Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ​ಬೋಪಣ್ಣ ಹತ್ಯೆ ಪ್ರಕರಣ: ನಾಲ್ವರಿಗೆ...

​ಬೋಪಣ್ಣ ಹತ್ಯೆ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ

ವಾರ್ತಾಭಾರತಿವಾರ್ತಾಭಾರತಿ4 Jan 2017 10:55 PM IST
share

ಮಡಿಕೇರಿ, ಜ.4: 2005ರಲ್ಲಿ ಜಿಲ್ಲಾ ಕೇಂದ್ರ ಮಡಿಕೇರಿಯನ್ನು ಬೆಚ್ಚಿ ಬೀಳಿಸಿದ್ದ ಎಂ.ಬಿ. ಬೋಪಣ್ಣ ಬರ್ಬರ ಹತ್ಯೆ ಪ್ರಕರಣದ ಆರೋಪ ಸಾಕ್ಷ್ಯಾಧಾರಗಳಿಂದ ದೃಢಪಟ್ಟಿದ್ದು, ನಗರದ ಒಂದನೆ ಹೆಚ್ಚುವರಿ ಜಿಲ್ಲಾ ಮತ್ತು ಸೇಷನ್ಸ್ ನ್ಯಾಯಾಲಯ ನಾಲ್ವರು ಆರೋಪಿಗಳಿಗೆ ಭಾರೀ ದಂಡ ಸಹಿತ ಕಠಿಣ ಜೀವಾವಧಿ ಶಿಕ್ಷೆ ವಿಧಿಸಿ ಬುಧವಾರ ಮಹತ್ವದ ತೀರ್ಪು ನೀಡಿದೆ.


ಕಾಲೂರು ಗ್ರಾಮದ ಟಿ.ಎ. ಮಹೇಶ, ಅವರ ಸಹೋದರ ಟಿ.ಎ. ಅರುಣ ಯಾನೆ ತಿಮ್ಮಯ್ಯ, ಪಿ.ಎಂ. ಮಹೇಶ ಹಾಗೂ ಕೆ.ಯು. ದಿನೇಶ ಎಂಬವರು ದಂಡ ಸಹಿತ ಶಿಕ್ಷೆಗೆ ಗುರಿಯಾದ ಅಪರಾಧಿಗಳಾಗಿದ್ದಾರೆ.
  ಕೊಲೆ ಮಾಡಿದ ಅಪರಾಧಕ್ಕಾಗಿ ಜೀವಾವಧಿ ಶಿಕ್ಷೆ, ತಲಾ 5 ಸಾವಿರ ರೂ. ದಂಡ, ಸಂಚು ಹೂಡಿ ಕೊಲೆ ಮಾಡಿದ್ದಕ್ಕಾಗಿ ತಲಾ 2 ಸಾವಿರ ರೂ. ದಂಡ, ಕಠಿಣ ಜೀವಾವಧಿ ಶಿಕ್ಷೆ , ಕೊಲೆ ಮಾಡಲು ಪ್ರಚೋದನೆ ನೀಡಿದ ಅಪರಾಧಕ್ಕಾಗಿ ಟಿ.ಎ. ಮಹೇಶ್‌ಗೆ ಜೀವಾವಧಿ ಶಿಕ್ಷೆ, 5 ಸಾವಿರ ರೂ. ದಂಡ, ಬಂದೂಕು ಕಾಯ್ದೆ ಉಲ್ಲಂಘಿಸಿದ್ದಕ್ಕಾಗಿ ಟಿ.ಎ. ಅರುಣನಿಗೆ 2 ಮತ್ತು 4 ವರ್ಷಗಳ ಕಠಿಣ ಸಜೆ, 4 ಸಾವಿರ ರೂ. ದಂಡ, ಬಂದೂಕು ಕಾಯ್ದೆ ಅಡಿಯ ಅಪರಾಧಕ್ಕಾಗಿ ಪಿ.ಎಂ. ಮಹೇಶನಿಗೆ 4 ವರ್ಷ ಕಠಿಣ ಸಜೆ ಹಾಗೂ 2 ಸಾವಿರ ರೂ. ದಂಡ ವಿಧಿಸಿದ್ದಾರೆ.


     ಪ್ರಕರಣದ ಮತ್ತೋರ್ವ ಆರೋಪಿ ಎಂ.ಎಸ್. ರವಿ ತನ್ನ ತಂದೆಗೆ ಸೇರಿದ ಕೋವಿಯನ್ನು ಕೊಲೆ ಮಾಡಿದ ಆರೋಪಿಗಳಿಗೆ ನೀಡಿದ ಅಪರಾಧಕ್ಕಾಗಿ ಶಿಕ್ಷೆಗೆ ಗುರಿಯಾಗಿದ್ದರೂ, ಈತನು ನ್ಯಾಯಾಂಗ ಬಂಧನದಲ್ಲಿದ್ದ ಮೂರು ತಿಂಗಳು 5 ದಿವಸಗಳನ್ನು ಶಿಕ್ಷೆಯೆಂದು ಪರಿಗಣಿಸಿದ್ದು, 2 ಸಾವಿರ ರೂ. ದಂಡ ವಿಧಿಸಿದೆ. ಸರಕಾರದ ಪರ ಸರಕಾರಿ ಅಭಿಯೋಜಕಿ ಎ. ಕೃಷ್ಣವೇಣಿ ವಾದ ಮಂಡಿಸಿದ್ದರು.


    ಘಟನೆಯ ವಿವರ: ಮಡಿಕೇರಿ ಚೈನ್‌ಗೇಟ್ ಬಳಿಯ ನಿವಾಸಿ ಎಂ.ಬಿ. ಬೋಪಣ್ಣ ಮತ್ತು ಕಾಲೂರಿನ ಟಿ.ಎ. ಮಹೇಶ ಎಂಬವರ ನಡುವೆ ಹಳೇ ವೈಷಮ್ಯವಿತ್ತು. 2000 ಇಸವಿಯಲ್ಲಿ ಮುತ್ತಾರ್ ಮುಡಿಸೇತುವೆ ಬಳಿ ಬೋಪಣ್ಣನು ತನ್ನ ಸಹಚರರೊಂದಿಗೆ ಸೇರಿಕೊಂಡು ಹರಿತವಾದ ಆಯುಧಗಳಿಂದ ಮಹೇಶನ ಮೇಲೆ ದಾಳಿ ನಡೆಸಿದ್ದ, ಈ ದ್ವೇಷಕ್ಕೆ ತಿರುಗಿ ಬಿದ್ದ ಆರೋಪಿಗಳು ಬೋಪಣ್ಣನ ಮನೆಯ ಸಮೀಪದ ಪೇಟೆಯೊಂದರಲ್ಲಿ ಬೋಪ್ಪಣ್ಣನ ಮೇಲೆ ಗುಂಡು ಹಾರಿಸಿ ಹತ್ಯೆಗೈದಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X