ಕೃಷ್ಣಾಪುರ: ‘ಅರಿಯಿರಿ ಮನುಕುಲದ ಪ್ರವಾದಿಯನ್ನು’ ಅಭಿಯಾನ

ಸುರತ್ಕಲ್, ಜ.10: ಭಾರತದಲ್ಲಿ ನಾಗರಿಕ ಕಾನೂನು ಹಾಗೂ ಸಾಮಾಜಿಕ ನ್ಯಾಯ ಮತ್ತು ಪ್ರವಾದಿ ಮುಹಮ್ಮದ್(ಸ.) ಎಂಬ ಕೇಂದ್ರೀಯ ವಿಷಯದಲ್ಲಿ 2016ರ ಡಿಸೆಂಬರ್16ರಿಂದ 2017ರ ಫೆಬ್ರವರಿ 3ರ ತನಕ ಯುನಿವೆಫ್ ಕರ್ನಾಟಕ ಆಯೋಜಿಸಿರುವ ‘ಅರಿಯಿರಿ ಮನುಕುಲದ ಪ್ರವಾದಿಯನ್ನು’ ಎಂಬ ಅಭಿಯಾನದ ಪ್ರಯುಕ್ತ ಕೃಷ್ಣಾಪುರದ ಫಿಝಾ ಗ್ರೌಂಡ್‌ನಲ್ಲಿ ಬೃಹತ್ ಸಾರ್ವಜನಿಕ ಸಭೆ ಜರಗಿತು.
ಯುನಿವೆಫ್ ಕರ್ನಾಟಕ ಅಧ್ಯಕ್ಷ ರಫೀಉದ್ದೀನ್ ಕುದ್ರೋಳಿಯವರು ‘ಶರೀಅತ್ ನಮ್ಮ ಕಾನೂನು ಪ್ರವಾದಿ(ಸ.) ನಮ್ಮ ನಾಯಕ’ ಎಂಬ ವಿಷಯದಲ್ಲಿ ಪ್ರಮುಖ ಭಾಷಣ ಮಾಡುತ್ತಾ ಇಸ್ಲಾಮ್ ತಂದೆ ತಾಯಿಗೆ ಕೊಟ್ಟ ಮಹತ್ವ ಹಾಗೂ ಆ ನಿಟ್ಟಿನಲ್ಲಿ ಪ್ರವಾದಿ (ಸ) ರ ಜನಜಾಗೃತಿಯ ಬಗ್ಗೆ ವಿವರಿಸಿದರು.
ಜಿಲ್ಲಾಧ್ಯಕ್ಷ ಸೈಫುದ್ದೀನ್ ಕುದ್ರೋಳಿ ಕಾರ್ಯಕ್ರಮ ನಿರೂಪಿಸಿದರು. ಸಯೀದ್ ಅಹ್ಮದ್ ಕಿರಾಅತ್ ಪಠಿಸಿದರು.
ಕಾರ್ಯಕ್ರಮ ಸಂಚಾಲಕ ಸಲೀಮ್ ಮಲಾರ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಅಡ್ವೊಕೇಟ್ ಸಿರಾಜುದ್ದೀನ್ ವಂದಿಸಿದರು.
Next Story





