Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಿಡ್ಡಳ್ಳಿ ನಿರಾಶ್ರಿತ ಶಿಬಿರದಲ್ಲಿ...

ದಿಡ್ಡಳ್ಳಿ ನಿರಾಶ್ರಿತ ಶಿಬಿರದಲ್ಲಿ ಆದಿವಾಸಿ ಸಾವು

ಮೃತನ ಕುಟುಂಬ ಜೀತಪದ್ಧತಿಯಲ್ಲಿರುವ ಶಂಕೆ

ವಾರ್ತಾಭಾರತಿವಾರ್ತಾಭಾರತಿ8 Jan 2017 7:10 PM IST
share
ದಿಡ್ಡಳ್ಳಿ ನಿರಾಶ್ರಿತ ಶಿಬಿರದಲ್ಲಿ ಆದಿವಾಸಿ ಸಾವು

ಸಿದ್ದಾಪುರ, ಜ.8: ಶಾಶ್ವತ ನಿವೇಶನಕ್ಕಾಗಿ ಕಳೆದ ಒಂದು ತಿಂಗಳಿನಿಂದ ದಿಡ್ಡಳ್ಳಿ ನಿರಾಶ್ರಿತರೊಂದಿಗೆ ದಿನ ಕಳೆಯುತ್ತಿದ್ದ ಆದಿವಾಸಿ ಜನಾಂಗದ ನಂಜ (45) ಎಂಬವರು ರವಿವಾರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಬೆಳಿಗ್ಗೆ 6 ಗಂಟೆಗೆ ಮುಖ ತೊಳೆಯುತ್ತಿದ್ದ ಸಂದರ್ಭ ಹಠಾತನೆ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ನಂಜನ ಅಣ್ಣ ಬೊಳಕ ಹಾಗೂ ಮತ್ತಿತರರು ಸೇರಿ ಪೊಲೀಸ್ ಜೀಪಿನಲ್ಲಿ ಸಿದ್ದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ನಂಜ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.

ನಂತರ ಮೃತದೇಹವನ್ನು ದಿಡ್ಡಳ್ಳಿಯಲ್ಲಿಟ್ಟು ಪೊನ್ನಂಪೇಟೆ ಸಮೀಪದ ತೂಚಮನಕೇರಿಯ ಕಾಫಿ ತೋಟವೊಂದರಲ್ಲಿದ್ದ ಕುಟುಂಬಕ್ಕೆ ಮಾಹಿತಿ ನೀಡಲಾಗಿತ್ತು. ಆದರೆ ಕುಟುಂಬದವರು ಸ್ಥಳಕ್ಕೆ ಆಗಮಿಸಲು ಸಾಧ್ಯವಾಗದ ಕಾರಣ ಪೊಲೀಸರು ತಮ್ಮ ವಾಹನದಲ್ಲಿ ತೂಚಮನಕೇರಿ ಗ್ರಾಮಕ್ಕೆ ತೆರಳಿ ಪತ್ನಿ ಮತ್ತು ಮಕ್ಕಳನ್ನು ಕರೆದುಕೊಂಡು ಬಂದ ಸಂದರ್ಭ ಮಾಧ್ಯಮಗಳಿಗೆ ಮೃತನ ಪತ್ನಿ ಮತ್ತು ಮಕ್ಕಳು ಸ್ಪಷ್ಟವಾದ ಮಾಹಿತಿ ನೀಡಲು ಸಾಧ್ಯವಾಗದೆ ಗೊಂದಲಗಳ ಹೇಳಿಕೆ ನೀಡುತ್ತಿರುವುದು ಕಂಡು ಬಂತು.

ನಿರಾಶ್ರಿತ ಸ್ಥಳದಲ್ಲಿ ಸೌಲಭ್ಯ ಕೊರತೆಯೋ ಅಥವಾ ಜೀತಪತದ್ಧತಿಯಲ್ಲಿರುವ ಕುಟುಂಬದ ಬಗ್ಗೆ ಮನನೊಂದು ಸಾವನ್ನಪ್ಪಿರಬಹುದು ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ.

ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜ ಭೇಟಿ ನೀಡಿ ಸ್ಥಳೀಯರೊಂದಿಗೆ ಮಾತುಕತೆ ನಡೆಸಿ ಮೃತದೇಹವನ್ನು ಸಿದ್ದಾಪುರ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿ ತಹಶೀಲ್ದಾರ್ ಮಹದೇವಸ್ವಾಮಿ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಯಿತು.

ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜ ಮಾಧ್ಯಮದೊಂದಿಗೆ ಮಾತನಾಡಿ, ನಿರಾಶ್ರಿತ ಸ್ಥಳದಲ್ಲಿ ನಂಜ ಎಂಬವರು ಬೆಳಿಗ್ಗೆ ಮುಖ ತೊಳೆಯುತ್ತಿದ್ದ ವೇಳೆ ಎದೆ ನೋವು ಕಾಣಿಸಿಕೊಂಡು ಅಸ್ವಸ್ಥನಾಗಿದ್ದ ಸಂದರ್ಭ ಪೊಲೀಸ್ ವಾಹನದಲ್ಲಿ ಸಿದ್ದಾಪುರ ಆಸ್ಪತ್ರೆಗೆ ಕರೆತರಲಾಗಿದ್ದು, ವೈದ್ಯಾಧಿಕಾರಿ ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಮೃತನ ಸಹೋದರ ಬೊಳಕ ನೀಡಿದ ದೂರಿನ ಹಿನ್ನಲೆ ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಕುಟುಂಬದವರು ಯಾವುದೇ ದೂರುಗಳನ್ನು ನೀಡಿಲ್ಲ, ನೀಡಿದರೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

ಶಾಶ್ವತ ನಿವೇಶನ ಲಭಿಸದೆ ಇರುವುದರ ಬಗ್ಗೆ ಹಾಗೂ 1 ಲಕ್ಷಕ್ಕೂ ಹೆಚ್ಚು ಸಾಲ ಇದ್ದು, ತನ್ನ ಕುಟುಂಬವನ್ನು ಜೀತಪದ್ಧತಿಯಲ್ಲಿ ದುಡಿಸಿಕೊಳ್ಳುತ್ತಿರುವುದರ ಬಗ್ಗೆ ತಮ್ಮ ನೋವುಗಳನ್ನು ಮೃತ ನಂಜ ಕೆಲವು ದಿನಗಳಿಂದ ದಿಡ್ಡಳ್ಳಿಯ ಕೆಲವರಲ್ಲಿ ಹೇಳುತ್ತಿದ್ದರು ಎನ್ನಲಾಗಿದೆ. ಮೃತರು ಪತ್ನಿ ಬೋಜ ಹಾಗೂ ಮಕ್ಕಳಾದ ಸರಸು, ಗಂಗೆ, ಕಾವ್ಯ ಮತ್ತು ರವಿ ಎಂಬವರನ್ನು ಅಗಲಿದ್ದಾರೆ. ಕುಟುಂಬದ ರೋಧನ ಮುಗಿಲು ಮುಟ್ಟಿದ್ದು, ನೆರೆದಿದ್ದವರ ಮನಕಲಕುವಂತಿತ್ತು.
   

ಮೃತನ ಕುಟುಂಬಕ್ಕೆ ಕಂದಾಯ ಇಲಾಖೆಯ ವತಿಯಿಂದ ಅಂತ್ಯ ಸಂಸ್ಕಾರಕ್ಕೆ 5 ಸಾವಿರ ರೂ.ಗಳನ್ನು ನೀಡಲಾಯಿತು. ಸ್ಥಳದಲ್ಲಿ ಡಿವೈಎಸ್‌ಪಿ ಛಬ್ಬಿ, ಸಿಐ ಮೇದಪ್ಪ, ಎಸ್‌ಐ ಸಂತೋಶ್ ಕಶ್ಯಪ್ ಹಾಗೂ ಕಂದಾಯ ಇಲಾಖೆಯ ಶ್ರೀನಿವಾಸ್, ಮಂಜುನಾಥ್ ಸಮಾಜ ಕಲ್ಯಾಣ ಇಲಾಖೆಯ ಪ್ರಕಾಶ್ ಸೇರಿದಂತೆ ಮತ್ತಿತರರು ಇದ್ದರು.

