ಬುಹಾರಿ ಸಮೂಹದ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆಯ ದಾಳಿ

ಚೆನ್ನೈ,ಜ.4: ಚೆನ್ನೈ, ಹೈದರಾಬಾದ್ ಮತ್ತು ಬೆಂಗಳೂರುಗಳಲ್ಲಿರುವ ಬುಹಾರಿ ಉದ್ಯಮ ಸಮೂಹದ ಕಚೇರಿಗಳ ಮೇಲೆ ಇಂದು ದಾಳಿಯನ್ನು ನಡೆಸಿರುವ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ವ್ಯಾಪಕ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
50ಕ್ಕೂ ಅಧಿಕ ಸ್ಥಳಗಳಲ್ಲಿ ದಾಳಿಗಳು ನಡೆದಿದ್ದು, 500ಕ್ಕೂ ಅಧಿಕ ತೆರಿಗೆ ಅಧಿಕಾರಿಗಳು ಶೋಧ ಕಾರ್ಯಾಚರಣೆಗಳಲ್ಲಿ ತೊಡಗಿಕೊಂಡಿದ್ದಾರೆ ಎಂದು ಹಿರಿಯ ಅಧಿಕಾರಿ ಯೋರ್ವರು ಸುದ್ದಿಗಾರರಿಗೆ ತಿಳಿಸಿದರು.
ಬುಹಾರಿ ಸಮೂಹವು ಚಿನ್ನದ ವ್ಯಾಪಾರ, ರಿಯಲ್ ಎಸ್ಟೇಟ್, ಕಟ್ಟಡ ನಿರ್ಮಾಣ ಮತ್ತು ಉಷ್ಣ ವಿದ್ಯುತ್ ಉದ್ಯಮಗಳನ್ನು ನಡೆಸುತ್ತಿದೆ ಎಂದು ತೆರಿಗೆ ಅಧಿಕಾರಿಗಳು ತಿಳಿಸಿದ್ದಾರೆ.
Next Story





