ಮರದಿಂದ ಬಿದ್ದು ವ್ಯಕ್ತಿ ಸಾವು
ಾಗರ, ಜ.9: ತಾಲೂಕಿನ ಓತಗೋಡು ಗ್ರಾಮದಲ್ಲಿ ಅಡಿಕೆ ಕೊಯ್ಯುತ್ತಿದ್ದ ಕೂಲಿ ಕಾರ್ಮಿಕನೋರ್ವ ಮರದಿಂದ ಬಿದ್ದು ಮೃತಪಟ್ಟ ಘಟನೆ ಸೋಮವಾರ ನಡೆದಿದೆ. ಭೀಮನಕೋಣೆ ನಿವಾಸಿ ದಿನೇಶ್(25) ಎಂಬವರು ಓತಗೋಡು ಆರ್.ವಿ.ಅಶೋಕ ಎಂಬವರ ತೋಟದಲ್ಲಿ ಅಡಿಕೆ ಕೊಯ್ಯುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ತಕ್ಷಣ ಅವರನ್ನು ಉಪವಿಭಾಗೀಯ ಆಸ್ಪತ್ರೆಗೆ ಕರೆ ತಂದು ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
Next Story





