ಶೋಧ 2017- ಶೈಕ್ಷಣಿಕ ಮಹಾಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ

ಮೂಡುಬಿದಿರೆ, ಜ.8: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಆಶ್ರಯದಲ್ಲಿ ಭಾರತ ಪ್ರಾಥಮಿಕ ಶಾಲಾ ಶಿಕ್ಷಕರ ಫೆಡರೇಷನ್, ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮಂಗಳೂರು ಹಾಗೂ ಮೂಡುಬಿದಿರೆ ವಲಯದ ವತಿಯಿಂದ ಜ.24ರಂದು ನಡೆಯುವ ‘ಶೋಧ 2017 ದ.ಕ ಜಿಲ್ಲಾ ಶೈಕ್ಷಣಿಕ ಮಹಾಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಮೂಡುಬಿದಿರೆ ಸಮಾಜಮಂದಿರದಲ್ಲಿ ಶನಿವಾರ ನಡೆಯಿತು
ಉದ್ಯಮಿ ಶ್ರೀಪತಿ ಭಟ್ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಶಿಕ್ಷಕರು ಸಮಾಜದಲ್ಲಿ ಸಂಸ್ಕಾರ, ಒಳ್ಳೆಯ ಚಿಂತನೆಯನ್ನು ನೀಡುವವರು. ಅಧುನಿಕ ಶೈಕ್ಷಣಿಕ ವ್ಯವಸ್ಥೆಯಲ್ಲಿ ಬೋಧನೆಯ ಗುಣಮಟ್ಟವನ್ನು ಹೆಚ್ಚಿಸಲು ಶಿಕ್ಷಕರಿಗೆ ಹಾಗೂ ಶಿಕ್ಷಕರ ಅಗಾಧ ಜ್ಞಾನದ ಪ್ರಯೋಜನವನ್ನು ವಿದ್ಯಾರ್ಥಿಗಳು ಪಡೆಯಬೇಕು ಎಂದರು.
Next Story





