Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ​ಮಲೆನಾಡಿನಲ್ಲಿ ಬರಗಾಲದ ಭೀಕರ ಕರಿಛಾಯೆ

​ಮಲೆನಾಡಿನಲ್ಲಿ ಬರಗಾಲದ ಭೀಕರ ಕರಿಛಾಯೆ

1,987 ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ!

ವಾರ್ತಾಭಾರತಿವಾರ್ತಾಭಾರತಿ4 Jan 2017 10:53 PM IST
share
​ಮಲೆನಾಡಿನಲ್ಲಿ ಬರಗಾಲದ ಭೀಕರ ಕರಿಛಾಯೆ

ಬಿ. ರೇಣುಕೇಶ್
ಶಿವಮೊಗ್ಗ, ಜ. 4: ಈ ಬಾರಿ ಮಲೆನಾಡಿನಲ್ಲಿ ಮುಂಗಾರು ಮಳೆ ಸಹಿತ ಹಿಂಗಾರು ಮಳೆಯೂ ಕೈಕೊಟ್ಟಿರುವುದರ ಬೆನ್ನಲ್ಲೇ, ಅಂತರ್ಜಲದ ಮಟ್ಟ ಗಂಭೀರ ಸ್ವರೂಪದಲ್ಲಿ ಕುಸಿಯಲಾರಂಭಿಸಿದೆ. ಇನ್ನೊಂದೆಡೆ ಕೆರೆಕಟ್ಟೆ, ನದಿತೊರೆಗಳಲ್ಲಿಯೂ ನೀರಿನ ಪ್ರಮಾಣ ಕಡಿಮೆಯಾಗಲಾರಂಭಿಸಿದೆ. ಹಲವೆಡೆ ಜನ-ಜಾನುವಾರುಗಳು ಕುಡಿಯುವ ನೀರಿಲ್ಲದೆ ಪರಿತಪಿಸುವಂತಾಗಿದ್ದು, ಇಡೀ ಮಲೆನಾಡಿನಾದ್ಯಂತ ಭೀಕರ ಬರಗಾಲದ ಕರಿಛಾಯೆ ಆವರಿಸಿದೆ.


ಜಿಲ್ಲೆಯ ಹಲವು ಗ್ರಾಮೀಣ ಪ್ರದೇಶಗಳಲ್ಲಿ ಬೇಸಿಗೆ ಆರಂಭಕ್ಕೂ ಮುನ್ನವೇ, ಕುಡಿಯುವ ನೀರು ಪೂರೈಕೆ ಮಾಡುವ ಜಲಮೂಲಗಳ ಅಂತರ್ಜಲದ ಮಟ್ಟ ತೀವ್ರ ಪ್ರಮಾಣದಲ್ಲಿ ಕುಸಿಯಲಾರಂಭಿಸಿದೆ. ಬೋರ್‌ವೆಲ್‌ಗಳು, ಕೆರೆಕಟ್ಟೆಗಳು ನೀರಿಲ್ಲದೆ ಬರಿದಾಗಲಾರಂಭಿಸಿವೆ.

ಈಗಾಗಲೇ ಹಲವು ಗ್ರಾಮಗಳಲ್ಲಿ ಜೀವಜಲಕ್ಕೆ ತೀವ್ರ ಸ್ವರೂಪದ ತತ್ವಾರ ಎದುರಾಗಿದೆ. ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಮೂಲಗಳು ಹೇಳುವ ಪ್ರಕಾರ, ಜಿಲ್ಲೆಯಲ್ಲಿ ಸರಿಸುಮಾರು 1,987 ಗ್ರಾಮಗಳಲ್ಲಿ ವಿವಿಧ ಕಾರಣಗಳಿಂದ ಕುಡಿಯುವ ನೀರು ಸಮಸ್ಯೆ ಉದ್ಭವವಾಗಿದೆ.

ಇದರಲ್ಲಿ 354 ಗ್ರಾಮಗಳಲ್ಲಂತೂ ಜೀವ ಜಲದ ಸಮಸ್ಯೆ ತೀವ್ರವಾಗಿದೆ. ಸಮಸ್ಯೆಯಿರುವ ಗ್ರಾಮಗಳಲ್ಲಿ ಸ್ಥಳೀಯಾಡಳಿತಗಳು ಹೊಸ ಬೋರ್‌ವೆಲ್ ಕೊರೆಯಿಸುವ ಹಾಗೂ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುತ್ತಿವೆ ಎಂದು ಹೇಳುತ್ತಿವೆ. ಕುಡಿಯುವ ನೀರು ಸಮಸ್ಯೆ ಎದುರಾಗುವ ಗ್ರಾಮಗಳಲ್ಲಿ ತ್ವರಿತಗತಿಯಲ್ಲಿ ಸಮಸ್ಯೆ ಪರಿಹಾರಕ್ಕೆ ಅಗತ್ಯವಾದ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಜಿಲ್ಲಾಡಳಿತ ಹಾಗೂ ಜಿಪಂ ಆಡಳಿತ ಕೈಗೊಂಡಿದೆ.

