ರಾಷ್ಟ್ರಮಟ್ಟದ ಬಾಲಕಿಯರ ವಾಲಿಬಾಲ್ : ಕೇರಳ, ತಮಿಳುನಾಡು ತಂಡಗಳು ಕ್ವಾರ್ಟರ್ ಫೈನಲ್ ಗೆ
ಬೆಳ್ತಂಗಡಿ, ಜ.10 : ಉಜಿರೆಯ ರತ್ನವರ್ಮ ಹೆಗ್ಗಡೆ ಕ್ರೀಂಡಾಂಗಣದಲ್ಲಿ ನಡೆಯುತ್ತಿರುವ ರಾಷ್ಟ್ರಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಬಲಿಷ್ಠ ತಂಡಗಳಾದ ಕೇರಳ, ತಮಿಳುನಾಡು, ಹರಿಯಾಣ , ಪಶ್ಚಿಮ ಬಂಗಾಳ, ಉತ್ತರಪ್ರದೇಶ ತಂಡಗಳು ತಮ್ಮ ಪಂದ್ಯಗಳನ್ನು ಗೆದ್ದುಕೊಂಡು ಕ್ವಾರ್ಟರ್ ಫೈನಲ್ ಹಂತವನ್ನು ಪ್ರವೇಶಿಸಿದೆ.
ಉತ್ತರ ಪ್ರದೇಶ ತಂಡ ದೆಹಲಿ ತಂಡವನ್ನು ನೇರ ಸೆಟ್‌ಗಳಲ್ಲಿ ಸೋಲಿಸಿ ಲೀಗ್ ಹಂತದಲ್ಲಿ ಅಜೇಯವಾಗಿ ಕ್ವಾರ್ಟರ್ ಫೈನಲ್‌ಗೆ ಅರ್ಹತೆ ಪಡೆದರೆ, ಕೇರಳ ತಂಡ ಬಲಿಷ್ಠ ಪಂಜಾಬ್ ತಂಡವನ್ನು ನೇರ ಸೆಟ್‌ಗಳಲ್ಲಿ ಮಣಿಸಿ ಮುಂದಿನ ಹಂತಕ್ಕೆ ಅರ್ಹತೆಯನ್ನು ಪಡೆದುಕೊಂಡಿತ್ತು. ಹರಿಯಾಣ ತಂಡ ಮಧ್ಯಪ್ರದೇಶ ತಂಡವನ್ನು ನೇರ ಸೆಟ್‌ಗಳಲ್ಲಿ ಮಣಿಸಿ ಮುಂದಿನ ಹಂತಕ್ಕೇರಿತ್ತು, ಪಶ್ಚಿಮ ಬಂಗಾಳ ತಂಡ ಜಾರ್ಖಂಡ್ ತಂಡವನ್ನು ಮಣಿಸಿ ಕ್ವಾರ್ಟರ್ಫೈನಲ್‌ಗೇರಿತ್ತು, ತಮಿಳುನಾಡು ತಂಡ ಬಲಿಷ್ಠ ಗುಜರಾತ್ ತಂಡವನ್ನು 3-1 ಸೆಟ್‌ಗಳಲ್ಲಿ ಸೋಲಿಸಿ ಅಂತಿಮ ಎಂಟರ ಹಂತಕ್ಕೆ ಅರ್ಹತೆಯನ್ನು ಪಡೆದುಕೊಂಡಿದೆ.
Next Story





