Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನ್ಯಾ.ಕಾಟ್ಜುರಿಂದ ಸುಪ್ರೀಂ ಕೋರ್ಟಿನಲ್ಲಿ...

ನ್ಯಾ.ಕಾಟ್ಜುರಿಂದ ಸುಪ್ರೀಂ ಕೋರ್ಟಿನಲ್ಲಿ ಕ್ಷಮೆಯಾಚನೆ

ಸೌಮ್ಯಾ ಕೊಲೆ ಪ್ರಕರಣದ ತೀರ್ಪಿನ ಟೀಕೆ

ವಾರ್ತಾಭಾರತಿವಾರ್ತಾಭಾರತಿ6 Jan 2017 10:49 PM IST
share

ಹೊಸದಿಲ್ಲಿ,ಜ.6: ಸುಪ್ರೀಂ ಕೋರ್ಟಿನ ಮಾಜಿ ನ್ಯಾಯಾಧೀಶ ಮಾರ್ಕಂಡೇಯ ಕಾಟ್ಜು ಅವರು ಇಂದು ಸರ್ವೋಚ್ಚ ನ್ಯಾಯಾಲಯದಲ್ಲಿ ಬೇಷರತ್ ಕ್ಷಮೆಯನ್ನು ಯಾಚಿಸುವ ಮೂಲಕ ತನ್ನ ಬ್ಲಾಗ್ ಬರಹ ಕುರಿತಂತೆ ನ್ಯಾಯಾಂಗ ನಿಂದನೆ ಪ್ರಕರಣದಿಂದ ಪಾರಾಗಿದ್ದಾರೆ. 2011ರಲ್ಲಿ ಕೇರಳದಲ್ಲಿ ನಡೆದಿದ್ದ ಸೌಮ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ಅವರು ತನ್ನ ಬ್ಲಾಗ್‌ನಲ್ಲಿ ಕಟುವಾಗಿ ಟೀಕಿಸಿದ್ದರು.

  ನ್ಯಾ.ಕಾಟ್ಜು ಕ್ಷಮಾಯಾಚನೆಯನ್ನು ಒಪ್ಪಿಕೊಂಡ ಸರ್ವೋಚ್ಚ ನ್ಯಾಯಾಲಯವು ಪ್ರಕರಣಕ್ಕೆ ಮಂಗಳ ಹಾಡಿತು.
ಸೌಮ್ಯಾ ಪ್ರಕರಣದಲ್ಲಿ ಅಪರಾಧಿಯ ಶಿಕ್ಷೆಯ ಪ್ರಮಾಣವನ್ನು ತಗ್ಗಿಸುವ ಮೂಲಕ ಸರ್ವೋಚ್ಚ ನ್ಯಾಯಾಲಯವು ಗಂಭೀರ ಕಾನೂನು ತಪ್ಪನ್ನೆಸಗಿದೆ ಎಂದು ನೇರನುಡಿಯ ಕಾಟ್ಜು ತನ್ನ ಫೇಸ್‌ಬುಕ್ ಪೋಸ್ಟ್ ನಲ್ಲಿ ಟೀಕಿಸಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಸರ್ವೋಚ್ಚ ನ್ಯಾಯಾಲಯವು ಅವರ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮಕ್ಕೆ ಚಾಲನೆ ನೀಡಿತ್ತು.
ವಿಚಾರಣೆಯೊಂದರ ಸಂದರ್ಭ ನ್ಯಾ.ಕಾಟ್ಜು ಅವರು ‘ನಾನು ಯಾವುದನ್ನೂ ಲೆಕ್ಕಿಸುವುದಿಲ್ಲ ’ ಎಂದು ಘೋಷಿಸಿದ್ದರು. ಆಗ ನ್ಯಾಯಾಧಿಶರು ಅವರನ್ನು ಹೊರಗೆ ಕರೆದೊಯ್ಯುವಂತೆ ಸಿಬ್ಬಂದಿಗೆ ಆದೇಶಿಸಿದ್ದರು.
ನ್ಯಾಯಾಂಗದ ಕಲಾಪಗಳನ್ನು ಮತ್ತು ನ್ಯಾಯಾಂಗವನ್ನು ತಾನು ಗೌರವವಿಸುವುದಾಗಿ ಕಾಟ್ಜು ಇಂದು ಸರ್ವೋಚ್ಚ ನ್ಯಾಯಾಲಯದಲ್ಲಿ ಸಲ್ಲಿಸಿರುವ ಅಫಿದಾವತ್‌ನಲ್ಲಿ ಹೇಳಿದ್ದಾರೆ.
ಕೊಚ್ಚಿಯ ಶಾಪಿಂಗ್ ಮಾಲ್‌ವೊಂದರ ಉದ್ಯೋಗಿಯಾಗಿದ್ದ ಸೌಮ್ಯಾ(23) 2011,ಫೆ.1ರಂದು ಎರ್ನಾಕುಲಂ-ಶೊರ್ನೂರ್ ಪ್ಯಾಸೆಂಜರ್ ರೈಲಿನ ಮಹಿಳೆಯರ ಬೋಗಿಯಲ್ಲಿ ಏಕಾಂಗಿಯಾಗಿ ಪ್ರಯಾಣಿಸುತ್ತಿದ್ದಾಗ ಗೋವಿಂದಚಾಮಿ ಆಕೆಯ ಮೇಲೆ ಹಲ್ಲೆ ನಡೆಸಿ ಚಲಿಸುತ್ತಿದ್ದ ರೈಲಿನಿಂದ ಹೊರಕ್ಕೆ ತಳ್ಳಿದ್ದ. ಬಳಿಕ ತಾನೂ ಹೊರಕ್ಕೆ ಹಾರಿ ಕಲ್ಲಿನಿಂದ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಆಕೆಯ ಮೇಲೆ ಅತ್ಯಾಚಾರವೆಸಗಿದ್ದ. ಐದು ದಿನಗಳ ಬಳಿಕ ಸೌಮ್ಯಾ ಆಸ್ಪತ್ರೆಯಲ್ಲಿ ನಿಧನಳಾಗಿದ್ದರು.
ವಿಚಾರಣಾ ನ್ಯಾಯಾಲಯ ಗೋವಿಂದಚಾಮಿಗೆ ಮರಣದಂಡನೆಯನ್ನು ವಿಧಿಸಿತ್ತು ಮತ್ತು 2013ರಲ್ಲಿ ರಾಜ್ಯ ಉಚ್ಚ ನ್ಯಾಯಾಲಯವು ಅದನ್ನು ದೃಢಪಡಿಸಿತ್ತು.
 ಸೌಮ್ಯಾಳ ಸಾವಿಗೆ ಗೋವಿಂದಚಾಮಿ ಕಾರಣ ಅಥವಾ ಆಕೆಯನ್ನು ಕೊಲ್ಲುವ ಉದ್ದೇಶ ಆತನಿಗಿತ್ತು ಎನ್ನುವುದಕ್ಕೆ ಸಾಕ್ಷಾಧಾರವಿಲ್ಲ ಎಂದು ಸೆಪ್ಟಂಬರ್‌ನಲ್ಲಿ ತೀರ್ಪು ನೀಡಿದ್ದ ಸರ್ವೋಚ್ಚ ನ್ಯಾಯಾಲಯವು ಮರಣ ದಂಡನೆಯನ್ನು ರದ್ದುಗೊಳಿಸಿತ್ತು.

 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X