ಸಿಆರ್‌ಎಫ್ ನಿಧಿ ಹಾಗೂ ಶಾಸಕರ ಅಧ್ಯಕ್ಷತೆಯಲ್ಲಿರುವ ಟಾಸ್ಕ್ ಫೋರ್ಸ್ ಸಮಿತಿಯಡಿ ಲಭ್ಯವಿರುವ ಅನುದಾನಗಳ ಬಳಕೆ ಮಾಡಿಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ. ಈಗಾಗಲೇ ಕುಡಿಯುವ ನೀರಿಗೆ ಸಂಬಂಧಿಸಿದಂತೆ 3.50 ಕೋಟಿ ರೂ.ಗಳಷ್ಟು ಅನುದಾನವನ್ನು ಕೂಡ ಬಿಡುಗಡೆ ಮಾಡಲಾಗಿದೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಮೂಲಗಳು ತಿಳಿಸುತ್ತವೆ.

ಸಂಕಷ್ಟ: ಮುಂಗಾರು ಹಾಗೂ ಹಿಂಗಾರು ಮಳೆಯ ಕೊರತೆಯಿಂದ ಜಿಲ್ಲೆಯ ಶೇ. 99 ರಷ್ಟು ಕೆರೆಕಟ್ಟೆಗಳು ಈ ಬಾರಿ ಪೂರ್ಣ ಪ್ರಮಾಣದಲ್ಲಿ ತುಂಬಿಲ್ಲ. ಶೇ. 50 ರಷ್ಟು ಕೆರೆಗಳಲ್ಲಿ ಅರ್ಧದಷ್ಟು ಭರ್ತಿಯಾಗಿಲ್ಲ. ಮತ್ತೊಂದೆಡೆ ಚಳಿಗಾಲದ ಅವಧಿಯಲ್ಲಿಯೇ ತಾಪಮಾನದ ಪ್ರಮಾಣದಲ್ಲಿ ತೀವ್ರ ಏರಿಕೆ ಕಂಡುಬರುತ್ತಿರುವುದರಿಂದ ಪ್ರಸ್ತುತ ನೀರಿರುವ ಕೆರೆಕಟ್ಟೆಗಳು ಬರಿದಾಗಲಾರಂಭಿಸಿವೆ. ಬಾವಿ, ಬೋರ್‌ವೆಲ್‌ಗಳಲ್ಲಿಯೂ ಅಂತರ್ಜಲ ಮಟ್ಟ ಕುಸಿಯುತ್ತಿದೆ ಎಂದು ಜಿಪಂ ಮೂಲಗಳು ಹೇಳುತ್ತವೆ.

ನಿಜಕ್ಕೂ ಈ ಬಾರಿಯ ಬೇಸಿಗೆ ಸವಾಲಿನದ್ದಾಗಿದೆ. ಮಲೆನಾಡಿನ ಹಲವೆಡೆ ತೀವ್ರ ಸ್ವರೂಪದ ಕುಡಿಯುವ ನೀರಿನ ಹಾಹಾಕಾರ ತಲೆದೋರುವುದು ನಿಶ್ಚಿತವಾಗಿದೆ. ಅಂತರ್ಜಲದ ಪ್ರಮಾಣ ಕೂಡ ಗಂಭೀರ ಪ್ರಮಾಣದಲ್ಲಿ ಕುಸಿಯುತ್ತಿರುವುದು, ತಾಪಮಾನ ಹೆಚ್ಚುತ್ತಿರುವುದನ್ನು ಗಮನಿಸಿದರೆ ಭವಿಷ್ಯದ ದಿನಗಳು ಹಲವು ಗ್ರಾಮಗಳ ಪಾಲಿಗೆ ಘನಘೋರವಾಗಿರಲಿವೆ. ಬೇಸಿಗೆಯಲ್ಲಿ ಉತ್ತಮ ಮಳೆಯಾದರೆ ಈ ಎಲ್ಲ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ.

