ಸ್ಪೈಸ್‌ಜೆಟ್ ವಿಮಾನ ತುರ್ತು ಭೂಸ್ಪರ್ಶ
ಹೊಸದಿಲ್ಲಿ, ಜ.6: ಬೆಂಗಳೂರಿನಿಂದ 176 ಪ್ರಯಾಣಿಕರನ್ನು ಹೊತ್ತು ತರುತ್ತಿದ್ದ ಸ್ಪೈಸ್ ಜೆಟ್ ವಿಮಾನವೊಂದು ಜಲಚಾಲಿತ ವ್ಯವಸ್ಥೆಯಲ್ಲಿ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ವರದಿಯಾಗಿದೆ. ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ವರ್ಗದವರು ಕ್ಷೇಮವಾಗಿದ್ದಾರೆ ಎಂದು ಸ್ಪೈಸ್‌ಜೆಟ್ ಏರ್‌ಲೈನ್ಸ್ ಸಂಸ್ಥೆಯ ಪ್ರಕಟಣೆ ತಿಳಿಸಿದೆ. ಬೆಂಗಳೂರಿನಿಂದ ದಿಲ್ಲಿಗೆ ಸಂಚರಿಸುತ್ತಿದ್ದ ಸ್ಪೈಸ್‌ಜೆಟ್ ವಿಮಾನ ಎಸ್‌ಜಿ 136ರಲ್ಲಿ ಜಲಚಾಲಿತ ವ್ಯವಸ್ಥೆಯಲ್ಲಿ ದೋಷ ಕಾಣಿಸಿಕೊಂಡಾಗ ತುರ್ತು ಭೂಸ್ಪರ್ಶಕ್ಕೆ ವ್ಯವಸ್ಥೆ ಮಾಡಿಕೊಡಲಾಯಿತು. ಇದೊಂದು ಸಾಧಾರಣ ಭೂಸ್ಪರ್ಶದ ಪ್ರಕರಣ ಎಂದು ಏರ್‌ಲೈನ್‌ನ ಪ್ರಕಟಣೆಯಲ್ಲಿ ಹೇಳಲಾಗಿದೆ.
Next Story





