ಇಂದು ಜಿಲ್ಲಾ ಸಾಂಸ್ಕೃತಿಕ ಸೌರಭ ಕಾರ್ಯಕ್ರಮ
ಮೂಡುಬಿದಿರೆ, ಜ.10: ದಕ್ಷಿಣ ಕನ್ನಡ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಡೆಸುವ ಜಿಲ್ಲಾ ಸಾಂಸ್ಕೃತಿಕ ಸೌರಭ ಕಾರ್ಯಕ್ರಮವು ಜ.11ರಂದು ಮೂಡುಬಿದಿರೆಯ ಮಹಾವೀರ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.
ಶಾಸಕ ಕೆ.ಅಭಯಚಂದ್ರ ಜೈನ್ ಕಾರ್ಯಕ್ರಮ ಉದ್ಘಾಟಿಸಿ, ಅಧ್ಯಕ್ಷತೆ ವಹಿಸುವರು. ಮೂಡುಬಿದಿರೆಯ ಪುರಸಭಾದ ಎಲ್ಲಾ ಸದಸ್ಯರು ಮತ್ತು ಕನ್ನಡಪರ ಸಂಘಟನೆಗಳ ಸಹಕಾರದೊಂದಿಗೆ ಕಾರ್ಯಕ್ರಮ ನಡೆಯಲಿವೆ.
9 ಸಾಂಸ್ಕೃತಿಕ ತಂಡಗಳು ಮತ್ತು 2 ತಂಡಗಳ ಪ್ರಾಯೋಜಿತ ಕಾರ್ಯಕ್ರಮಗಳು ಬೆಳಗ್ಗೆ 9:30ರಿಂದ ಸಂಜೆ 5 ರವರೆಗೆ ನಡೆಯಲಿವೆ ಎಂದು ಪ್ರಕಟನೆ ತಿಳಿಸಿದೆ.
Next Story





