ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ ಸಭೆ
ಮಕ್ಕಳ ಹಕ್ಕು ರಕ್ಷಣೆ ನಮ್ಮ ಕರ್ತವ್ಯ: ಜಿಲ್ಲಾಧಿಕಾರಿ

ಚಿಕ್ಕಮಗಳೂರು, ಜ.10: ಸಂಕಷ್ಟದಲ್ಲಿರುವ ಮಕ್ಕಳ ಹಕ್ಕುಗಳನ್ನು ರಕ್ಷಿಸಿ ಅವರು ಬಾಲ್ಯವನ್ನು ಅರ್ಥಪೂರ್ಣವಾಗಿ ಅನುಭವಿಸುವಂತೆ ಮಾಡುವುದು ನಾಗರಿಕ ಸಮಾಜದ ಹಾಗೂ ಅಧಿಕಾರಿಗಳ ಆದ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಸತ್ಯವತಿ ತಿಳಿಸಿದರು. ಅವರು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಕ್ಕಳು ಸ ಮಾಜದ ಆಸ್ತಿ. ಮಕ್ಕಳು ಅನೇಕ ಕಾರಣಗಳಿಂದ ತೊಂದರೆ, ಹಿಂಸೆ, ದೌರ್ಜನ್ಯ ಹಾಗೂ ಶೋಷಣೆಗೆ ಒಳಗಾಗುತ್ತಿದ್ದು, ಹೀಗಾಗದಂತೆ ತಡೆಯುವುದು ಎಲ್ಲರ ಆದ್ಯ ಕರ್ತವ್ಯವಾಗಿದೆ. ಮಕ್ಕಳಿಗೆ ಸಂರಕ್ಷಣೆ ಒದಗಿಸುವಲ್ಲಿ ವಿವಿಧ ಇಲಾಖೆಗಳ ಕಾರ್ಯಗಳು ಪೂರ್ಣ ಪ್ರಮಾಣದಲ್ಲಿ ಸಫಲವಾಗಿಲ್ಲ.
ಮುಂದಿನ ದಿನಗಳಲ್ಲಿ ಹೀಗಾಗದಂತೆ ಎಚ್ಚರಿಕೆ ವಹಿಸುವ ಸೂಚನೆ ನೀಡಿದರು.
ಮಕ್ಕಳ ಹಕ್ಕುಗಳ ಉಲ್ಲಂಘನೆಯಾದಾಗ ಅದರ ಸ್ವರೂಪ ಬಹಳ ಅಮಾನುಷ
ವಾಗಿರುತ್ತದೆ ಎಂದ ಅವರು, ಮಕ್ಕಳ ಪರವಾದ ಕಾನೂನುಗಳ ಬಗ್ಗೆ ಅರಿವು ಮೂಡಿಸಲು ಮಕ್ಕಳ ಹಕ್ಕು ಕಾಯ್ದೆಯ ಬಗ್ಗೆ ಸಪ್ತಾಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆಂದು ಸಲಹೆ ಮಾಡಿದರು. ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ಎಚ್.ಸಿ. ನಟರಾಜ್ ಮಾತನಾಡಿ, ಬಾಲ ಮಂದಿರದಲ್ಲಿರುವ ಮಕ್ಕಳು ಮುಕ್ತ ವಾತವರಣದಲ್ಲಿ ಬೆಳೆಯಬೇಕೆಂಬ ಆಶಯದೊಂದಿಗೆ ಶಾಲೆಗೆ ಕಳಿಸಲಾಗುತ್ತದೆ. ಆದರೆ ಮಕ್ಕಳು ಶಾಲೆಯಿಂದ ಹಿಂದಿರುಗದೇ ಕಾಣೆಯಾಗುತ್ತಿರುತ್ತಾರೆ. ಇಂತಹ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಸಹಕರಿಸಬೇಕು. ಕಾಫಿ ತೋಟದ ಕಾರ್ಮಿಕರ ಮಕ್ಕಳಿಗೆ ಟೆಂಟ್ ಶಾಲೆ ತೆರೆದು ಶಿಕ್ಷಣ ನೀಡುವುದು ಅವಶ್ಯ ಎಂದರು.
ಮಕ್ಕಳ ಮೇಲಾಗುವ ದೌರ್ಜನ್ಯಗಳನ್ನು ಹಾಗೂ ಶೋಷಣೆಗಳನ್ನು ತಪ್ಪಿಸಲು ಆಪರೇಷನ್ಸ್ ಸ್ಮೈಲ್ ನಂತಹ ಕಾರ್ಯಕ್ರಮಗಳನ್ನು ಪ್ರತಿ 3 ತಿಂಗಳಿಗೊಮ್ಮೆ ಹಮ್ಮಿಕೊಳ್ಳಬೇಕೆಂದು ಸಲಹೆ ಮಾಡಿದರು.
ಸಭೆಯಲ್ಲಿ ಉಪಕಾರ್ಯದರ್ಶಿ ರಾಜಗೋಪಾಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಸಿ ಬಸವರಾಜಯ್ಯ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ರಂಗನಾಥ್, ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ ಸದಸ್ಯೆ ಯಶೋದಾ ಲಕ್ಷ್ಮಣ್ ಗೌಡ ಉಪಸ್ಥಿತರಿದ್ದರು.
