ಮೋದಿ ವಿರುದ್ಧದ ಸಹರಾ -ಬಿರ್ಲಾ ಡೈರಿ ಆರೋಪ ಅರ್ಜಿ ತಿರಸ್ಕರಿಸಿದ ಸುಪ್ರೀಂ

ಹೊಸದಿಲ್ಲಿ, ಜ.11: ಸಹರಾ -ಬಿರ್ಲಾ ಡೈರಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಹಣ ಪಡೆದಿರುವ ಆರೋಪಕ್ಕೆ ಸಂಬಂಧಿಸಿ ತನಿಖೆಗೆ ಕೋರಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ತಿರಸ್ಕರಿಸಿದೆ.
ಗುಜರಾತ್ ನ ಮುಖ್ಯ ಮಂತ್ರಿಯಾಗಿದ್ದಾಗ ಹಣ ಪಡೆದಿರುವ ಬಗ್ಗೆ ಸಹರಾ -ಬಿರ್ಲಾ ಡೈರಿಯಲ್ಲಿ ಮೋದಿ ಅವರ ಹೆಸರಿದೆ ಎಂದು ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದರು.
ವಕೀಲ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಭೂಷಣ್ ಈ ಸಂಬಂಧ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
Next Story





