Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಸಾಂತ್ವನದಲ್ಲಿ ನೊಂದ ಮಹಿಳೆಯರಿಗೆ...

‘ಸಾಂತ್ವನದಲ್ಲಿ ನೊಂದ ಮಹಿಳೆಯರಿಗೆ ಪೊಲೀಸರಿಂದ ಅಸಹಕಾರ’ : ಮಹಿಳೆ-ಮಕ್ಕಳ ಅಭಿವೃದ್ಧಿ ಇಲಾಖೆ ಸಭೆಯಲ್ಲಿ ದೂರು

ವಾರ್ತಾಭಾರತಿವಾರ್ತಾಭಾರತಿ5 Jan 2017 7:26 PM IST
share
‘ಸಾಂತ್ವನದಲ್ಲಿ ನೊಂದ ಮಹಿಳೆಯರಿಗೆ ಪೊಲೀಸರಿಂದ ಅಸಹಕಾರ’ : ಮಹಿಳೆ-ಮಕ್ಕಳ ಅಭಿವೃದ್ಧಿ ಇಲಾಖೆ ಸಭೆಯಲ್ಲಿ ದೂರು

ಉಡುಪಿ, ಜ.5: ಬಾಲನ್ಯಾಯ ಕಾಯ್ದೆಯಡಿ ನೋಂದಾವಣೆ ನವೀಕರಿ ಸಲು ಸಿದ್ಧಮಾಡಿಟ್ಟಿರುವ 8 ಸಂಸ್ಥೆಗಳ ಅರ್ಜಿಗಳನ್ನು ಜ.15ರೊಳಗೆ ಸರಕಾರಕ್ಕೆ ಕಳುಹಿಸಿಕೊಡುವಂತೆ ಜಿಲ್ಲಾಧಿಕಾರಿ ಟಿ ವೆಂಕೇಶ್ ಆದೇಶಿಸಿದ್ದಾರೆ.

ಉಡುಪಿ, ಜ.5: ಬಾಲನ್ಯಾಯ ಕಾಯ್ದೆಯಡಿ ನೋಂದಾವಣೆ ನವೀಕರಿ ಸಲು ಸಿದ್ಧಮಾಡಿಟ್ಟಿರುವ 8 ಸಂಸ್ಥೆಗಳ ಅರ್ಜಿಗಳನ್ನು ಜ.15ರೊಳಗೆ ಸರಕಾರಕ್ಕೆ ಕಳುಹಿಸಿಕೊಡುವಂತೆ ಜಿಲ್ಲಾಧಿಕಾರಿ ಟಿ ವೆಂಕಟೇಶ್ ಆದೇಶಿಸಿದ್ದಾರೆ. ಗುರುವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಗತಿ ಪರಿಶೀಲನೆ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಈಗಾಗಲೇ ನೋಂದಾಯಿಸಲ್ಪಟ್ಟಿರುವ 25 ಸಂಸ್ಥೆಗಳ ಪ್ರಸ್ತಾವನೆ ಬಗ್ಗೆ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ, ಎಲ್ಲ ದಾಖಲೆ ಸಲ್ಲಿಸಿರುವ 8 ಸಂಸ್ಥೆಗಳ ಪ್ರಸ್ತಾವನೆಯನ್ನು ತಕ್ಷಣವೇ ಕಳುಹಿಸಿ ಉಳಿದ ಸಂಸ್ಥೆಗಳ ಪ್ರಸ್ತಾವನೆಯನ್ನು ಸಿದ್ಧಪಡಿಸಿ ಜ.15 ರೊಳಗೆ ಕಳುಹಿಸಿಕೊಡಿ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗೆ ಸೂಚಿಸಿದರು.

ವಿಶೇಷ ಪಾಲನಾ ಯೋಜನೆಯಡಿ 8 ಲಕ್ಷ ರೂ. ಬಿಡುಗಡೆಯಾಗಿದ್ದು, ಅನುದಾನವನ್ನು ಪಲಾನುಭವಿಗಳಿಗೆ ಆರ್‌ಟಿಜಿಎಸ್ ಮೂಲಕ ನೀಡುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಪ್ರಾಯೋಜಕತ್ವದ ಅನುದಾನ ಬಿಡುಗಡೆ ನಿರೀಕ್ಷೆಯಲ್ಲಿದ್ದು, ಬೇಡಿಕೆ ಪಟ್ಟಿಯನ್ನು ಸಿದ್ಧಪಡಿಸಿ ಅನುದಾನ ಬಿಡುಗಡೆ ಬಳಕೆ ಮಾಡಲು ಸಜ್ಜಾಗಿ ಎಂದರು.

80 ಮಹಿಳೆಯರಿಗೆ ನೆರವು: 2016-17ನೇ ಸಾಲಿನಲ್ಲಿ ಸಾಂತ್ವನ ಯೋಜನೆ ಯಡಿ 80 ಮಹಿಳೆಯರು ನೆರವು ಕೋರಿ ಬಂದಿದ್ದು, ಸೂಕ್ತ ಸ್ಪಂದನೆ ನೀಡಿ ಕೌಟುಂಬಿಕ ಸಲಹೆಗಳನ್ನು ನೀಡಲಾಗಿದೆ. ಬಂದ ಪ್ರತಿಯೊಂದು ಪ್ರಕರಣದ ಬಗ್ಗೆ ಗಮನಹರಿಸಲಾಗಿದೆ ಎಂದು ಸಾಂತ್ವನ ಸಂಸ್ಥೆಯ ಪ್ರತಿನಿಧಿಗಳು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು.

