Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. 200 ಸಿರಿಯಾ ನಿರಾಶ್ರಿತರಿಗೆ ಆಶ್ರಯ...

200 ಸಿರಿಯಾ ನಿರಾಶ್ರಿತರಿಗೆ ಆಶ್ರಯ ನೀಡಿದ ಕೆನಡಾ ಉದ್ಯಮಿ ಜಿಮ್

ವಾರ್ತಾಭಾರತಿವಾರ್ತಾಭಾರತಿ10 Jan 2017 11:48 AM IST
share
200 ಸಿರಿಯಾ ನಿರಾಶ್ರಿತರಿಗೆ ಆಶ್ರಯ ನೀಡಿದ ಕೆನಡಾ ಉದ್ಯಮಿ ಜಿಮ್

ಟೊರಂಟೋ, ಜ.10: ಸಿರಿಯಾ ನಿರಾಶ್ರಿತರು ಹತ್ತು ಹಲವು ಸಮಸ್ಯೆಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ ಸುಮಾರು 200 ನಿರಾಶ್ರಿತರಿಗೆ ಆಶ್ರಯ ಒದಗಿಸಿ ಮಾನವೀಯತೆ ಮೆರೆದಿದ್ದಾರೆ ಕೆನಡಾದ ಉದ್ಯಮಿ ಜಿಮ್ ಎಸ್ಟಿಲ್‌ಲ್.

ನೈಋತ್ಯ ಒಂಟಾರಿಯೋ ಪಟ್ಟಣವಾದ ಗುವೆಲ್ಫ್ ಪಟ್ಟಣದ ನಿವಾಸಿಯಾಗಿರುವ ಜಿಮ್ ಎಸ್ಟಿಲ್‌ಲ್ ಅವರಿಗೆ 2015ರಲ್ಲಿ ಸಿರಿಯಾ ನಿರಾಶ್ರಿತರ ಸಮಸ್ಯೆಗಳ ಬಗ್ಗೆ ಓದಿ ಮನ ಕರಗಿತ್ತು. ಇವರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಸಾಕಷ್ಟು ಕೆಲಸಗಳಾಗುತ್ತಿಲ್ಲ ಎಂದು ಅರಿತ ಅವರು ಈ ನಿರಾಶ್ರಿತರಿಗೆ ಏನಾದರೂ ಸಹಾಯ ಮಾಡಲೇಬೇಕೆಂದು ಮನಸ್ಸು ಮಾಡಿದ್ದರು. ಗೃಹೋಪಯೋಗಿ ಉಪಕರಣಗಳ ತಯಾರಿಕಾ ಸಂಸ್ಥೆ ಡ್ಯಾನ್ಬಿ ಇದರ ಸಿಇಒ ಆಗಿರುವ ಜಿಮ್ ಎಸ್ಟಿಲ್‌ಲ್ ಯೋಜನೆಯೊಂದನ್ನು ಹಾಕಿದರು. ಮೊದಲಾಗಿ 1.1 ಮಿಲಿಯನ್ ಅಮೆರಿಕನ್ ಡಾಲರ್ ಹೂಡಿಕೆ ಮಾಡಿ ಸುಮಾರು 50 ನಿರಾಶ್ರಿತ ಕುಟುಂಬಗಳನ್ನು ಕೆನಡಾಗೆ ಕರೆಸಲು ಯೋಚಿಸಿ ಈ ಕಾರ್ಯಕ್ಕಾಗಿ ಸಮುದಾಯ ಅಭಿವೃದ್ಧಿ ಸಂಘಟನೆಗಳ ಸಹಾಯ ಯಾಚಿಸಲು ನಿರ್ಧರಿಸಿದರು.

ಸ್ವಯಂಸೇವಕರ ಸಹಾಯದಿಂದ ಹಲವು ತಂಡಗಳನ್ನು ರಚಿಸಿ ಪ್ರತಿಯೊಂದು ತಂಡವು ನಿರಾಶ್ರಿತರ ಪುನರ್ವಸತಿ ಸಂಬಂಧ ವಿವಿಧ ಕಾರ್ಯಗಳನ್ನು ನಿರ್ವಹಸಿಲು ಆರಂಭಿಸಿದವು.

ತನ್ನ ನಾಗರಿಕರಿಗೆ ಪ್ರವರ್ತಕ ಸಂಘಟನೆಗಳ ಸಹಾಯದೊಂದಿಗೆ ನಿರಾಶ್ರಿತರಿಗೆ ಸಹಾಯ ಒದಗಿಸಲು ಕೆನಡಾ ಆಡಳಿತ ಅನುವು ಮಾಡಿ ಕೊಡುತ್ತಿರುವುದು ಅವರಿಗೆ ವರದಾನವಾಗಿತ್ತು.

