Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪತ್ರಿಕೆಯಲ್ಲಿ ವರದಿ ಮಾಡುವ ಬದಲು ಅಮಿತ್...

ಪತ್ರಿಕೆಯಲ್ಲಿ ವರದಿ ಮಾಡುವ ಬದಲು ಅಮಿತ್ ಶಾ ಗೆ ವರದಿ ಮಾಡಿದ ಪ್ರತಿಷ್ಠಿತ ಪತ್ರಿಕೆಯ ಸಂಪಾದಕ!

ವಾರ್ತಾಭಾರತಿವಾರ್ತಾಭಾರತಿ5 Jan 2017 4:08 PM IST
share
ಪತ್ರಿಕೆಯಲ್ಲಿ ವರದಿ ಮಾಡುವ ಬದಲು ಅಮಿತ್ ಶಾ ಗೆ ವರದಿ ಮಾಡಿದ ಪ್ರತಿಷ್ಠಿತ ಪತ್ರಿಕೆಯ ಸಂಪಾದಕ!

 ಹೊಸದಿಲ್ಲಿ,ಜ.5: ಪ್ರತಿಷ್ಠಿತ ಆಂಗ್ಲ ದೈನಿಕವೊಂದರ ಕಾರ್ಯ ನಿರ್ವಾಹಕ ಸಂಪಾದಕರು ತನ್ನ ಪತ್ರಿಕೆಯಲ್ಲಿ ವರದಿ ಮಾಡುವ ಬದಲು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರಿಗೆ ನೇರವಾಗಿ ವರದಿ ಮಾಡುತ್ತಿರುವುದನ್ನು ಆಂಗ್ಲ ನಿಯತಕಾಲಿಕವೊಂದು ಬಯಲಿಗೆಳೆದಿದೆ.

ಪ್ರಧಾನಿ ಕಚೇರಿಯು ದಿಲ್ಲಿಯ ಆಪ್ ಸರಕಾರದ ಮೇಲೆ ಹೇಗೆ ನಿಕಟ ನಿಗಾಯಿರಿಸಿದೆ ಎನ್ನುವ ಬಗ್ಗೆ ಪತ್ರಕರ್ತ ಅಕ್ಷಯ ದೇಶಮಾನೆ ಅವರು ಸಿದ್ಧಪಡಿಸಿರುವ ವರದಿಯನ್ನು ಆಂಗ್ಲ ಪಾಕ್ಷಿಕ ‘ಫ್ರಂಟ್‌ಲೈನ್ ’ ತನ್ನ ಇತ್ತೀಚಿನ ಸಂಚಿಕೆಯಲ್ಲಿ ಪ್ರಕಟಿಸಿದೆ. ಆಪ್ ಸರಕಾರ ಅಧಿಕಾರಕ್ಕೆ ಬಂದು ಒಂದು ತಿಂಗಳು ಕಳೆಯುವಷ್ಟರಲ್ಲಿಯೇ ಆರಂಭಗೊಂಡಿದ್ದ ಆಗಿನ ದಿಲ್ಲಿ ಉಪರಾಜ್ಯಪಾಲ್ ನಜೀಬ್ ಜಂಗ್ ಮತ್ತು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನಡುವಿನ ಹಗ್ಗಜಗ್ಗಾಟ ಸೇರಿದಂತೆ ಆಪ್ ಸರಕಾರದ ಮೇಲೆ ಕೇಂದ್ರವು ಹೇಗೆ ನಿಕಟ ನಿಗಾಯಿರಿಸಿದೆ ಎನ್ನುವುದನ್ನು ಬೆಳಕಿಗೆ ತರಲು ವರದಿಯು ಹಲವಾರು ಮಾಹಿತಿ ಹಕ್ಕು ಅರ್ಜಿಗಳನ್ನು ಬಳಸಿಕೊಂಡಿದೆ.

