Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಶಕದೊಳಗೆ ರಕ್ಷಣಾ ಬಜೆಟ್‌ನಲ್ಲಿ...

ದಶಕದೊಳಗೆ ರಕ್ಷಣಾ ಬಜೆಟ್‌ನಲ್ಲಿ ಶೇ.50ರಷ್ಟು ಕಡಿತ: ಸುಭಾಷ್ ಭಾಮ್ರೆ

ವಾರ್ತಾಭಾರತಿವಾರ್ತಾಭಾರತಿ5 Jan 2017 11:37 PM IST
share

ಹೈದರಾಬಾದ್, ಜ.5: ಮುಂದಿನ 2028ರ ವೇಳೆ ಭಾರತದಲ್ಲಿ ವಿದೇಶದ ಮೂಲ ಪರಿಕರ ಉತ್ಪಾದನಾ ಸಂಸ್ಥೆಗಳು ಸುಮಾರು 14 ಬಿಲಿಯನ್ ಅಮೆರಿಕನ್ ಡಾಲರ್‌ನಷ್ಟು ಮೊತ್ತದ ರಕ್ಷಣಾ ಉತ್ಪನ್ನಗಳನ್ನು ಸ್ಥಳೀಯವಾಗಿ ಉತ್ಪಾದಿಸಲಿವೆ ಎಂದು ತಿಳಿಸಿರುವ ರಕ್ಷಣಾ ಇಲಾಖೆಯ ಉಪಸಚಿವ ಸುಭಾಷ್ ಆರ್.ಭಾಮ್ರೆ, ಒಂದು ದಶಕದೊಳಗೆ ರಕ್ಷಣಾ ಬಜೆಟ್‌ನಲ್ಲಿ ಶೇ.50ರಷ್ಟು ಕಡಿತಗೊಳಿಸುವ ಸೂಚನೆಯನ್ನು ನೀಡಿದ್ದಾರೆ. ರಕ್ಷಣಾ ಉದ್ಯಮವು ಭಾರೀ ವಿದೇಶ ವಿನಿಮಯ ಗಳಿಸುವ ಸಂಭಾವ್ಯತೆ ಹೊಂದಿದ್ದು ಈ ಮೂಲಕ ಸ್ವಾವಲಂಬನೆಯ ಗುರಿಯತ್ತ ದೇಶವನ್ನು ಮುನ್ನಡೆಸಲು ಶಕ್ತವಾಗಿದೆ ಎಂದವರು ಹೇಳಿದರು. ಇಲ್ಲಿನ ಡಿಫೆನ್ಸ್ ಮ್ಯಾನೇಜ್‌ಮೆಂಟ್ ಕಾಲೇಜು ಏರ್ಪಡಿಸಿದ್ದ 'ರಾಷ್ಟ್ರನಿರ್ಮಾಣ ಶಕ್ತಿಯಾಗಿ ರಕ್ಷಣಾ ವೆಚ್ಚದ ಸಾಮರ್ಥ್ಯ' ಎಂಬ ವಿಷಯದಲ್ಲಿ ನಡೆದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿಶ್ವದ ತೃತೀಯ ಬಲಿಷ್ಠ ಸೇನಾಪಡೆಯನ್ನು ಹೊಂದಿರುವ ಭಾರತವು ತನ್ನ ಒಟ್ಟು ಬಜೆಟ್‌ನಲ್ಲಿ ಶೇ.40ರಷ್ಟು ಮೊತ್ತವನ್ನು ಬಂಡವಾಳ ಒಟ್ಟುಗೂಡಿಸಲು ಮತ್ತು ಶೇ.60ರಷ್ಟು ಮೊತ್ತವನ್ನು ರಕ್ಷಣಾ ಅಗತ್ಯಗಳನ್ನು ವಿದೇಶದಿಂದ ಆಮದು ಮಾಡಿಕೊಳ್ಳಲು ಬಳಸುತ್ತಿದೆ. ಮುಂದಿನ ದಶಕದೊಳಗೆ ರಕ್ಷಣಾ ಅಗತ್ಯಗಳನ್ನು ಸ್ಥಳೀಯವಾಗಿ ಉತ್ಪಾದಿಸುವ ಮೂಲಕ ರಕ್ಷಣಾ ಬಜೆಟ್‌ನಲ್ಲಿ ಶೇ.50ರಷ್ಟು ಕಡಿತಗೊಳಿಸಲು ಸರಕಾರ ಮಹತ್ವ ನೀಡುತ್ತಿದೆ. ಸಂಶೋಧನೆ ಮತ್ತು ಅಭಿವೃದ್ಧಿಗೆ ಒತ್ತು ನೀಡುವ ಮೂಲಕ ರಕ್ಷಣಾ ಉತ್ಪನ್ನಗಳ ಕ್ಷೇತ್ರದಲ್ಲಿ ಹೊಸತನ ತರುವ ತುರ್ತು ಅಗತ್ಯವಿದೆ. ಉತ್ಪಾದನಾ ವೆಚ್ಚ ಕಡಿಮೆಗೊಳಿಸಲು ಶಕ್ತರಾಗುವ ಮಾನವ ಸಂಪನ್ಮೂಲವನ್ನು ಸಿದ್ಧಗೊಳಿಸಬೇಕಿದೆ ಎಂದವರು ನುಡಿದರು. ಕೇಂದ್ರ ಸರಕಾದ 'ಮೇಕ್ ಇನ್ ಇಂಡಿಯಾ' ಅಭಿಯಾನದ ಕಾರಣ ರಕ್ಷಣಾ ಕ್ಷೇತ್ರದ ಅಗತ್ಯಗಳನ್ನು ಸ್ಥಳೀಯವಾಗಿಯೇ ಈಡೇರಿಸಲು ಸಾಧ್ಯವಾಗಲಿದೆ. ಅಲ್ಲದೆ ಸುಮಾರು 1 ಮಿಲಿಯನ್‌ನಷ್ಟು ಪ್ರತ್ಯಕ್ಷ, ಪರೋಕ್ಷ ಉದ್ಯೋಗ ದೊರೆಯಲಿದೆ ಎಂದ ಅವರು, ಸಾರ್ವಜನಿಕ ಮತ್ತು ಖಾಸಗಿ ಕ್ಷೇತ್ರದ ಪಾಲುದಾರಿಕೆಯಲ್ಲಿ ರಕ್ಷಣಾ ಉತ್ಪನ್ನಗಳ ರಫ್ತು ಕಾರ್ಯಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ರೂಪುರೇಷೆ ತಯಾರಿಸಲಾಗುತ್ತಿದೆ. ಸಾಗರೋತ್ತರ ಮಾರಾಟಕ್ಕೆ ಬೆಂಬಲ ನೀಡುವ ಮತ್ತು ಉತ್ಪನ್ನವೊಂದರ ಜೀವಾವಧಿಯವರೆಗೂ ಮಾರಾಟ ನಂತರದ ಸೇವೆ ಮತ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸುವ ವ್ಯವಸ್ಥೆಯನ್ನು ಸಾರ್ವಜನಿಕ ಕ್ಷೇತ್ರದ ರಕ್ಷಣಾ ಉದ್ದಿಮೆಗಳು ಅಳವಡಿಸಿಕೊಳ್ಳಬೇಕಿದೆ ಎಂದವರು ಹೇಳಿದರು. ಖಾಸಗಿ ಕ್ಷೇತ್ರದ ಸಂಸ್ಥೆಗಳು ಮಾನವ ಸಂಪನ್ಮೂಲ ಸಾಮರ್ಥ್ಯವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡಿರುವ ಬಗ್ಗೆ ಬೊಟ್ಟು ಮಾಡಿದ ಅವರು, ಇದೇ ರೀತಿ ಖಾಸಗಿ ಸಂಸ್ಥೆಗಳು ಮತ್ತು ವಿದೇಶಿ ಸಂಸ್ಥೆಗಳು ರಕ್ಷಣಾ ವ್ಯವಸ್ಥೆಗಳ ಉತ್ಪಾದನೆಯಲ್ಲೂ ತೊಡಗಿಕೊಳ್ಳಬೇಕು ಎಂದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X