ಯುವತಿಗೆ ಲೈಂಗಿಕ ಕಿರುಕುಳ: ಇಬ್ಬರ ಸೆರೆ
ಉಡುಪಿ, ಜ.3: ಯುವತಿಯೊಬ್ಬಳನ್ನು ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಇಬ್ಬರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಜ.2ರಂದು ಉತ್ತರ ಕರ್ನಾಟಕ ಮೂಲದ ಪಡುಬಿದ್ರಿ ನಿವಾಸಿಯಾಗಿ ರುವ 18 ವರ್ಷ ವಯಸ್ಸಿನ ಯುವತಿಯೊಬ್ಬಳನ್ನು ಕಾರಿನಲ್ಲಿ ಅಪಹರಿಸಿದ ಉತ್ತರ ಕರ್ನಾಟಕ ಮೂಲದ ಇಬ್ಬರು ಯುವಕರು, ಮಲ್ಪೆ ಸಮೀಪದ ತೊಟ್ಟಂ ಎಂಬಲ್ಲಿ ಆಕೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರೆನ್ನಲಾಗಿದೆ.
ಸ್ಥಳೀಯರು ಇದನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ಯುವತಿಯನ್ನು ರಕ್ಷಿಸಿ ದ್ದಾರೆ. ಆಕೆಯನ್ನು ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸ ಲಾಗಿದೆ.
ಈ ಬಗ್ಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