ಹಿಂದುಸ್ಥಾನ್ ಟೈಮ್ಸ್‌ನ ಕಾರ್ಯನಿರ್ವಾಹಕ ಸಂಪಾದಕ ಶಿಶಿರ್ ಗುಪ್ತಾ ಅವರು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಮತ್ತು ಪ್ರಧಾನಿ ಕಚೇರಿಯಲ್ಲಿ ವಿಶೇಷ ಕರ್ತವ್ಯಾ ಧಿಕಾರಿಯಾಗಿರುವ ಹಿರೇನ್ ಜೋಶಿ ಅವರಿಗೆ ಬರೆದಿರುವ ಇ-ಮೇಲ್ ಒಂದನ್ನು ವರದಿಯು ಬಹಿರಂಗಗೊಳಿಸಿದೆ. ‘ಕೇಂದ್ರದ ವಿರುದ್ಧ ಕೇಜ್ರಿವಾಲ್ ’ ಎಂಬ ಶೀರ್ಷಿಕೆಯ ಈ ಇ-ಮೇಲ್ ಪತ್ರವು ಕೇಜ್ರಿವಾಲ್‌ರಿಂದ ‘ಉಲ್ಲಂಘನೆಗಳ ’ 10 ಘಟನೆಗಳನ್ನು ಪಟ್ಟಿ ಮಾಡಿದೆ. ಗುಪ್ತಾ ಇವುಗಳನ್ನು ಶಾ ಆ್ಯಂಡ್ ಕಂಪನಿಗೆ ಏಕೆ ವರದಿ ಮಾಡುತ್ತಿದ್ದಾರೆ ಎನ್ನುವುದನ್ನು ಇಡೀ ಪತ್ರದಲ್ಲಿ ಎಲ್ಲೂ ಉಲ್ಲೇಖಿಸಲಾಗಿಲ್ಲ. ಶಾ ಮತ್ತು ಜೋಶಿ ಅವರಿಗೆ ಪ್ರಶ್ನಾವಳಿಗಳನ್ನೂ ಅದು ಒಳಗೊಂಡಿಲ್ಲ. ಅದೇನಾದರೂ ಇದ್ದರೆ ಕೇಜ್ರಿವಾಲ್‌ರ ‘ಉಲ್ಲಂಘನೆ ’ಗಳ ಬಗ್ಗೆ ಅವರಿಬ್ಬರ ಅಭಿಪ್ರಾಯವನ್ನು ಪಡೆಯಲು ಗುಪ್ತಾ ಬಯಸುತ್ತಿದ್ದಾರೆ ಎಂದಾದರೂ ವ್ಯಾಖ್ಯಾನಿಸಬಹುದಿತ್ತು ಎಂದು ದೇಶಮಾನೆ ಬರೆದಿದ್ದಾರೆ.

ಈ ಇಮೇಲ್ ಬಗ್ಗೆ ತ್ವರಿತ ಕ್ರಮವನ್ನು ಕೈಗೊಂಡ ಪ್ರಧಾನಿ ಕಚೇರಿಯು ಈ ಕುರಿತು ವಾಸ್ತವಾಂಶ ವರದಿಯನ್ನು ಐದು ದಿನಗಳಲ್ಲಿ ತನಗೆ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಆದೇಶಿಸಿತ್ತು ಎನ್ನುವುದು ಕುತೂಹಲ ಕೆರಳಿಸಿದೆ.

ಈ ವರದಿಗೆ ಟ್ವಿಟರ್‌ನಲ್ಲಿ ಸಾಕಷ್ಟು ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಗುಪ್ತಾ ಕೇಂದ್ರ ಸರಕಾರಕ್ಕೆ ಮಾಹಿತಿದಾರರಾಗಿದ್ದಾರೆಯೇ ಎಂದು ಕೆಲವರು ಪ್ರಶ್ನಿಸಿದ್ದರೆ, ಈ ವ್ಯಕ್ತಿ ತನ್ನ ಪತ್ರಿಕೆಗೆ ವರದಿ ಮಾಡುವ ಬದಲು ಅಮಿತ್ ಶಾ ಅವರಿಗೆ ವರದಿ ಮಾಡುತ್ತಿದ್ದಾರಲ್ಲ ಎಂದು ಹಲವರು ಅಚ್ಚರಿ ವ್ಯಕ್ತಪಡಿಸಿದ್ದಾರೆ.

The BJP has its own #RadiaTapes, with journalists reporting info straight to Amit Shah & Co. https://t.co/BHuhave0UT

— Pierre Fitter (@pierrefitter) January 5, 2017

Why is Executive Editor of HT sending reports about Delhi Govt to PMO? RTI application reveals detailed email reports @DeshmaneAkshay https://t.co/myidnnd5W3

— Saikat Datta (@saikatd) January 5, 2017

Documents reviewed by @DeshmaneAkshay includes an email from HT's Shishir Gupta to Amit Shah, PMO which seems more aprising than questioning

— Krishn Kaushik (@Krishn_) January 5, 2017

A brilliant story by @DeshmaneAkshay exposing how PMO spy tabs @AamAadmiParty Govt in Delhi through @htTweets Journalist https://t.co/TeTCstCRvS

— Tawqeer Hussain (@tawqeerhussain) January 5, 2017
share
ವಾರ್ತಾಭಾರತಿ
ವಾರ್ತಾಭಾರತಿ
Next Story
X