‘ಹೆಣ್ಣುಮಕ್ಕಳ ದೌರ್ಜನ್ಯ ತಡೆಗೆ ಕಾರ್ಮಿಕ ಇಲಾಖೆ ಮುಂದಾಗಲಿ’
ಕಾಫಿ ತೋಟಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕೂಲಿ ಕಾರ್ಮಿಕರ ಹೆಣ್ಣು ಮಕ್ಕಳ ಮೇಲೆ ಆಗುತ್ತಿರುವ ದೌರ್ಜನ್ಯದ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಅಲ್ಲದೆ ಕಾರ್ಮಿಕರಿಗೆ ಮಜೂರಿ ಹಣವು ಸರಿಯಾಗಿ ತಲುಪುತ್ತಿಲ್ಲ. ಈ ಬಗ್ಗೆ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಎಚ್ಚರ ವಹಿಸಬೇಕು. ಕಾರ್ಮಿಕ ಇಲಾಖೆಯ ಅಧಿಕಾರಿಗಳು ಇತರ ಇಲಾಖೆಯವರು ಕರೆದಾಗ ಮಾತ್ರ ತಮ್ಮ ಕಾರ್ಯ ಚಟುವಟಿಕೆಗಳನ್ನು ಮಾಡದೆ ಸ್ವಯಂಪ್ರೇರಿತವಾಗಿ ಕೆಲಸ ಕಾರ್ಯಗಳನ್ನು ನಿರ್ವಹಿಸಬೇಕು. ಕಳೆದ ಎಪ್ರಿಲ್ ತಿಂಗಳಿನಿಂದ ಎಷ್ಟು ಕಾಫಿ ತೋಟಗಳಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿರುವ ಬಗ್ಗೆ ವರದಿ ನೀಡುವಂತೆ ತಿಳಿಸಿದರು.
ಸಾರ್ವಜನಿಕ ಅಹವಾಲು ಆಲಿಸುವ ಹಿನ್ನೆಲೆ ಜಿಲ್ಲೆಯ ಸಮಸ್ಯೆ ಪರಿಹಾರ
ಚಿಕ್ಕಮಗಳೂರು, ಸಾರ್ವಜನಿಕ ಅಹವಾಲನ್ನು 15 ದಿನಕ್ಕೊಮ್ಮೆ ಆಲಿಸುತ್ತಿರುವ ಹಿನ್ನೆಲೆಯಲ್ಲಿ ಈ ಜಿಲ್ಲೆಯ ಸಮಸ್ಯೆಗಳು ಪೂರ್ಣ ಪ್ರಮಾಣದಲ್ಲಿ ಪರಿಹಾರಗೊಳಿಸಲು ನೆರವಿಗೆ ಬರುತ್ತಿದೆ. ಹಲವು ಸಮಸ್ಯೆಗಳಿಗೆ ತಕ್ಷಣ ಪರಿಹಾರ ಕಂಡುಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಿ. ಸತ್ಯವತಿ ಹೇಳಿದರು.
ಅವರು ತಮ್ಮನ್ನು ಭೇಟಿಯಾದ ಸುದ್ದಿಗಾರ ರೊಂದಿೆ ಮಾತನಾಡಿ, ಜಿಲ್ಲೆಯಲ್ಲಿನ ಭೂ ವಿವಾ ದದ ಸಮಸ್ಯೆಗಳನ್ನು ತಕ್ಷಣ ಇತ್ಯರ್ಥ ಪಡಿಸಲು ಸಾಧ್ಯವಾಗುತ್ತಿಲ್ಲ. ಅನೇಕ ಭೂ ಸಂಬಂಧಿ ದೂರುಗಳಲ್ಲಿ ಹಲವು ರೀತಿಯ ಕಾನೂನು ತೊಡಕುಗಳು ತಳಕು ಹಾಕಿಕೊಂಡಿರುತ್ತವೆ. ಉಳಿದಂತೆ ಹಲವು ಸಮಸ್ಯೆಗಳನ್ನು ದೂರು ಕೇಳಿಬಂದ ಕೂಡಲೇ ಇತ್ಯರ್ಥಪಡಿಸಲಾಗುತ್ತಿದೆ. ಕೆಲವನ್ನು ಅತೀ ಶೀಘ್ರದಲ್ಲಿ ಪರಿಹರಿಸಲು ಮಾರ್ಗೋಪಾಯ ಕಂಡುಕೊಳ್ಳಲಾಗುತ್ತದೆ ಎಂದು ನುಡಿದರು.
ಸಮಸ್ಯೆಯನ್ನು ನೇರವಾಗಿ ಹಾಗೂ ದಾಖಲಿಸಿಕೊಂಡ ದೂರುಗಳನ್ನು ಬೆನ್ನು ಹತ್ತುತ್ತಾರೆ ಎಂಬುದು ತಿಳಿದಾಕ್ಷಣವೇ ಅಧೀನ ಕಚೇರಿ ಮತ್ತು ಅಧಿಕಾರಿಗಳು ಚುರುಕಾಗುತ್ತಾರೆ. ಆವರೆಗೂ ಹೊರ ಬಾರದ ಕಡತಗಳು ಹೊರಗೆ ಬರುತ್ತವೆ. ಇಷ್ಟು ಪ್ರಯೋಜನವಂತೂ ಸಾರ್ವಜನಿಕ ಸಮಸ್ಯೆ ಆಲಿಕೆಯಿಂದ ಸಾಧ್ಯವಾಗಿದೆ ಎಂದು ಹೇಳಿದರು.