 ಉಡುಪಿಯಿಂದ 33 ಮಂದಿ ಮಹಿಳೆಯರು, ಕಾರ್ಕಳದಿಂದ 30 ಹಾಗೂ ಕುಂದಾಪುರದಿಂದ 17 ಮಹಿಳೆಯರು ನೆರವು ಯಾಚಿಸಿದ್ದಾರೆ. ಕುಂದಾಪುರ ಮತ್ತು ಕಾರ್ಕಳ ಸಾಂತ್ವನ ಕೇಂದ್ರದ ಪ್ರತಿನಿಧಿಗಳು ಮಾತನಾಡಿ ಈ ಸಂದರ್ಭ ದಲ್ಲಿ ಕೋಟ ಮತ್ತು ಕಾರ್ಕಳದಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸುವುದು ಸೇರಿದಂತೆ ದೂರಿನೊಂದಿಗೆ ಹೋದರೆ ಸಹಕಾರ ನೀಡದೆ ಸತಾಯಿಸುತ್ತಾರೆ. ಗರ್ಭಿಣಿ, ಬಾಣಂತಿಯರ ದೂರು ನೀಡಲು ಹೋದರೆ ಸ್ಪಂದಿಸುವುದಿಲ್ಲ ಎಂಬ ವಿಷಯವನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.

ಪೊಲೀಸ್ ಇಲಾಖೆ ಇಂತಹ ಸಂದಭರ್ಗಳಲ್ಲಿ ಸ್ಪಂದಿಸಬೇಕಲ್ಲದೆ ಸಿಬ್ಬಂದಿ ಗಳಿಗೆ ಈ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಸುವಂತೆಯೂ ಜಿಲ್ಲಾಧಿಕಾರಿಗಳು ಪೊಲೀಸ್ ಇಲಾಖೆಗೆ ಸೂಚಿಸಿದರು. ಇಂತಹ ಸಂದರ್ಭಗಳಲ್ಲಿ ಸಾಂತ್ವನ ಕೇಂದ್ರದವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಗಮನಕ್ಕೆ ತರಲೂ ಜಿಲ್ಲಾಧಿಕಾರಿಗಳು ತಿಳಿಸಿದರು.

 ಮಹಿಳೆಯರು ನೀಡುವ ದೂರು ದಾಖಲಿಸುವುದು ಸೇರಿದಂತೆ ಪೊಲೀಸ್ ಠಾಣೆಯಲ್ಲಿರುವ ಮಹಿಳಾ ಸಿಬ್ಬಂದಿಗಳು ನೊಂದ ಮಹಿಳೆಯರಿಗೆ ದೂರು ದಾಖಲಿಸಲು ನೆರವಾಗಬೇಕೆಂದು ಉಡುಪಿ ಜಿಪಂ ಮುಖ್ಯ ಕಾರ್ಯನಿರ್ವಹ ಣಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಹೇಳಿದರು.

ಅಂಗನವಾಡಿಗಳಲ್ಲಿ ಮಕ್ಕಳಿಗೆ ಆಧಾರ್ ಕಾರ್ಡ್ ನೀಡುವ ಪ್ರಕ್ರಿಯೆಯನ್ನು ಜ.31ರೊಳಗೆ ಪೂರ್ಣಗೊಳಿಸಿ. ಇದಕ್ಕೆ ಪಂಚಾಯಿತಿಗಳ ನೆರವನ್ನು ಪಡೆಯಿರಿ ಎಂದೂ ಸಿಇಒ ಸೂಚಿಸಿದರು. ಮಣಿಪಾಲ ವ್ಯಾಪ್ತಿಯಲ್ಲಿ ಮಕ್ಕಳು ಭಿಕ್ಷಾಟನೆಯಲ್ಲಿ ತೊಡಗಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣಾ ಪೊಲೀಸರು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಸೂಚಿಸಿದರು.

 ಜಿಲ್ಲೆಯಲ್ಲಿ ವರದಕ್ಷಿಣೆ ಪಿಡುಗು, ಕೌಟುಂಬಿಕ ದೌರ್ಜನ್ಯ, ಬಾಲ್ಯ ವಿವಾಹ ಮುಂತಾದ ಪಿಡುಗುಗಳ ಬಗ್ಗೆ, ಮಹಿಳೆಯರ ಮತ್ತು ಮಕ್ಕಳ ಸಾಗಾಣೆ ಹಾಗೂ ಮಾರಾಟ ನಿಷೇಧ, ಕೋಟ್ಪಾಮುಂತಾದ ಕಾನೂನುಗಳ ಬಗ್ಗೆ ಜನನಿಬಿಡ ಸ್ಥಳಗಳಲ್ಲಿ ಪೋಸ್ಟರ್ ಮತ್ತು ಮಾಹಿತಿ ಕಾರ್ಯಾಗಾರ ನಡೆಸಿ ನಿರಂತರ ಅರಿವು ಮೂಡಿಸುವ ಯತ್ನವಾಗಬೇಕೆಂದು ಜಿಲ್ಲಾಧಿಕಾರಿಗಳು ಸಭೆಯಲ್ಲಿದ್ದ ಅಧಿಕಾರಿ ಗಳಿಗೆ ಸೂಚನೆ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್, ವಿವಿಧ ಇಲಾಖೆಯ ಅಧಿಕಾರಿಗಳು, ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು ಸಭೆಯಲ್ಲಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X