Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎತ್ತಿನಹೊಳೆ : ಸಂಸದ ನಳಿನ್ ಕುಮಾರ್...

ಎತ್ತಿನಹೊಳೆ : ಸಂಸದ ನಳಿನ್ ಕುಮಾರ್ ಕಟೀಲ್ ನಿಲುವು ಸ್ಪಷ್ಟಪಡಿಸಲಿ - ಕಾವು ಹೇಮನಾಥ ಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ5 Jan 2017 8:18 PM IST
share

ಪುತ್ತೂರು,ಜ.5: ಎತ್ತಿನ ಹೊಳೆ ಯೋಜನೆ ಕಾರ್ಯಗತವಾಗಲಿದೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ಹೇಳಿಕೆ ನೀಡಿದ್ದು, ಈ ಹಿನ್ನಲೆಯಲ್ಲಿ ಯೋಜನೆಯ ವಿರುದ್ದ ಹೋರಾಟ ನಡೆಸುತ್ತಿರುವ ಸಂಸದ ನಳಿನ್ ಕುಮಾರ್ ಕಟೀಲ್ ಅವರು ತನ್ನ ನಿಲುವನ್ನು ಜಿಲ್ಲೆಯ ಜನತೆಯ ಮುಂದೆ ಸ್ಪಷ್ಟ ಪಡಿಸಬೇಕು ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಆಗ್ರಹಿಸಿದ್ದಾರೆ.

ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು ಯೋಜನೆ ಕಾರ್ಯಗತವಾಗಲಿದೆ ಎಂದಿದ್ದಾರೆ. ಆದರೆ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಜಿಲ್ಲೆಯ ಜನರನ್ನು ದಾರಿ ತಪ್ಪಿಸಿ ಚುನಾವಣಾ ಲಾಭ ಪಡೆಯುವ ಹುನ್ನಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

 ಸಂಸದರಿಗೆ ಜಿಲ್ಲೆಯ ಜನತೆಯ ಬಗ್ಗೆ ನೈಜ ಕಾಳಜಿಯಿದ್ದಲ್ಲಿ ತಕ್ಷಣವೇ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿ ಜಿಲ್ಲೆಯ ಜನರೊಂದಿಗೆ ಸೇರಿಕೊಂಡು ಹೋರಾಟ ನಡೆಸಲಿ. ಆಗ ನಾವೆಲ್ಲರೂ ಅವರಿಗೆ ಪಕ್ಷಾತೀತವಾಗಿ ಬೆಂಬಲ ನೀಡಲು ಸಿದ್ದರಿದ್ದೇವೆ ಎಂದ ಅವರು ಯೋಜನೆಯ ಬಗ್ಗೆ ವಿಧಾನಸಭೆಯಲ್ಲಿ ನಿಲುವಳಿ ಮಂಡಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಈ ಹಿಂದೆಯೇ ಬಿಜೆಪಿಗರಿಗೆ ತಿಳಿಸಿದ್ದರು. ಆದರೆ ಅದನ್ನು ಮಾಡದೆ ಹೋರಾಟದ ಡೊಂಬರಾಟ ನಡೆಸುತ್ತಾ ಇಲ್ಲಿನ ಕೆಲವೊಂದು ಸ್ವಾಮೀಜಿಗಳಿಗೆ ತಪ್ಪು ಮಾಹಿತಿ ನೀಡುತ್ತಾ ಅವರನ್ನೂ ಬಳಸಿಕೊಳ್ಳುತ್ತಿದ್ದಾರೆ. ಜನರನ್ನು ತಪ್ಪು ದಾರಿಗೆ ಕೊಂಡೊಯ್ದು ಅದರಿಂದ ರಾಜಕೀಯ ಲಾಭ ಪಡೆಯುವುದು ಇವರ ಕೆಲಸ ಎಂದರು. ರಾಜಕೀಯ ದೃಷ್ಟಿಯಿಂದ ಎತ್ತಿನಹೊಳೆ ಯೋಜನೆಯನ್ನು ವಿರೋಧಿಸಲು ಮುಂದಾಗಿರುವ ಮಠಾಧೀಶರುಗಳು ಇದೀಗ ಯಡಿಯೂರಪ್ಪ ಹೇಳಿಕೆಯ ಬಳಿಕ ತಮ್ಮ ನಿಲುವನ್ನು ಜನತೆಯ ಮುಂದೆ ಪ್ರಕಟ ಪಡಿಸಬೇಕು. ಅಲ್ಲದೆ ಕಾಂಗ್ರೆಸ್‌ನವರೆನ್ನುವ ಮಾಜಿ ಸಚಿವರು ಮತ್ತು ಮಾಜಿ ಶಾಸಕರು ತಮ್ಮ ನಿಲುವನ್ನು ಬಹಿರಂಗಪಡಿಸಬೇಕು. ಇಲ್ಲದಿದ್ದಲ್ಲಿ ಪಕ್ಷ ಬಿಟ್ಟು ಅವರೂ ಹೊರಹೋಗಬೇಕು ಎಂದು ಅವರು ಒತ್ತಾಯಿಸಿದರು.