ಜಿಲ್ಲೆಯಲ್ಲಿ ಜೀತಪದ್ಧತಿ ಜೀವಂತ :  ವೈ.ಕೆ ಗಣೇಶ್ ಆರೋಪ

ಕೊಡಗು ಜಿಲ್ಲೆಯಲ್ಲಿ ಜೀತಪದ್ಧತಿ ಜೀವಂತವಾಗಿದ್ದು, ಹಲವಾರು ಘಟನೆಗಳು ನಡೆದರೂ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳುವುದರಲ್ಲಿ ವಿಫಲರಾಗಿದ್ದಾರೆ ಎಂದು ರಾಜ್ಯ ಆದಿವಾಸಿ ಸಮನ್ವಯ ಸಮಿತಿ ಜಿಲ್ಲಾ ಸಂಚಾಲಕ ವೈ.ಕೆ ಗಣೀಶ್ ಆರೋಪಿಸಿದ್ದಾರೆ.

ದಿಡ್ಡಳ್ಳಿ ನಿರಾಶ್ರಿತ ಸ್ಥಳದಲ್ಲಿ ಮೃತಪಟ್ಟ ನಂಜ ಸಾವಿನ ಪ್ರಕರಣ ತನಿಖೆ ಮಾಡಬೇಕು. ಮೃತನ ಕುಟುಂಬ ಜೀತ ಪದ್ಧತಿಯಲ್ಲಿ ಇಲ್ಲದಿದ್ದರೆ ಆತನ ಪತ್ನಿ ಮತ್ತು ಮಕ್ಕಳನ್ನು ಕರೆತರಲು ಪೊಲೀಸರು ತಮ್ಮ ವಾಹನದಲ್ಲಿ ತೂಚಮನಕೇರಿ ಗ್ರಾಮಕ್ಕೆ ತೆರಳಿ ಅವರನ್ನು ಕರೆತರುವ ಅವಶ್ಯಕತೆ ಏನಿತ್ತು ಎಂದು ಪ್ರಶ್ನಿಸಿದ ಅವರು,  ಜಿಲ್ಲೆಯಲ್ಲಿ ಜೀತ ಪದ್ಧತಿ ಜೀವಂತವಾಗಿರುವುದಕ್ಕೆ ಕಣ್ಣಾಂಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷೆಯನ್ನು ದುಡಿಸಿಕೊಂಡ ಘಟನೆಯೇ ಸಾಕ್ಷಿಯಾಗಿದೆ. ಬಾಲ ಕಾರ್ಮಿಕ ಹಾಗೂ ಜೀತಪದ್ಧತಿ ಜೀವಂತವಾಗಿದ್ದರೂ ಅಧಿಕಾರಿಗಳು ಯಾವುದೆ ತನಿಖೆ ಮಾಡುತ್ತಿಲ್ಲ. ಶಾಲೆಗೆ ತೆರಳಬೇಕಾದ ವಿದ್ಯಾರ್ಥಿಗಳು ಕಾಫಿ ತೋಟಗಳಲ್ಲಿ ದುಡಿಸಿಕೊಳ್ಳುತ್ತಿದ್ದಾರೆ. ಸಾಲ ಪಡೆದಿರುವ ಆರೋಪ ಹೊರಿಸಿ ಜೀತಪದ್ಧತಿಯಲ್ಲಿ ದುಡಿಸಿಕೊಳ್ಳುವುದರ ಮೂಲಕ ಪೊಲೀಸ್ ಠಾಣೆಗಳಲ್ಲೂ ಪ್ರಕರಣ ದಾಖಲಿಸುತ್ತಿದ್ದಾರೆ. ಆದಿವಾಸಿಗಳಿಗೆ ಸಿಗುವ ಸೌಲಭ್ಯಗಳು ಇತರರ ಪಾಲಾಗುತ್ತಿದ್ದು, ಆದಿವಾಸಿಗಳಿಗೆ ನ್ಯಾಯ ಸಿಗುತ್ತಿಲ್ಲ. ಕೂಡಲೆ ಸರಕಾರ ಎಚ್ಚೆತ್ತುಕೊಂಡು ಸಮಸ್ಯೆಗಳನ್ನು ಬಗೆ ಹರಿಸಬೇಕೆಂದು ಒತ್ತಾಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X