯಂತಹ ಸ್ಥಾನಕ್ಕೆ ಅರ್ಹರಲ್ಲ. ಅವರು ಆ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಟೀ-ಶರ್ಟ್ ನಲ್ಲಿ ಪ್ರಾತ್ಯಕ್ಷಿಕೆ:

ಇದೇ ವೇಳೆ ಎಸ್ ಐ ಓ ಕಾರ್ಯಕರ್ತರು ಟೀ-ಶರ್ಟಿನಲ್ಲಿ Again We Ask Where Is Najeeb? Bring Back Najeeb ಎಂಬ ಅಕ್ಷರಗಳ ಪ್ರಾತ್ಯಕ್ಷಿಕೆಯು ಕೈಕಂಬ ಜಂಕ್ಷನ್ ಹಾಗೂ ಬಿ.ಸಿ.ರೋಡ್ ನಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಎಸ್ ಐ ಓ‌ ಪಾಣೆಮಂಗಳೂರು ಶಾಖೆಯ ಅಧ್ಯಕ್ಷ ತಮೀಝ್ ಅಲಿ ಕಾರಾಜೆ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X