Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಧರ್ಮಗಳ ಬಗ್ಗೆ ಪರಸ್ಪರ ಗೌರವವಿರಲಿ:...

ಧರ್ಮಗಳ ಬಗ್ಗೆ ಪರಸ್ಪರ ಗೌರವವಿರಲಿ: ಡಾ.ಉಮರ್ ಅಹ್ಮದ್ ಇಲ್ಯಾಸಿ

ಮಂಗಳೂರಿನಲ್ಲಿ ಅಂತರ್‌ಧರ್ಮೀಯ ಚಿಂತಕರ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ9 Jan 2017 9:21 PM IST
share
ಧರ್ಮಗಳ ಬಗ್ಗೆ ಪರಸ್ಪರ ಗೌರವವಿರಲಿ: ಡಾ.ಉಮರ್ ಅಹ್ಮದ್ ಇಲ್ಯಾಸಿ

ಮಂಗಳೂರು,ಜ.9: ಪರಸ್ಪರ ವಿಶ್ವಾಸ ಮತ್ತು ಪ್ರತಿಯೊಂದು ಧರ್ಮಗಳ ಬಗ್ಗೆ ಪರಸ್ಪರ ಗೌರವ ಹಾಗೂ ಭಾರತೀಯತೆಯನ್ನು ಅಳಗವಡಿಸಿಕೊಂಡರೆ ದೇಶದಲ್ಲಿ ಶಾಂತಿ, ಸೌಹಾರ್ದ ನೆಲಸಲಿದೆ ಎಂದು ಹೊಸದೆಹಲಿಯ ಮತಪಂಡಿತ ಡಾ.ಉಮರ್ ಅಹ್ಮದ್ ಇಲ್ಯಾಸಿ ಅಭಿಪ್ರಾಯಪಟ್ಟರು.

ನಗರದ ಹೋಟೆಲ್ ಓಶಿಯಲ್ ಪರ್ಲ್ ಸಭಾಂಗಣದಲ್ಲಿ ಸೋಮವಾರ ರೈಟ್ಸ್ ಅವಾರ್ನೆಸ್ ಆ್ಯಂಡ್ ನಾಲೇಜ್ ಸೊಸೈಟಿ (ರ್ಯಾಂಕ್ಸ್) ಆಯೋಜಿಸಿದ್ದ ‘ಶಾಂತಿ, ಸೌಹಾರ್ದ ಮತ್ತು ರಾಷ್ಟ್ರೀಯ ಭಾವೈಕ್ಯಕ್ಕಾಗಿ ಅಂತರ್‌ಧರ್ಮೀಯ ಚಿಂತಕರ ಸಮಾವೇಶ’ದಲ್ಲಿ ಅವರು ಮಾತನಾಡಿದರು.

ದೇಶದಲ್ಲಿ ಶಾಂತಿ ನೆಲೆಸುವ ನಿಟ್ಟಿನಲ್ಲಿ ಮುಸ್ಲಿಮ್ ರಾಷ್ಟ್ರೀಯ ಮಂಚ್ ಸ್ಥಾಪಿಸಲಾಗಿದೆ. ಇದೀಗ 1.5 ಲಕ್ಷ ಮಂದಿ ಮಂಚ್‌ನೊಂದಿಗಿದ್ದಾರೆ. ಗಲಭೆ ನಡೆದಲ್ಲೆಲ್ಲಾ ತೆರಳಿ ಸಂಬಂಧ ಬೆಳೆಸಲಾಗುತ್ತದೆ ಎಂದು ಅವರು ಹೇಳಿದರು.

ದ.ಕ.ಜಿಲ್ಲಾ ಖಾಝಿ ತ್ವಾಕಾ ಅಹ್ಮದ್ ಮುಸ್ಲಿಯಾರ್ ಮಾತನಾಡಿ, ಪಾಕಿಸ್ತಾನವು ಭಾರತ ಆಗುವ ತನಕ ಸಾವಿರ ವರ್ಷ ಯುದ್ಧ ಮಾಡುತ್ತೇವೆ ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ. ಅಖಂಡ ಭಾರತ ಸ್ಥಾಪನೆಯಾದರೆ ಮಾತ್ರ ಶಾಂತಿ ಸಾಧ್ಯ ಎಂದು ನಾನು ಕೂಡಾ ಮನಃಪೂರ್ವಕವಾಗಿ ಪುನರುಚ್ಚರಿಸುತ್ತೇನೆ ಎಂದರು.

ಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಸ್ವಾಮೀಜಿ ಮಾತನಾಡಿ, ಶಾಂತಿಯ ಮಂತ್ರವೇ ಎಲ್ಲ ಧರ್ಮಗಳ ಮೂಲವಾಗಿದೆ. ಸ್ವಾರ್ಥದಿಂದ ದ್ವೇಷ, ಅಶಾಂತಿ, ಯುದ್ಧಗಳು ಸಂಭವಿಸಿದರೆ, ನಿಸ್ವಾರ್ಥದಿಂದ ಮಾತ್ರ ಶಾಂತಿ ಸಾಧ್ಯ. ಅಶಾಂತಿ ಇದ್ದಲ್ಲಿ ಅಭಿವೃದ್ಧಿ ಅಸಾಧ್ಯ. ಹಿಂದೂ - ಮುಸ್ಲಿಂ ನಾಯಕರು ಒಂದಾದರೆ ಅನುಯಾಯಿಗಳೂ ಒಂದಾಗುತ್ತಾರೆ ಎಂದರು.

 ಕ್ರೈಸ್ತ ಧರ್ಮಗುರು ಫಾ.ವಲೇರಿಯನ್ ಡಿಸೋಜ ಮಾತನಾಡಿ, ಒಳ್ಳೆಯವರನ್ನು ಜನರು ಅನುಕರಿಸುತ್ತಾರೆ. ದೇವರನ್ನು ನಂಬುವವರು ಎಂದೂ ದ್ವೇಷ ಸಾಧಿಸಲಾರರು ಎಂದು ಅಭಿಪ್ರಾಯಪಟ್ಟರು.

ಜಾಗತಿಕ ನಿಯಮದಲ್ಲಿ ಜನ್ಮಭೂಮಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ವ್ಯಕ್ತಿಯೊಬ್ಬನನ್ನು ಗುರುತು ಹಿಡಿಯುವುದು ಆತನ ದೇಶದಿಂದಾಗಿದೆ. ಈ ನಿಯಮವನ್ನು ಸರಿಯಾಗಿ ಅರ್ಥ ಮಾಡಿಕೊಂಡರೆ ವಿಶ್ವದಲ್ಲಿ ಯಾವುದೇ ಕಲಹಗಳು ಉಂಟಾಗಲು ಸಾಧ್ಯವಿಲ್ಲ ಎಂದು ಮುಸ್ಲಿಮ್ ರಾಷ್ಟ್ರೀಯ ಮಂಚ್ ಮಾರ್ಗದರ್ಶಕ ಇಂದ್ರೇಶ್ ಕುಮಾರ್ ಹೇಳಿದರು.

ಬೆಂಗಳೂರು ಅಗಸ್ತ್ಯ ಆಶ್ರಮದ ರಮೇಶ್ ಗುರೂಜಿ, ಉಳ್ಳಾಲ ದರ್ಗಾ ಸಮಿತಿ ಅಧ್ಯಕ್ಷ ಅಬ್ದುಲ್ ರಶೀದ್ ಶುಭ ಹಾರೈಸಿದರು.

ರ್ಯಾಂಕ್ಸ್ ಅಧ್ಯಕ್ಷ ಹಾಗು ನಿವೃತ್ತ ಐಪಿಎಸ್ ಡಾ.ಎಂ.ಎನ್. ಕೃಷ್ಣಮೂರ್ತಿ ಸ್ವಾಗತಿಸಿದರು. ಮಂಜುಳಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಉದ್ಯಮಿ ಡಾ.ಪ್ರಶಾಂತ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X