ಎತ್ತಿನಹೊಳೆ ಯೋಜನೆ ಕಾರ್ಯಗತಗೊಳಿಸುವ ಮೊದಲು ಜಿಲ್ಲೆಯ ಜನರೊಂದಿಗೆ ಸಮಾಲೋಚನೆ ನಡೆಸಿ ಸಮರ್ಪಕ ಮಾಹಿತಿ ಪಡೆದುಕೊಂಡು ಸರ್ಕಾರ ಮುಂದಿನ ಕಾರ್ಯಗಳನ್ನು ಮಾಡಬೇಕಾಗಿದೆ. ಜಿಲ್ಲೆಗೆ ಯಾವುದೇ ರೀತಿಯಲ್ಲಿಯೂ ಅನ್ಯಾಯವಾಗದಂತೆ ಸರ್ಕಾರ ಎಚ್ಚರ ವಹಿಸಬೇಕು. ಯೋಜನೆಯ ಸಾಧಕ, ಬಾಧಕಗಳ ಬಗ್ಗೆ ಅರಿವು ಮೂಡಿಸುವ ಕೆಲಸವಾಗಬೇಕು ಎಂದು ಹೇಳಿದ ಅವರು ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ಮಾಡುವುದಾಗಿ ತಿಳಿಸಿದರು.

ತಾಖತ್ತಿದ್ದರೆ ಬೆಂಕಿ ಕೊಡಲಿ:

ಜಿಲ್ಲೆಗೆ ಬೆಂಕಿ ಕೊಡುವುದಾಗಿ ಸಂಸದ ನಳಿನ್ ಕುಮಾರ್ ಹೇಳಿದ್ದಾರೆ. ಅವರಿಗೆ ತಾಖತ್ತಿದ್ದರೆ ಜಿಲ್ಲೆಗೆ ಬೆಂಕಿ ಕೊಡಲಿ. ಅದನ್ನು ನಂದಿಸುವ ಶಕ್ತಿ ಸರ್ಕಾರಕ್ಕಿದೆ. ಇವರಿಗೆ ಬೆಂಕಿ ಹಚ್ಚಿ ಇನ್ನೊಮ್ಮೆ ಗೆಲ್ಲುವುದು ಸಾಧ್ಯವಿಲ್ಲ. ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಮನೆಯಲ್ಲಿ ಕುಳಿತು ಒಲೆಗೆ ಬೆಂಕಿ ಹಚ್ಚುವ ಕೆಲಸ ಮಾಡಲಿ ಎಂದರು.

ಸುದ್ದಿಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ಮಹಮ್ಮದ್ ಆಲಿ, ಲೋಕೇಶ್ ಹೆಗ್ಡೆ, ಲ್ಯಾನ್ಸಿ ಮಸ್ಕರೇನಸ್, ರವಿಪ್ರಸಾದ್ ಶೆಟ್ಟಿ, ಅನ್ವರ್ ಖಾಸಿಂ, ಸ್ವರ್ಣಲತಾ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X