Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪುಟಿನ್ ಚುನಾವಣೆಯಲ್ಲಿ ಟ್ರಂಪ್‌ಗೆ ಸಹಾಯ...

ಪುಟಿನ್ ಚುನಾವಣೆಯಲ್ಲಿ ಟ್ರಂಪ್‌ಗೆ ಸಹಾಯ ಮಾಡಿದ್ದರು : ಅಮೆರಿಕ ಗುಪ್ತಚರ ವರದಿ

ವಾರ್ತಾಭಾರತಿವಾರ್ತಾಭಾರತಿ7 Jan 2017 9:41 PM IST
share
ಪುಟಿನ್ ಚುನಾವಣೆಯಲ್ಲಿ ಟ್ರಂಪ್‌ಗೆ ಸಹಾಯ ಮಾಡಿದ್ದರು : ಅಮೆರಿಕ ಗುಪ್ತಚರ ವರದಿ

ವಾಶಿಂಗ್ಟನ್, ಜ. 7: ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಹಿಲರಿ ಕ್ಲಿಂಟನ್‌ರನ್ನು ಸೋಲಿಸುವುದನ್ನು ಹಾಗೂ ರಿಪಬ್ಲಿಕನ್ ಅಭ್ಯರ್ಥಿ ಡೊನಾಲ್ಡ್ ಟ್ರಂಪ್‌ರನ್ನು ಗೆಲ್ಲಿಸುವುದನ್ನು ಗುರಿಯಾಗಿಸಿ ಕಂಪ್ಯೂಟರ್‌ಗಳಿಗೆ ಕನ್ನ ಹಾಕುವಂತೆ ಹಾಗೂ ಮಾಧ್ಯಮಗಳಲ್ಲಿ ಪ್ರಚಾರ ನಡೆಸುವಂತೆ ರಶ್ಯದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಆದೇಶ ನೀಡಿದ್ದರು ಎಂದು ಅಮೆರಿಕದ ಗುಪ್ತಚರ ಇಲಾಖೆ ಶುಕ್ರವಾರ ಬಿಡುಗಡೆ ಮಾಡಿದ ವರದಿಯೊಂದರಲ್ಲಿ ತಿಳಿಸಿದೆ.
ಆರಂಭದಲ್ಲಿ ಇದರ ಉದ್ದೇಶ ಹಿಲರಿಯ ಅಧ್ಯಕ್ಷೀಯ ಅಭಿಯಾನಕ್ಕೆ ಧಕ್ಕೆಯುಂಟುಮಾಡುವುದಾಗಿತ್ತು ಹಾಗೂ ಬಳಿಕ ರಿಪಬ್ಲಿಕನ್ ಅಭ್ಯರ್ಥಿ ಗೆಲ್ಲುವ ಸಾಧ್ಯತೆ ಗೋಚರಿಸಿದಾಗ ಅವರನ್ನು ಬೆಂಬಲಿಸುವುದಾಗಿತ್ತು ಎಂದು ರಾಷ್ಟ್ರೀಯ ಗುಪ್ತಚರ ನಿರ್ದೇಶಕರ ವರದಿ ಹೇಳಿದೆ.

‘‘2016ರಲ್ಲಿ ಅಮೆರಿಕದ ಅಧ್ಯಕ್ಷೀಯ ಚುನಾವಣೆಯನ್ನು ಗುರಿಯಾಗಿಸಿ ವಶೀಲಿಬಾಜಿ ಅಭಿಯಾನವೊಂದನ್ನು ನಡೆಸುವಂತೆ ರಶ್ಯದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಆದೇಶ ನೀಡಿದ್ದರು ಎಂದು ತಿಳಿದುಬಂದಿದೆ. ಅಮೆರಿಕದ ಪ್ರಜಾಸತ್ತಾತ್ಮಕ ಪ್ರಕ್ರಿಯೆಯಲ್ಲಿ ಸಾರ್ವಜನಿಕರ ವಿಶ್ವಾಸವನ್ನು ತಗ್ಗಿಸುವುದು, ಹಿಲರಿ ಕ್ಲಿಂಟನ್‌ರನ್ನು ಕಡೆಗಣಿಸುವುದು ಮತ್ತು ಅವರು ಆಯ್ಕೆಯಾಗುವ ಹಾಗೂ ಅಧ್ಯಕ್ಷೆಯಾಗುವ ಸಾಧ್ಯತೆಗಳನ್ನು ಕಡಿಮೆಗೊಳಿಸುವುದು ರಶ್ಯದ ಉದ್ದೇಶಗಳಾಗಿದ್ದವು’’ ಎಂದು ತಿಳಿಸಿದೆ.

