Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಪಾಳುಬಿದ್ದಿರುವ ಕಲ್ಲುಕೋರೆಗಳಿಗೆ...

​ಪಾಳುಬಿದ್ದಿರುವ ಕಲ್ಲುಕೋರೆಗಳಿಗೆ ತಡೆಬೇಲಿ: ಜಿ.ಪಂ. ಅಧ್ಯಕ್ಷರ ಸೂಚನೆ

ವಾರ್ತಾಭಾರತಿವಾರ್ತಾಭಾರತಿ11 Jan 2017 8:40 PM IST
share
​ಪಾಳುಬಿದ್ದಿರುವ ಕಲ್ಲುಕೋರೆಗಳಿಗೆ ತಡೆಬೇಲಿ: ಜಿ.ಪಂ. ಅಧ್ಯಕ್ಷರ ಸೂಚನೆ

ಮಂಗಳೂರು , ಜ.11: ಜಿಲ್ಲೆಯಲ್ಲಿ ಪಾಳು ಬಿದ್ದಿರುವ ಕಲ್ಲುಕೋರೆಗಳು ಅಪಾಯಕಾರಿಯಾಗಿ ಪರಿಣುಸುತ್ತಿದ್ದು, ಕೂಡಲೇ ಇವುಗಳಿಗೆ ತಡೆಗೋಡೆ ಅಥವಾ ಬೇಲಿ ಹಾಕಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಸೂಚಿಸಿದ್ದಾರೆ.
 

ಅವರು ಬುಧವಾರ ಜಿ.ಪಂ. ಸಭಾಂಗಣದಲ್ಲಿ ನಡೆದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ (ಕೆಡಿಪಿ) ಅಧ್ಯಕ್ಷತೆ ವಹಿಸಿ ಮಾತನಾಡಿದರು. 

ಪಾಳು ಬಿದ್ದಿರುವ ಕಲ್ಲುಕೋರೆಗಳಿಗೆ ಬಿದ್ದು ಸಾವನ್ನಪ್ಪಿರುವ ಹಲವಾರು ಪ್ರಕರಣಗಳು ನಡೆಯುತ್ತಿವೆ. ಕೋರೆ ಕೆಲಸ ಮುಗಿದ ನಂತರ ಯಾವುದೇ ರಕ್ಷಣಾ ತಡೆಗಳನ್ನು ನಿರ್ಮಿಸದೆ ಪಾಳುಬಿಡುತ್ತಿರುವುದರಿಂದ ಸಾರ್ವಜನಿಕರಿಗೆ ಅಪಾಯಕಾರಿಯಾಗಿದೆ. ಈ ನಿಟ್ಟಿನಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯು ಕೂಡಲೇ ಕ್ರಮ ಕೈಗೊಳ್ಳಲು ಅವರು ಸೂಚಿಸಿದರು.

 ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಎಂ.ಆರ್. ರವಿ ಮಾತನಾಡಿ, ಜಿಲ್ಲೆಯಲ್ಲಿರುವ ಕೋರೆಗಳು ಹಾಗೂ ಪಾಳುಬಿದ್ದಿರುವ ಕೋರೆಗಳ ಸಂಪೂರ್ಣ ವಿವರಗಳನ್ನು ಮುಂದಿನ ಸಭೆಗೆ ನೀಡುವಂತೆ ಸೂಚಿಸಿದರು. ಅಲ್ಲದೆ, ಪಾಳು ಬಿದ್ದಿರುವ ಕೋರೆಗಳ ಜಾಗದ ಮಾಲಕರನ್ನು ಕಂಡುಹುಡುಕಿ, ಅವರಿಂದಲೇ ಸದರಿ ಕೋರೆಗೆ ತಡೆಗೋಡೆ ಅಥವಾ ಬೇಲಿ ಹಾಕಿಸಲು ಕ್ರಮ ಕೈಗೊಳ್ಳುವಂತೆ ಗಣಿ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

 ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಬೋರ್‌ವೆಲ್ ಪಂಪ್ ಇಳಿಸಲು ವಿಳಂಬವಾಗುತ್ತಿರುವ ಬಗ್ಗೆ ಕೃಷಿ ಮತ್ತು ಕೈಗಾರಿಕಾ ಸ್ಥಾಯೀ ಸಮಿತಿ ಅಧ್ಯಕ್ಷ ಸರ್ವೋತ್ತಮ ಗೌಡ ಸಭೆಯಲ್ಲಿ ಪ್ರಸ್ತಾಪಿಸಿದರು. ಮುಂದಿನ ಕೆಡಿಪಿ ಸಭೆಯೊಳಗೆ ಈಗಾಗಲೇ ಕೊರೆದಿರುವ ಬೋರ್‌ವೆಲ್‌ಗಳಿಗೆ ಪಂಪ್‌ಸೆಟ್‌ಗಳನ್ನು ಅಳವಡಿಸಿ, ಅವು ಕಾರ್ಯ ಆರಂಭಿಸುವಂತೆ ಕ್ರಮ ಕೈಗೊಳ್ಳಲು ಜಿ.ಪಂ. ಅಧ್ಯಕ್ಷರು ಸೂಚಿಸಿದರು. ಜಿಲ್ಲೆಯ ಕೆಲವು ಶಾಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು, ಶಾಲೆಗಳ ಕುಡಿಯುವ ನೀರಿನ ಕಾಮಗಾರಿಗಳನ್ನು ಆದ್ಯತೆಯಲ್ಲಿ ಪೂರ್ತಿಗೊಳಿಸಬೇಕು ಎಂದು ಅಧ್ಯಕ್ಷರು ತಿಳಿಸಿದರು.

ಆಹಾರ ಸುರಕ್ಷತೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಗ್ರಾಮ ಪಂಚಾಯತ್, ನಗರ ಸ್ಥಳೀಯ ಸಂಸ್ಥೆಗಳು, ಶಾಲಾ-ಕಾಲೇಜುಗಳೊಂದಿಗೆ ಸೇರಿ ಕಾರ್ಯಕ್ರಮಗಳನ್ನು ಏರ್ಪಡಿಸುವಂತೆ ಆಹಾರ ಸುರಕ್ಷತಾ ಅಧಿಕಾರಿಗೆ ಜಿ.ಪಂ. ಸಿಇಓ ಸೂಚಿಸಿದರು.

ಜಿ.ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ ಮಾತನಾಡಿ, ವಸತಿ ಯೋಜನೆಗಳಲ್ಲಿ ಫಲಾನುಭವಿಗಳ ನಿವೇಶನ ಒದಗಿಸಲು ಜಿಲ್ಲೆಯ ಹಲವೆಡೆ ಭೂದಾಖಲೆಗಳ ಮತ್ತು ಸಮರ್ಪಕ ಸರ್ವೇ ನಡೆಸದೆ ವಿಳಂಬವಾಗುತ್ತಿದ್ದು, ಈ ನಿಟ್ಟಿನಲ್ಲಿ ಸರಕಾರದ ವಸತಿ ಯೋಜನೆಗಳ ನಿವೇಶನಗಳಿಗೆ ಆದ್ಯತೆಯಲ್ಲಿ ಸರ್ವೇ ಕಾರ್ಯ ನಡೆಸುವಂತೆ ತಿಳಿಸಿದರು.

ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಮಾತನಾಡಿ, ಜಿಲ್ಲೆಯ ಕೆಲವು ಸರಕಾರಿ ಶಾಲೆಗಳಲ್ಲಿ ವಾರ್ಷಿಕೋತ್ಸವ ಅಥವಾ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಗಳು ನಡೆಯುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭಾ ಪ್ರದರ್ಶನಕ್ಕೆ ಅವಕಾಶ ಸಿಗುತ್ತಿಲ್ಲ. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಸರಕಾರಿ ಶಾಲೆಗಳಲ್ಲಿ ಕಡ್ಡಾಯವಾಗಿ ವಾರ್ಷಿಕೋತ್ಸವ ನಡೆಸುವಂತೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
 ಸಾಮಾಜಿಕ ನ್ಯಾಯ ಸ್ಥಾಯೀ ಸಮಿತಿ ಅಧ್ಯಕ್ಷೆ ಆಶಾ ತಿಮ್ಮಪ್ಪಗೌಡ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X