ಕಥುವಾ: ಕೋಮು ಘರ್ಷಣೆ
ಐವರು ಪೊಲೀಸರ ಸಹಿತ 9 ಮಂದಿಗೆ ಗಾಯ
ಜಮ್ಮು,ಜ.9: ಕಥುವಾ ಜಿಲ್ಲೆಯಲ್ಲಿ ಎರಡು ಕೋಮುಗಳಿಗೆ ಸೇರಿದ ಗುಂಪುಗಳ ನಡುವೆ ಸೋಮವಾರ ನಡೆದ ಘರ್ಷಣೆಯಲ್ಲಿ ಐವರು ಪೊಲೀಸರು ಸೇರಿದಂತೆ 9 ಮಂದಿ ಗಾಯಗೊಂಡಿದ್ದಾರೆ. ಜಿಲ್ಲೆಯ ಹರಿಯಾ ಚಾಕ್ ಗಡಿ ಪ್ರದೇಶದಲ್ಲಿ ಭೂವಿವಾದಕ್ಕೆ ಸಂಬಂಧಿಸಿ ಎರಡು ಸಮುದಾಯಗಳಿಗೆ ಸೇರಿದ ಜನರ ನಡುವೆ ಘರ್ಷಣೆ ಭುಗಿಲೆದ್ದಿತೆಂದು ಪೊಲೀಸರು ತಿಳಿಸಿದ್ದಾರೆ. ಬೀದಿಕಾಳಗದಲ್ಲಿ ತೊಡಗಿದ್ದ ಗುಂಪುಗಳನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದರು ಹಾಗೂ ಅಶ್ರುವಾಯು ಸೆಲ್‌ಗಳನ್ನು ಸಿಡಿಸಿದ್ದಾರೆಂದು ಮೂಲಗಳು ಹೇಳಿವೆ. ಶಾಂತಿ ಕಾಪಾಡುವ ಸಲುವಾಗಿ ಭಾರೀ ಸಂಖ್ಯೆಯಲ್ಲಿ ಹೆಚ್ಚುವರಿ ಪೊಲೀಸ್ ಪಡೆ ಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆಯೆಂದು ಅವು ಹೇಳಿವೆ.
ಪ್ರಸ್ತುತ ಪರಿಸ್ಥಿತಿನ್ನು ನಿಯಂತ್ರಣಕ್ಕೆ ತರಲಾಗಿದ್ದು, ಘಟನೆಯ ಬಗ್ಗೆ ತನಿಖೆ ನಡೆಸಲಾಗುತ್ತಿದೆಯೆಂದು ಕಥುವಾದ ಹಿರಿಯ ಪೊಲೀಸ್ ಅಧೀಕ್ಷಕ ಪವನ್ ಪಾರಿಹಾರ್ ತಿಳಿಸಿದ್ದಾರೆ.
Next Story





