ಸಂಸದರ ವಿರುದ್ಧ ಕೇಸು: ಬಿಜೆಪಿ ಖಂಡನೆ
ಮಂಗಳೂರು, ಜ.5: ಸಂಸದ ನಳಿನ್ ಕುಮಾರ್ ಕಟೀಲ್ ತನ್ನ ಹೇಳಿಕೆಯ ಬಗ್ಗೆ ಈಗಾಗಲೇ ಸ್ಪಷ್ಟೀಕರಣ ನೀಡಿದ ಹೊರತಾಗಿಯೂ ಅವರ ವಿರುದ್ಧ ಕೇಸು ದಾಖಲಿಸಿರುವುದು ಮತ್ತು ಪ್ರತಿಭಟನೆ ನಡೆಸಿರುವುದು ಖಂಡನೀಯ ಎಂದು ಜಿಲ್ಲಾ ಬಿಜೆಪಿ ಹೇಳಿಕೆಯಲ್ಲಿ ತಿಳಿಸಿದೆ.
ಜಿಲ್ಲೆಯಲ್ಲಿ ಕಾನೂನು ವ್ಯವಸ್ಥೆ ಪೂರ್ತಿ ಹದಗೆಟ್ಟಿದೆ ಎಂಬುದನ್ನು ಮೊದಲು ಕಾಂಗ್ರೆಸಿಗರು ಒಪ್ಪಿಕೊಳ್ಳಬೇಕು. ಮೊದಲಿಗೆ ಉಳ್ಳಾಲದಲ್ಲಿ ಅಹಿತಕರ ಘಟನೆ ನಡೆಯದಂತೆ ತಡೆಯುವ ಕಾರ್ಯವನ್ನು ಮಾಡಲಿ ಎಂದು ಬಿಜೆಪಿ ವಕ್ತಾರ ಜಿತೇಂದ್ರ ಕೊಟ್ಟಾರಿ ತಿಳಿಸಿದ್ದಾರೆ.
Next Story





