Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ​ಸಮಾಜದ ಸ್ವಾಥ್ಯ ಕಾಪಾಡಲು ಮಾಧ್ಯಮ ಶ್ರಮ...

​ಸಮಾಜದ ಸ್ವಾಥ್ಯ ಕಾಪಾಡಲು ಮಾಧ್ಯಮ ಶ್ರಮ ವಹಿಸಲಿ: ನಾಡೊಜ ನಿಸಾರ್ ಅಹಮದ್

ಭಟ್ಕಳ ಪತ್ರಕರ್ತ ಸಂಘದ ಬೆಳ್ಳಿ ಮಹೋತ್ಸವ

ವಾರ್ತಾಭಾರತಿವಾರ್ತಾಭಾರತಿ8 Jan 2017 11:20 PM IST
share
​ಸಮಾಜದ ಸ್ವಾಥ್ಯ ಕಾಪಾಡಲು ಮಾಧ್ಯಮ ಶ್ರಮ ವಹಿಸಲಿ: ನಾಡೊಜ ನಿಸಾರ್ ಅಹಮದ್

ಭಟ್ಕಳ, ಜ.8: ಮಾಧ್ಯಮಗಳು ಜನರ ಮನಸ್ಸುಗಳನ್ನು ಕೆಡಿಸುವ ಕಾರ್ಯ ಮಾಡದೆ ಸಮಾಜದ ಸ್ವಾಸ್ಥ ಕಾಪಾಡುವ ಕೆಲಸ ಮಾಡಬೇಕಾಗಿದೆ ಎಂದು ನಿತ್ಯೋತ್ಸವ ಕವಿ ನಾಡೋಜ ಪ್ರೊ. ಕೆ. ಎಸ್. ನಿಸಾರ್ ಅಹಮದ್ ಹೇಳಿದರು.


 ಅವರು ಶನಿವಾರ ರಾತ್ರಿ ಸಾಗರ ರಸ್ತೆಯ ಶ್ರೀ ಗುರುಸುಧೀಂದ್ರ ಕಾಲೇಜು ಮೈದಾನಲ್ಲಿ ಭಟ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಬೆಳ್ಳಿ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.


 ಕ್ಷುಲ್ಲಕ ವಿಷಯಗಳನ್ನು ಮುಂದಿಟ್ಟುಕೊಂಡು ಗಂಟೆಗಟ್ಟಲೆ ಚರ್ಚಿಸುವ ಮಾಧ್ಯಮಗಳು ಜನರ ಸಮಸ್ಯೆಗಳನ್ನು ಮರೆಯುತ್ತಿವೆ. ಟಿಆರ್‌ಪಿಯೊಂದೇ ಅವರ ಮುಖ್ಯಗುರಿಯಾಗಿದೆ ಎಂದ ಅವರು, ಪತ್ರಕರ್ತನಾದವರು ಪಕ್ಷಾತೀತವಾಗಿ ವರ್ತಿಸಬೇಕು ಎಂದರು.


 ಕನ್ನಡ ಭಾಷೆಯ ಮೇಲೆ ಹಿಡಿತವಿಲ್ಲ. ಕನ್ನಡ ವಿಷಯಜ್ಞಾನ ಇಲ್ಲದ ಪತ್ರಕರ್ತರೇ ಇಂದು ಮಾಧ್ಯಮ ರಂಗದಲ್ಲಿ ತುಂಬಿ ಕೊಂಡಿದ್ದಾರೆ. ಇಂಗ್ಲಿಷ್ ಭಾಷೆಯನ್ನು ಕನ್ನಡೀಕರಿಸಿ ಕನ್ನಡವನ್ನು ಅಪಭೃಂಶವನ್ನಾಗಿ ಮಾಡುತ್ತಿದ್ದಾರೆ. ಸಂಸ್ಕೃತ ಭೂಯಿಷ್ಟ ಪದಗಳ ಬಳಕೆಯಿಂದ ಜನಸಾಮಾನ್ಯರಿಗೆ ಯಾವುದೇ ಪ್ರಯೋಜನವಾಗದು ಎಂದು ಅವರು ಇದೆ ವೇಳೆ ತಿಳಿಸಿದರು.


ಕೃತಕ ಭಾಷೆಯ ನಿರ್ಮಾಣದಿಂದಾಗಿ ಕನ್ನಡತನ ಹಾಳಾ ಗುತ್ತಿದೆ. ಇದು ನಿಲ್ಲಬೇಕು. ಈ ನಿಟ್ಟಿನಲ್ಲಿ ಪತ್ರಕರ್ತರಿಗೆ ವಿಶೇಷ ತರಬೇತಿಯ ಆವಶ್ಯಕತೆಯಿದೆ ಎಂದರು. ಸಿನೆಮಾ ಕ್ಷೇತ್ರವು ಅತ್ಯಂತ ಕಳಪೆಯಾಗಿದ್ದು ಕನ್ನಡವನ್ನು ಅಪಹಾಸ್ಯ ಮಾಡುವ ರೀತಿಯಲ್ಲಿ ದ್ವಂದ್ವಾರ್ಥ ನೀಡುವ ಪದಗಳ ಬಳಕೆ ಮಾಡಲಾಗುತ್ತಿದೆ ಎಂದು ಬೇಸರ ವ್ಯಕ್ತ ಪಡಿಸಿದರು.