ಹೀಗೆ ಮಾಡಲು ರಶ್ಯದ ಅಧ್ಯಕ್ಷರಿಗೆ ಹಲವು ಕಾರಣಗಳಿದ್ದವು. ವಿದೇಶದ ಬ್ಯಾಂಕ್‌ಗಳಲ್ಲಿ ರಹಸ್ಯ ಖಾತೆಗಳನ್ನು ಹೊಂದಿರುವುದಾಗಿ ಪನಾಮ ದಾಖಲೆಗಳಲ್ಲಿ ತನ್ನ ಹೆಸರು ಬಂದಿರುವುದಕ್ಕಾಗಿ ಹಾಗೂ ಒಲಿಂಪಿಕ್ ಉದ್ದೀಪನ ದ್ರವ್ಯ ಸೇವನೆ ವಿಷಯದಲ್ಲಿ ರಶ್ಯದ ಆ್ಯತ್ಲೀಟ್‌ಗಳ ವಿರುದ್ಧ ಕ್ರಮ ತೆಗೆದುಕೊಂಡಿರುವುದಕ್ಕಾಗಿ ಅಮೆರಿಕದ ವಿರುದ್ಧ ಪ್ರತೀಕಾರ ಸಾಧಿಸಲು ರಶ್ಯ ಮುಂದಾಗಿತ್ತು. ಅದೂ ಅಲ್ಲದೆ, 2011-12ರಲ್ಲಿ ತನ್ನ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಲು ಜನರನ್ನು ಹಿಲರಿ ಉತ್ತೇಜಿಸಿದ್ದರು ಎಂಬ ಆಕ್ರೋಶವನ್ನೂ ಹಿಲರಿ ಹೊಂದಿದ್ದಾರೆ.

ಚುನಾವಣೆ ಮೇಲೆ ಸೈಬರ್ ದಾಳಿ ಪರಿಣಾಮ ಬೀರಿಲ್ಲ: ಟ್ರಂಪ್

ವಾಶಿಂಗ್ಟನ್, ಜ. 7: ಅಮೆರಿಕದ ಅಧ್ಯಕ್ಷೀಯ ಚುನಾವಣೆಯ ಮೇಲೆ ರಶ್ಯ ಮಾತ್ರ ಸೈಬರ್ ದಾಳಿ ನಡೆಸಿದೆ ಎಂಬುದನ್ನು ಒಪ್ಪಲು ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ ನಿರಾಕರಿಸಿದ್ದಾರೆ.

ರಶ್ಯದ ಸೈಬರ್ ದಾಳಿಯ ಬಗ್ಗೆ ಗುಪ್ತಚರ ಇಲಾಖೆಯ ಉನ್ನತ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಬಳಿಕ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.ಅದೇ ವೇಳೆ, ಅಮೆರಿಕದ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶವು ಸೈಬರ್ ದಾಳಿಯಿಂದ ಪ್ರಭಾವಿತವಾಗಿಲ್ಲ ಎಂಬುದಾಗಿಯೂ ಹೇಳಿದರು.

ರಶ್ಯ, ಚೀನಾ ಮತ್ತು ಇತರ ದೇಶಗಳು ನಡೆಸುತ್ತಿರುವ ಸೈಬರ್ ದಾಳಿಗಳಿಂದ ಅಮೆರಿಕದ ಸಂಸ್ಥೆಗಳು, ರಾಜಕೀಯ ಪಕ್ಷಗಳು ಮತ್ತು ಉದ್ದಿಮೆಗಳು ನಲುಗುತ್ತಿವೆ ಎಂದು ಗುಪ್ತಚರ ಇಲಾಖೆಯ ನಾಲ್ವರು ಮುಖ್ಯಸ್ಥರನ್ನು ಭೇಟಿಯಾದ ಬಳಿಕ ನೀಡಿದ ಹೇಳಿಕೆಯೊಂದರಲ್ಲಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X