ಇಲ್ಲದಿದ್ದರೆ ಬರಗಾಲ ಪರಿಸ್ಥಿತಿಯಿಂದ ಎದುರಾಗುವ ಸಮಸ್ಯೆಗಳನ್ನು ಮಲೆನಾಡಿಗರು ಎದುರಿಸುವುದು ಅನಿವಾರ್ಯವಾಗಲಿದೆ ಎಂದು ಹೆಸರು ಬಹಿರಂಗಪಡಿಸಲಿಚ್ಛಿಸದ ಜಿಪಂ.ನ ಹಿರಿಯ ಅಧಿಕಾರಿಯೋರ್ವರು ಹೇಳುತ್ತಾರೆ.

ಗುಳೆ: ಸರ್ವೇಸಾಮಾನ್ಯವಾಗಿ ಬಯಲುಸೀಮೆಯಿಂದ ಮಲೆನಾಡಿಗೆ ಗುಳೆ ಬರುವವರ ಸಂಖ್ಯೆ ಹೆಚ್ಚಿತ್ತು. ಆದರೆ ಬಯಲುಸೀಮೆಯ ಪರಿಸ್ಥಿತಿ ಮಲೆನಾಡಿನಲ್ಲಿ ತಲೆದೋರುತ್ತಿರುವುದರಿಂದ ಮಲೆನಾಡಿಗರೇ ಬೇರೆಡೆ ಗುಳೆ ಹೋಗುವಂತಹ ಪರಿಸ್ಥಿತಿ ಸೃಷ್ಟಿಯಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ತೀವ್ರ ಬರಗಾಲದಿಂದ ತತ್ತರಿಸಿರುವ ಸೊರಬ ತಾಲೂಕಿನ ಹಲವೆಡೆ ಈಗಾಗಲೇ ನಾಗರಿಕರು ಬೇರೆಡೆ ಗುಳೆ ಹೋಗುತ್ತಿದ್ದಾರೆ.

ಚಳಿಗಾಲ ಆರಂಭಕ್ಕೂ ಮುನ್ನವೇ ಜಿಲ್ಲೆಯ ಹಲವು ಗ್ರಾಮೀಣ ಪ್ರದೇಶಗಳಲ್ಲಿ ನಾಗರಿಕರಿಗೆ ಕುಡಿಯುವ ನೀರು ಸಿಗದಂತಹ ಪರಿಸ್ಥಿತಿಯಿದೆ. ಇನ್ನ್ನು ಜಾನುವಾರುಗಳು, ವನ್ಯ ಪ್ರಾಣಿಗಳು, ಪಶುಪಕ್ಷಿಗಳ ಸ್ಥಿತಿ ಹೇಳತೀರದಾಗಿದೆ. ಮೂಕ ಪ್ರಾಣಿಗಳು ಕುಡಿಯುವ ನೀರಿಗೆ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಪ್ರತಿಯೊಂದು ಗ್ರಾಮದಲ್ಲಿ ಹಾಗೂ ಅರಣ್ಯ ಪ್ರದೇಶಗಳಲ್ಲಿ ನೀರಿನ ತೊಟ್ಟಿ ನಿರ್ಮಿಸಿ, ನೀರು ಪೂರೈಕೆ ಮಾಡುವ ವ್ಯವಸ್ಥೆ ಆರಂಭಿಸಬೇಕು ಎಂದು ಯುವಕ ಗುರುಚರಣ್ ಮನವಿ ಮಾಡುತ್ತಾರೆ. 


ಹೆಚ್ಚಾಗುತ್ತಿದೆಯೇ ಅರಣ್ಯ ನಾಶ?
ಜಿಲ್ಲೆಯಲ್ಲಿ ಪಶ್ಚಿಮಘಟ್ಟ, ಸಹ್ಯಾದ್ರಿ ಪರ್ವತ ಶ್ರೇಣಿಗಳು ಹಾದು ಹೋಗಿವೆ. ಹಲವು ಜೀವನದಿಗಳು ಹುಟ್ಟಿ ಹರಿಯುತ್ತವೆ. ಸಾವಿರಾರು ಕೆರೆಕಟ್ಟೆಗಳಿವೆ. ಇದೆಲ್ಲದರ ನಡುವೆಯೂ ಮಲೆನಾಡಿನಲ್ಲಿ ಸತತ ಎರಡು ವರ್ಷಗಳಿಂದ ಬರಗಾಲ ಪರಿಸ್ಥಿತಿ ಮುಂದುವರಿದಿದೆ. ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. ಕುಡಿಯುವ ನೀರಿಗೂ ತತ್ವಾರ ಎದುರಾಗುವಂತಾಗಿದೆ. ಇದಕ್ಕೆ ಮಲೆನಾಡಿನಲ್ಲಿ ಕಣ್ಮರೆಯಾಗುತ್ತಿರುವ ದಟ್ಟ ಅರಣ್ಯ ಪ್ರದೇಶ ಮುಖ್ಯ ಕಾರಣವಾಗಿದೆ. ಜಿಲ್ಲೆಯಲ್ಲಿ ಅರಣ್ಯದ ನಾಶ ಅವ್ಯಾಹತವಾಗಿ ನಡೆದಿದೆ. ಇದರ ಪರಿಣಾಮವನ್ನು ಮಲೆನಾಡಿಗರು ಎದುರಿಸುತ್ತಿದ್ದಾರೆ ಎಂದು ಪರಿಸರ ಪ್ರೇಮಿಗಳು ದೂರುತ್ತಾರೆ.