ಈ ಹಿಂದೆ ಬ್ಲ್ಯಾಕ್ ಬೆರ್ರಿ ಫೋನ್ ತಯಾರಿಕಾ ಸಂಸ್ಥೆ ಮೋಷನ್ ಇಲ್ಲಿ ನಿರ್ದೇಶಕರಾಗಿ ಕೆಲಸ ನಿರ್ವಹಿಸಿದ್ದ ಜಿಮ್ ತಮ್ಮದೇ ಉದ್ಯಮ ಸ್ಥಾಪಿಸಿ ಯಶಸ್ಸಿನ ಉತ್ತುಂಗಕ್ಕೇರಿದವರು. ನಿರಾಶ್ರಿತರಿಗೆ ಸಹಾಯ ಮಾಡುವಲ್ಲಿಯೂ ಅವರು ದೊಡ್ಡ ಸಾಧನೆ ಮಾಡಬೇಕೆಂಬ ಇಚ್ಛೆ ಹೊಂದಿದ್ದರು.

ಸಿರಿಯಾದ ನಾಗರಿಕ ಯುದ್ಧದಲ್ಲಿ ನಿರಾಶ್ರಿತರಾದವರಿಗೆ ಸಹಾಯ ಮಾಡಲು ತುದಿಗಾಲಲ್ಲಿ ನಿಂತಿದ್ದ ಸುಮಾರು 10 ವಿವಿಧ ಧರ್ಮಾಧರಿತ ಸಂಘಟನೆಗಳನ್ನು ಒಗ್ಗೂಡಿಸಿತಮ್ಮ ಕಾರ್ಯಕ್ಕೆ ಕೈ ಹಾಕಿದರು.
ಈ ಯೋಜನೆಯ ಬಗ್ಗೆ ಸ್ಥಳೀಯ ಪತ್ರಿಕೆಯೊಂದು ನವೆಂಬರ್ 2015ರಲ್ಲಿ ಲೇಖನವೊಂದನ್ನು ಪ್ರಕಟಿಸಿತ್ತು ಇದನ್ನು ಅರಬಿಕ್ ಭಾಷೆಗೆ ಭಾಷಾಂತರಿಸಿ ವಿವಿಧೆಡೆ ವಿತರಿಸಲಾಯಿತು. ಇದರ ಪರಿಣಾಮವೆಂಬಂತೆ ಟರ್ಕಿ, ಲೆಬನಾನ್, ಸಿರಿಯಾ ಮುಂತಾಡೆಗಳಿಂದ ಜನರು ಅವರನ್ನು ಸಂಪರ್ಕಿಸಿ ಸಹಾಯ ಯಾಚಿಸಲು ಆರಂಭಿಸಿದ್ದರು.

ಹಲವಾರು ಅಡೆತಡೆಗಳ ನಡುವೆಯೂ ಆಯ್ದ 58 ಕುಟುಂಬಗಳ ಪೈಕಿ 47 ಕುಟುಂಬಗಳು ಡಿಸೆಂಬರ್ 2016ರಲ್ಲಿ ಗುವೆಲ್ಫ್ ಗೆ ಬಂದಿಳಿದವು. ತಮ್ಮ ಸಂಸ್ಥೆಯಲ್ಲಿ ನಿರಾಶ್ರಿತರಿಗೆ ಉದ್ಯೋಗ ಒದಗಿಸುವ ಯೋಜನೆ, ಅವರಿಗೆ ಇಂಗ್ಲಿಷ್ ಕಲಿಸುವ ಕಾರ್ಯಕ್ರಮ ಹಮ್ಮಿಕೊಂಡ ಅವರು ಹಲವರಿಗೆ ತಮ್ಮದೇ ಉದ್ಯಮ ಸ್ಥಾಪಿಸಲು ಸಹಾಯ ಮಾಡಲು ಮುಂದಾದರು. ಇಲ್ಲಿಯ ತನಕ ಅವರು ಸುಮಾರು 200 ನಿರಾಶ್ರಿತರಿಗೆ ಸಹಾಯ ಮಾಡಿದ್ದಾರೆ.

ನನ್ನಲ್ಲಿ ಸಹಾಯ ಮಾಡುವ ಮನಸ್ಸಿದೆ, ಅದಕ್ಕೆ ತಕ್ಕಂತೆ ಸಂಪನ್ಮೂಲಗಳೂ ಇವೆ ಹಾಗೂ ಯೋಜನೆ ಕಾರ್ಯಗತಗೊಳಿಸುವ ಕಳಕಳಿಯೂ ಇದೆ ಎಂದು ಹೇಳುತ್ತಾರೆ ಎಸ್ಟಿಲ್‌ಲ್.

ತಾವು ಚಿಕ್ಕವರಿದ್ದಾಗ ತಮ್ಮ ಹೆತ್ತವರು ಇಬ್ಬರು ಉಗಾಂಡದ ನಿರಾಶ್ರಿತರಿಗೆ ಸಹಾಯ ಮಾಡಿದ್ದು ತನ್ನ ಮೇಲೆ ಪ್ರಭಾವ ಬೀರಿತ್ತು ಎಂದು ಅವರು ನೆನಪಿಸುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X