ಜನವರಿ 21ರಂದು ಕಲಾಯಿಯಲ್ಲಿ ಕ್ರಿಕೆಟ್ ಪಂದ್ಯಾಟ

ಬಂಟ್ವಾಳ, ಜ.7: ಅಮ್ಮುಂಜೆ-ಕಲಾಯಿ ಸ್ಟ್ರೈಕರ್ಸ್ ಕ್ರಿಕೆಟರ್ಸ್ ಹಾಗೂ ರಮಾನಾಥ ರೈ ಅಭಿಮಾನಿ ಬಳಗ ಕಲಾಯಿ ಇವುಗಳ ಆಶ್ರಯದಲ್ಲಿ ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರ ಜನ್ಮ ಶತಮಾನೋತ್ಸವದ ಪ್ರಯುಕ್ತ ಹೊನಲು ಬೆಳಕಿನ 7 ಜನರ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟವು ಜ.21ರಂದು ಕಲಾಯಿಯ ಜೆಕೆಸಿ ಕ್ರೀಡಾಂಗಣದಲ್ಲಿ ನಡೆಯಲಿದೆ.
ರಾಜ್ಯ ಅರಣ್ಯ ಸಚಿವ ಬಿ. ರಮಾನಾಥ ರೈ ಪಂದ್ಯಾವಳಿಯನ್ನು ಉದ್ಘಾಟಿಸಲಿದ್ದು, ಜಿಪಂ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಯು.ಪಿ.ಇಬ್ರಾಹೀಂ, ರಾಜ್ಯ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎ.ಗಫೂರ್, ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಜಿ ಬಿ.ಎಚ್.ಖಾದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ, ಯುವ ಕಾಂಗ್ರೆಸ್ ದ.ಕ. ಜಿಲ್ಲಾಧ್ಯಕ್ಷ ಮಿಥುನ್ ರೈ, ಬಂಟ್ವಾಳ ವಿಧಾನಸಭಾ ಕ್ಷೇತ್ರಾಧ್ಯಕ್ಷ ಪ್ರಶಾಂತ್ ಕುಲಾಲ್ ಸಹಿತ ಹಲವು ಗಣ್ಯರು ಭಾಗವಹಿಸುವರು.
ವಿಜೇತ ತಂಡಗಳಿಗೆ ಪ್ರಥಮ ರೂ. 15,000/-, ದ್ವಿತೀಯ ರೂ. 10,000/-, ಸ್ಟ್ರೈಕರ್ಸ್ ಟ್ರೋಫಿ ಹಾಗೂ ವೈಯುಕ್ತಿಕ ಬಹುಮಾನ ನೀಡಲಾಗುವುದು. ಮಾಹಿತಿಗಾಗಿ ಮೊ.ಸಂ.: 9481633521 ಅಥವಾ 8748955535ನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.





