ವಾಹನ ಪಾರ್ಕಿಂಗ್ ವ್ಯವಸ್ಥೆಗೆ ವಕೀಲರ ಮನವಿ

ಪುತ್ತೂರು, ಜ.9 : ಪುತ್ತೂರು ನ್ಯಾಯಾಲಯದ ಮುಂಬಾಗದಲ್ಲಿರುವ ಖಾಲಿ ಸ್ಥಳದಲ್ಲಿ ವಕೀಲರುಗಳ ವಾಹನ ಪಾರ್ಕಿಂಗ್ ವ್ಯವಸ್ಥೆ ಮಾಡುವಂತೆ ನಗರಸಭೆಯ ಅಧ್ಯಕ್ಷರಿಗೆ ವಕೀಲರ ಸಂಘದ ಪದಾಧಿಕಾರಿಗಳು ಸೋಮವಾರ ಮನವಿ ಸಲ್ಲಿಸಿ ಆಗ್ರಹಿಸಿದರು.
ನ್ಯಾಯಾಲಯ ಸಂಕೀರ್ಣದ ಆವರಣದ ಒಳಭಾಗದಲ್ಲಿ ವಾಹನ ಪಾರ್ಕಿಂಗ್‌ಗೆ ಸಾಕಷ್ಟು ಸ್ಥಳಾವಕಾಶ ಇಲ್ಲದಿರುವ ಕಾರಣ ಹೊರಭಾಗದಲ್ಲಿರುವ ಖಾಲಿ ಸ್ಥಳಕ್ಕೆ ಇಂಟರ್‌ಲಾಕ್ ಅಳವಡಿಸಿ ಪಾರ್ಕಿಂಗ್ ವ್ಯವಸ್ಥೇ ಮಾಡಿದಲಿಲ ನ್ಯಾಯಾಲಯಕ್ಕೆ ಬರುವ ವಕೀಲರುಗಳಿಗೆ ಕಾರು ಪಾರ್ಕಿಂಗ್ ಮಾಡಲು ಅನುಕೂಲವಾಗಲಿದೆ ಎಂದು ಮನವಿಯಲ್ಲಿ ವಿನಂತಿಸಲಾಗಿದೆ.
ಮನವಿ ಸಲ್ಲಿಸುವ ಸಂದರ್ಭದಲ್ಲಿ ಪುತ್ತೂರು ವಕೀಲರ ಸಂಘದ ಅಧ್ಯಕ್ಷ ಕೆ.ಭಾಸ್ಕರ ಕೋಡಿಂಬಾಳ, ಕಾರ್ಯದರ್ಶಿ ಕೃಷ್ಣ ಪ್ರಸಾದ್ ರೈ, ಉಪಾಧ್ಯಕ್ಷ ಮಹಾಬಲ ಗೌಡ, ಜೊತೆ ಕಾರ್ಯದರ್ಶಿ ದೀಪಕ್ ಕುಮಾರ್, ಖಜಾಂಜಿ ಕುಮಾರನಾಥ ಮತ್ತು ಹಿರಿಯ ವಕೀಲ ಬಿ. ನಿರ್ಮಲ್ ಕುಮಾರ್ ಜೈನ್ ಉಪಸ್ಥಿತರಿದ್ದರು.
Next Story





