ಕಾಂಗ್ರೆಸ್ ನಿಂದ ಸ್ಪರ್ಧಿಸಲಿದ್ದಾರೆ ನವಜೋತ್ ಸಿಂಗ್ ಸಿಧು!

ಅಮೃತಸರ,ಜ.4: ತನ್ನ ಪತಿ ಹಾಗೂ ಮಾಜಿ ಬಿಜೆಪಿ ಸಂಸದ ನವಜೋತ್ ಸಿಂಗ್ ಸಿಧು ಅವರು ಶೀಘ್ರವೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಮತ್ತು ಅಮೃತಸರ(ಪೂರ್ವ) ಕ್ಷೇತ್ರದಿಂದ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ಡಾ.ನವಜೋತ್ ಕೌರ್ ಸಿಧು ಅವರು ಬಧವಾರ ಖಚಿತಪಡಿಸಿದರು.
ಸಿಧು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಅಮರಿಂದರ್ ಸಿಂಗ್ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಕಾಂಗ್ರೆಸಿನ ಉನ್ನತ ನಾಯಕರೊಂದಿಗೆ ಈಗಾಗಲೇ ಹಲವಾರು ಸುತ್ತುಗಳ ಮಾತುಕತೆಗಳು ನಡೆದಿವೆ ಎಂದು ಅವರು ತಿಳಿಸಿದರು.
ಪಂಜಾಬ್‌ನಲ್ಲಿ ಫೆ.4ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.
Next Story





