12 ಕೋ.ರೂ. ವೆಚ್ಚದಲ್ಲಿ ಉರ್ವ ಮಾರುಕಟ್ಟೆ ನಿರ್ಮಾಣ: ಜೆ.ಆರ್.ಲೋಬೊ

ಮಂಗಳೂರು, ಜ.5: ಸುಮಾರು 12 ಕೋ.ರೂ. ವೆಚ್ಚದಲ್ಲಿ ಉರ್ವ ಮಾರುಕಟ್ಟೆಯನ್ನು ನಿರ್ಮಿಸಲು ಉದ್ದೇಶಿಸಲಾಗಿದ್ದು, ಈಗ ಇರುವ ಮಾರುಕಟ್ಟೆಯನ್ನು ತಾತ್ಕಾಲಿಕ ಸ್ಥಳಕ್ಕೆ ಜ.14ರಂದು ವರ್ಗಾಯಿಸಲಾಗುವುದು ಎಂದು ಶಾಸಕ ಜೆ.ಆರ್.ಲೋಬೊ ತಿಳಿಸಿದರು.
ಉರ್ವದಲ್ಲಿ ತಾತ್ಕಾಲಿಕ ಮಾರುಕಟ್ಟೆ ಪ್ರದೇಶಕ್ಕೆ ಭೇಟಿ ನೀಡಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.
ಡಿಸೆಂಬರ್‌ನೊಳಗೆ ನೂತನ ಮಾರುಕಟ್ಟೆಯನ್ನು ಪೂರ್ಣಗೊಳಿಸಲಾಗುವುದು. ಶೀಘ್ರ ಕಾಮಗಾರಿ ಆರಂಭಿಸಲಿರುವುದಿಂದ ತಾತ್ಕಾಲಿಕ ಮಾರುಕಟ್ಟೆ ಸ್ಥಳಕ್ಕೆ ಸ್ಥಳಾಂತರಗೊಳ್ಳುವಂತೆ ವ್ಯಾಪಾರಸ್ಥರಲ್ಲಿ ವಿನಂತಿಸಿದರು.
ಈ ಸಂದರ್ಭ ಮುಡಾ ಅಧ್ಯಕ್ಷ ಸುರೇಶ್ ಬಲ್ಲಾಳ್, ಆಯುಕ್ತ ಶ್ರೀಕಾಂತ್, ಕಾರ್ಪೊರೇಟರ್ ರಾಧಾಕೃಷ್ಣ, ಕೆಎಸ್ಸಾರ್ಟಿಸಿ ನಿರ್ದೇಶಕ ಟಿ.ಕೆ.ಸುಧೀರ್, ಗುತ್ತಿಗೆದಾರ ಆಸೀಫ್ ಉಪಸ್ಥಿತರಿದ್ದರು.
Next Story





