ಶಾಕಿರಾ ಳಿಗೆ ಕನ್ನಡ ಮಾಧ್ಯಮ ಪ್ರಶಸ್ತಿ ಪ್ರದಾನ

ಮಂಗಳೂರು, ಜ.9: ಸುರತ್ಕಲ್ ಕೃಷ್ಣಾಪುರದ ಅಲ್ ಬದ್ರಿಯಾ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶಾಕಿರಾ 2015-16ನೆ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯ ಕನ್ನಡ ಮಾಧ್ಯಮದಲ್ಲಿ ಮಂಗಳೂರು ತಾಲೂಕು ಮಟ್ಟದಲ್ಲೇ ಅತೀ ಹೆಚ್ಚು ಅಂಕಗಳಿಸಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಇವರ ಈ ಸಾಧನೆಗಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ‘ಕನ್ನಡ ಮಾಧ್ಯಮ ಪ್ರಶಸ್ತಿ’ಯನ್ನು ಪ್ರದಾನ ಮಾಡಿದೆ ಎಂದು ಪ್ರಕಟನೆ ತಿಳಿಸಿದೆ.
Next Story





