Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಛತ್ತೀಸ್‌ಗಡ:ಪೊಲೀಸರಿಂದ 16 ಮಹಿಳೆಯರ...

ಛತ್ತೀಸ್‌ಗಡ:ಪೊಲೀಸರಿಂದ 16 ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ

ಸರಕಾರಕ್ಕೆ ಎನ್‌ಎಚ್‌ಆರ್‌ಸಿ ನೋಟಿಸ್

ವಾರ್ತಾಭಾರತಿವಾರ್ತಾಭಾರತಿ8 Jan 2017 3:13 PM IST
share
ಛತ್ತೀಸ್‌ಗಡ:ಪೊಲೀಸರಿಂದ 16 ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ

ರಾಂಚಿ,ಜ.8: ಛತ್ತೀಸ್‌ಗಡದಲ್ಲಿ ಪೊಲೀಸರು ಕನಿಷ್ಠ 16 ಮಹಿಳೆಯರ ಮೇಲೆ ಅತ್ಯಾಚಾರವನ್ನೆಸಗಿದ್ದಾರೆ,ಲೈಂಗಿಕ ಮತ್ತು ದೈಹಿಕ ಹಲ್ಲೆಗಳನ್ನು ನಡೆಸಿದ್ದಾರೆ ಎಂದು ರಾಷ್ಟ್ರೀಯ ಮಾನವಹಕ್ಕುಗಳ ಆಯೋಗ(ಎನ್‌ಎಚ್‌ಆರ್‌ಸಿ)ವು ಹೇಳಿದೆ. 2015 ಮತ್ತು 2016ರಲ್ಲಿ ನಡೆದಿರುವ ಈ ಘಟನೆಗಳಿಗೆ ರಾಜ್ಯ ಸರಕಾರವೇ ಹೊಣೆಯಾಗಿದೆ ಎಂದಿರುವ ಅದು, ಸರಕಾರಕ್ಕೆ ನೋಟಿಸ್‌ನ್ನೂ ಜಾರಿಗೊಳಿಸಿದೆ. ಸುಮಾರು 20 ಇತರ ಬಲಿಪಶುಗಳ ಕುರಿತು ದಾಖಲೆಗಳಿಗಾಗಿ ತಾನು ಕಾಯುತ್ತಿರುವುದಾಗಿಯೂ ಆಯೋಗವು ಹೇಳಿದೆ.

ಎನ್‌ಎಚ್‌ಆರ್‌ಸಿ ತಂಡ ಅಥವಾ ಮ್ಯಾಜಿಸ್ಟ್ರೇಟ್ ಹೇಳಿಕೆಗಳನ್ನು ದಾಖಲಿಸಿಕೊಂಡಿರದ ಸಂತ್ರಸ್ತೆಯರ ಹೇಳಿಕೆಗಳನ್ನು ದಾಖಲಿಸಿಕೊಂಡು ಒಂದು ತಿಂಗಳೊಳಗೆ ಅವುಗಳನ್ನು ತನಗೆ ಸಲ್ಲಿಸುವಂತೆ ಆಯೋಗವು ಅಧಿಕಾರಿಗಳಿಗೆ ನಿರ್ದೇಶ ನೀಡಿದೆ.

ಅತ್ಯಾಚಾರ ಮತ್ತು ಹಲ್ಲೆಗೊಳಗಾದ ಮಹಿಳೆಯರಿಗೆ 37ಲ.ರೂ.ಗಳ ಮಧ್ಯಂತರ ಪರಿಹಾರವನ್ನು ತಾನೇಕೆ ಶಿಫಾರಸು ಮಾಡಬಾರದು ಎನ್ನುವುದನ್ನು ವಿವರಿಸುವಂತೆಯೂ ಎನ್‌ಎಚ್‌ಆರ್‌ಸಿ ಸರಕಾರಕ್ಕೆ ಸೂಚಿಸಿದೆ. ಎಂಟು ಅತ್ಯಾಚಾರ ಸಂತ್ರಸ್ತೆಯರಿಗೆ ತಲಾ ಮೂರು ಲ.ರೂ.,ಲೈಂಗಿಕ ಹಲ್ಲೆಗೊಳಗಾದ ಆರು ಬಲಿಪಶುಗಳಿಗೆ ತಲಾ ಎರಡು ಲ.ರೂ. ಮತ್ತು ದೈಹಿಕ ಹಲ್ಲೆಗೊಳಗಾದ ಇಬ್ಬರಿಗೆ ತಲಾ 50,000 ರೂ.ಗಳ ಪರಿಹಾರವನ್ನು ಇದು ಒಳಗೊಂಡಿದೆ.

ರಾಜ್ಯ ಪೊಲೀಸ್ ಸಿಬ್ಬಂದಿಗಳು ತಮ್ಮಲ್ಲಿ 40 ಕ್ಕೂ ಹೆಚ್ಚಿನವರ ಮೇಲೆ ಹಲ್ಲೆ ನಡೆಸಿದ್ದಾರೆ ಮತ್ತು ಕನಿಷ್ಠ ಇಬ್ಬರ ಮೇಲೆ ಸಾಮೂಹಿಕ ಅತ್ಯಚಾರ ಎಸಗಿದ್ದಾರೆ ಎಂದು ಛತ್ತೀಸ್‌ಗಡದ ಬಿಜಾಪುರ ಜಿಲ್ಲೆಯ ಐದು ಗ್ರಾಮಗಳ ಮಹಿಳೆಯರು ಆರೋಪಿಸಿದ್ದ ವರದಿ ಕಳೆದ ವರ್ಷದ ಸೆಪೆಂಬರ್‌ನಲ್ಲಿ ಆಂಗ್ಲ ದೈನಿಕವೊಂದರಲ್ಲಿ ಪ್ರಕಟಗೊಂಡ ನಂತರ ತಾನು ಈಬಗ್ಗೆ ತನಿಖೆಯನ್ನು ಆರಂಭಿಸಿದ್ದೆ ಎಂದು ಆಯೋಗವು ತಿಳಿಸಿದೆ.

ಗ್ರಾಮಗಳ ಮಾರ್ಗವಾಗಿ ಹಾದು ಹೋಗುತ್ತಿದ್ದ ಪೊಲೀಸ್ ಪಡೆಯು ಹಲವಾರು ಗ್ರಾಮಗಳಿಗೆ ಸೇರಿದ ಆಸ್ತಿಗಳನ್ನು ಧ್ವಂಸಗೊಳಿಸಿತ್ತು, ಅವುಗಳನ್ನು ಕಳವು ಮಾಡಿತ್ತು ಎಂದೂ ಆಂಗ್ಲ ದೈನಿಕವು ವರದಿ ಮಾಡಿತ್ತು.

ತನಿಖೆಯ ಸಂದರ್ಭ 2016,ಜ.11-14ರ ನಡುವೆ ಇತರ ಎರಡು ಗ್ರಾಮಗಳಲ್ಲಿ ಮಹಿಳೆಯರ ಮೇಲೆ ಪೊಲೀಸರು ಲೈಂಗಿಕ ದೌರ್ಜನ್ಯವೆಸಗಿದ ಇನ್ನಷ್ಟು ಘಟನೆಗಳ ಬಗ್ಗೆಯೂ ಆಯೋಗಕ್ಕೆ ದೂರು ಬಂದಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X