ಕದ್ರಿ ಸಂಗೀತ ಕಾರಂಜಿಗೆ ಹೆಚ್ಚುವರಿ ಅನುದಾನ : ಶಾಸಕ ಲೋಬೊ

ಮಂಗಳೂರು, ಜ.4: ಕದ್ರಿ ಉದ್ಯಾನವನದಲ್ಲಿ 5 ಕೋ.ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಸಂಗೀತ ಕಾರಂಜಿ ನಿರ್ಮಾಣಕ್ಕೆ ಇನ್ನೂ ಹೆಚ್ಚುವರಿಯಾಗಿ 50 ಲಕ್ಷ ರೂ.ವನ್ನು ವಿನಿಯೋಗಿಸಲಾಗುವುದು ಎಂದು ಶಾಸಕ ಜೆ.ಆರ್.ಲೋಬೊ ತಿಳಿಸಿದರು.
ಕದ್ರಿಯಲ್ಲಿ ನಿರ್ಮಾಣವಾಗುತ್ತಿರುವ ಸಂಗೀತ ಕಾರಂಜಿಯನ್ನು ವೀಕ್ಷಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.
ಉದ್ಯಾನವನದ ಎಲ್ಲ ಕೆಲಸಗಳನ್ನೂ ಪೂರ್ಣಗೊಳಿಸುವಂತೆ ಸೂಚಿಸಿದ ಶಾಸಕ ಲೋಬೊ, ಗಣರಾಜ್ಯೋತ್ಸವದ ಸಂದರ್ಭ ಸಾರ್ವಜನಿಕರ ವೀಕ್ಷಣೆಗೆ ಒದಗಿಸಬೇಕು. ವಿದೇಶಿ ಪ್ರವಾಸಿಗರನ್ನು ಆಕರ್ಷಿಸುವಂತೆ ಅಭಿವೃದ್ಧಿಪಡಿಸಬೇಕು ಎಂದರು.
ಮುಡಾ ಅಧ್ಯಕ್ಷ ಸುರೇಶ್ ಬಲ್ಲಾಳ್, ಮುಡಾ ಆಯುಕ್ತ ಶ್ರೀಕಾಂತ, ಕಾರ್ಪೊರೇಟರ್ ರಾಧಾಕೃಷ್ಣ, ಅರುಣ್ ಕುವೆಲ್ಲೊ, ಕೆಎಸ್ಸಾರ್ಟಿಸಿ ನಿರ್ದೇಶಕ ಟಿ.ಕೆ.ಸುಧೀರ್, ಗುತ್ತಿಗೆದಾರ ಪ್ರಭಾಕರ್ ಯೆಯ್ಯಿಡಿ, ಮೋಹನ್ ಶೆಟ್ಟಿ, ನೆಲ್ಸನ್ ಮತ್ತಿತರರಿದ್ದರು.
Next Story