ಕನ್ನಡ ಪತ್ರಿಕೆಗೆ 175 ವರ್ಷ ತುಂಬಿರುವ ಈ ಸಂದರ್ಭದಲ್ಲಿ ಕನ್ನಡ ಪತ್ರಿಕೆಗಳನ್ನು ಕೊಂಡು ಓದುವ ಪ್ರವೃತ್ತಿ ಬೆಳೆಸಬೇಕು. ಕನ್ನಡಿಗರಿಗೆ ಕೆಲಸಕೊಡಿಸುವಂತಹ ಹೊಣೆ ಸರಕಾರದ್ದು, ಇದನ್ನು ಶಾಸಕರು ವಿಧಾನಸಭೆಯಲ್ಲಿ ಪ್ರಶ್ನಿಸಬೇಕು ಎಂದು ಉಪಸ್ಥಿತ ಶಾಸಕರಿಗೆ ಸೂಚಿಸಿದರು.
ಮನರಂಜನೆಯ ಹೆಸರಿನಲ್ಲಿ ಸಣ್ಣ ಮಕ್ಕಳಿಂದ ಅಶ್ಲೀಲ ದೃಶ್ಯಗಳನ್ನು ತೋರಿಸಲಾಗುತ್ತಿದೆ. ಬಾಲ್ಯವನ್ನು ಬಾಲ್ಯತನದಿಂದಲೇ ಕಳೆಯಲು ಬಿಡಬೇಕು. ಬಿಗ್‌ಬಾಸ್ ಹೆಸರಿನಲ್ಲಿ ಭಾರತೀಯ ಸಂಸ್ಕೃತಿಯ ಮೇಲೆ ದಾಳಿ ಮಾಡಲಾಗುತ್ತಿದೆ. ಮಹಿಳೆಯರ ಮಾನ ಹರಾಜು ಹಾಕುವ ದೃಶ್ಯಾವಳಿಗಳು ನಿರ್ಮಿಸಲಾಗುತ್ತಿದೆ. ಪ್ರಚಾರಕ್ಕೆ ಮಹಿಳೆಯರನ್ನು ವ್ಯಾಪಕವಾಗಿ ಬಳಸಿ ಕೊಳ್ಳಲಾಗುತ್ತಿದೆ ಎಂದು ಬೇಸರಿಸಿದರು.


ಭಟ್ಕಳ ಸರ್ವಧರ್ಮದ ಬೀಡಾಗಿದ್ದು ಇಲ್ಲಿನ ನವಾಯತ್ ಸಮುದಾಯವು ಆರ್ಥಿಕವಾಗಿ ಬಹಳಷ್ಟು ಕೊಡುಗೆಯನ್ನು ನೀಡಿದೆ. ನಾಮಧಾರಿ, ಗೊಂಡ, ವೈದಿಕ ಸಮುದಾಯ ಎಲ್ಲರೊಂದಿಗೆ ಅನ್ಯೋನ್ಯವಾಗಿ ಬೆರೆತು ಸೌಹಾದರ್ ವಾತಾವರಣ ನಿರ್ಮಾಣಗೊಂಡಿದೆ ಎಂದು ಅವರು ಹೇಳಿದರು.
ಭಟ್ಕಳದ ಕಾರ್ಯನಿತರ ಪತ್ರಕರ್ತರ ಸಂಘ 25 ವರ್ಷಗಳು ಪೂರೈಸಿದ್ದು ಇಂದು ಹಬ್ಬದ ವಾತಾವರಣವನ್ನೇ ಸೃಷ್ಟಿಸಿದ್ದಾರೆ ಅಷ್ಟು ದೂರದಿಂದ ಬಂದ ತಮ್ಮ ಶ್ರಮ ಸಾರ್ಥಕವಾಯಿತು ಎಂದು ಅವರು ಹೇಳಿದರು.


ಶಾಸಕ ಮಾಂಕಾಳ್ ಎಸ್. ವೈದ್ಯ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎನ್.ರಾಜು, ಸಾಹಿತಿ ಡಾ.ಸೈಯದ್ ಝಮಿರುಲ್ಲಾ ಷರೀಫ್, ಸುವರ್ಣ ಕವರ್ ಸ್ಟೋರಿ ಸಂಪಾದಕಿ ವಿಜಯಲಕ್ಷ್ಮೀ ಶಿಬರೂರು, ಚಿತ್ರನಟ ಪ್ರೇಮ ಮತ್ತಿತರರು ಮಾತನಾಡಿದರು.
ತಂಝೀಮ್ ಪ್ರಧಾನ ಕಾರ್ಯದರ್ಶಿ ಮುಹಿದ್ದೀನ್ ಅಲ್ತಾಫ್ ಖರೂರಿ, ಶ್ರೀ ಗುರುಸುಧೀಂದ್ರ ಕಾಲೇಜಿನ ಟ್ರಸ್ಟಿ ರಾಜೇಶ್ ನಾಯಕ, ಉ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಾಯ ಭಟ್ಕ್ಕಳ, ಅನುಪಮಾ ಭಟ್, ಶ್ರೇಯಾ ಅಂಚನ್ ಮತ್ತಿತರರು ಉಪಸ್ಥಿತರಿದ್ದರು.


ಸಂಘದ ಅಧ್ಯಕ್ಷ ರಾಧಾಕೃಷ್ಣ ಭಟ್ ಪ್ರಸ್ತಾವಿಕವಾಗಿ ಮಾತನಾಡಿದರು.ಉಪಾಧ್ಯಕ್ಷ ಎಂ.ಆರ್. ಮಾನ್ವಿ ಸ್ವಾಗತಿಸಿದರು. ಕಾರ್ಯದರ್ಶಿ ಭಾಸ್ಕರ್ ನಾಯ್ಕ ವಂದಿಸಿದರು. ಶ್ರೀಧರ ಶೇಟ್ ಹಾಗೂ ಕಲ್ಪನಾ ಹೆಗಡೆ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X