ಬೆ ೀಸಿಗೆ ಆರಂಭಕ್ಕೂ ಮುನ್ನವೇ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಹಾಹಾಕಾರ ಕಾಣಿಸಿಕೊಳ್ಳಲಾರಂಭಿಸಿದೆ. ಬೇಸಿಗೆಯಲ್ಲಿ ಮಳೆಯಾದರೆ ಕುಡಿಯುವ ನೀರಿನ ಸಮಸ್ಯೆಯಲ್ಲಿ ಕೊಂಚ ಪ್ರಮಾಣದಲ್ಲಿ ಸುಧಾರಣೆ ಕಂಡುಬರಲಿದೆ. ಇಲ್ಲದಿದ್ದರೆ ಪರಿಸ್ಥಿತಿ ಮತ್ತಷ್ಟು ಘನಘೋರವಾಗಲಿದೆ. ಹಲವು ಗ್ರಾಮಗಳಲ್ಲಿ ಹನಿ ಹನಿ ನೀರಿಗೂ ಪರಿದಾಡುವಂತಹ ಪರಿಸ್ಥಿತಿ ಸೃಷ್ಟಿಯಾಗಲಿದೆ. ಜಿ.ಪಂ.ನ ಹಿರಿಯ ಅಧಿಕಾರಿ


ಜಿಲ್ಲೆಯಲ್ಲಿ ಪ್ರಸ್ತುತ ಸರಿಸುಮಾರು 1,987 ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ ಕಾಣಿಸಿಕೊಂಡಿದೆ. ಇದರಲ್ಲಿ 354 ಗ್ರಾಮಗಳಲ್ಲಿ ಪರಿಸ್ಥಿತಿ ತೀವ್ರವಾಗಿದೆ. ಸಮಸ್ಯೆ ಪರಿಹಾರಕ್ಕೆ ಈಗಾಗಲೇ ಅಗತ್ಯ ಕ್ರಮಕೈಗೊಳ್ಳಲಾಗಿದೆ. ಕುಡಿಯವ ನೀರಿಗೆ ಸಂಬಂಧಿಸಿದ ಕಾಮಗಾರಿಗಳ ನಿರ್ವಹಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಅಗತ್ಯ ಅನುದಾನ ಕೂಡ ಬಿಡುಗಡೆ ಮಾಡಲಾಗಿದೆ.

ಎಂ.ಹರೀಶ್, ಕಾರ್ಯಪಾಲಕ ಅಭಿಯಂತರ ಕೆರೆಕಟ್ಟೆ, ಬಾವಿ, ನದಿತೊರೆಗಳು ನೀರಿಲ್ಲದೆ ಬರಿದಾಗುತ್ತಿರುವುದರಿಂದ ರೈತರು ಆತಂಕಿತರಾಗಿದ್ದು, ಅದರಲ್ಲಿಯೂ ತೋಟಗಳ ಮಾಲಕರು ದಿಕ್ಕು ಕಾಣದೆ ಕಂಗಲಾಗುವಂತೆ ಮಾಡಿದೆ.

ಈಗಲೇ ಜಮೀನಿನಲ್ಲಿರುವ ಬೋರ್‌ವೆಲ್, ಬಾವಿಗಳು ನೀರಿಲ್ಲದೆ ಬರಿದಾಗುತ್ತಿವೆ. ಕೆರೆಕಟ್ಟೆಗಳಲ್ಲಿಯೂ ನೀರಿಲ್ಲವಾಗಿದೆ. ಇದೆಲ್ಲವನ್ನು ಗಮನಿಸಿದರೆ ಬೇಸಿಗೆಯಲ್ಲಿ ತೋಟವನ್ನು ಸಂರಕ್ಷಣೆ ಮಾಡಿಕೊಳ್ಳುವುದು ಹೇಗೆಂಬ ಚಿಂತೆ ಕಾಡುವಂತಾಗಿದೆ. ಕುಮಾರ್, ರೈತ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X