Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ​32.23 ಕೋ.ರೂ. ವೆಚ್ಚದಲ್ಲಿ 133 ಸರಕಾರಿ...

​32.23 ಕೋ.ರೂ. ವೆಚ್ಚದಲ್ಲಿ 133 ಸರಕಾರಿ ಸಿಟಿ ಬಸ್ ಖರೀದಿ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಅನುಮೋದನೆ

ಶಿವಮೊಗ್ಗ ಜಿಲ್ಲಾ ಕಾರಾಗೃಹಕ್ಕೆ ಕೇಂದ್ರ ಕಾರಾಗೃಹದ ಭಾಗ್ಯ

ವಾರ್ತಾಭಾರತಿವಾರ್ತಾಭಾರತಿ11 Jan 2017 10:59 PM IST
share
​32.23 ಕೋ.ರೂ. ವೆಚ್ಚದಲ್ಲಿ 133 ಸರಕಾರಿ ಸಿಟಿ ಬಸ್ ಖರೀದಿ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಅನುಮೋದನೆ

ಶಿವಮೊಗ್ಗ, ಜ. 11: ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಜರಗಿದ ಸಚಿವ ಸಂಪುಟ ಸಭೆಯಲ್ಲಿ, ಶಿವಮೊಗ್ಗ ನಗರಕ್ಕೆ ಹೊಸ ಮಿನಿ ಸಿಟಿ ಬಸ್‌ಗಳ ಖರೀದಿಗೆ ಹಾಗೂ ಹೊರವಲಯ ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಕಾರಾಗೃಹವನ್ನು ಕೇಂದ್ರ ಬಂದಿಖಾನೆಯಾಗಿ ಮೇಲ್ದರ್ಜೆಗೇರಿಸುವ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.


ಸಚಿವ ಸಂಪುಟ ಸಭೆಯಲ್ಲಿ ಶಿವಮೊಗ್ಗ, ತುಮಕೂರು, ಮೈಸೂರು ಹಾಗೂ ಇತರೆ ನಗರಗಳಲ್ಲಿ ನಗರ ಸಾರಿಗೆ ಉದ್ದೇಶಕ್ಕೆ 133 ಮಿನಿ ಬಸ್‌ಗಳನ್ನು 32.23 ಕೋಟಿ ರೂ. ವೆಚ್ಚದಲ್ಲಿ ಖರೀದಿಸಲು ಅನುಮತಿ ಸಿಕ್ಕಿದೆ. ಬಸ್‌ಗಳ ಖರೀದಿಗೆ ಕೇಂದ್ರ ಸರಕಾರ 19.34 ಕೋಟಿ ರೂ. ನೀಡಲಿದ್ದು, ರಾಜ್ಯ ಸರಕಾರ 9.64 ಕೋಟಿ ರೂ. ನೀಡಲಿದೆ.


 ಶಿವಮೊಗ್ಗ ನಗರದಲ್ಲಿ ಕೇಂದ್ರ ಸರಕಾರವು ಜೆನ್ ನರ್ಮ್ ಯೋಜನೆಯಡಿ 65 ಸರಕಾರಿ ಸಿಟಿ ಬಸ್ ಓಡಿಸಲು ಅನುಮತಿ ನೀಡಿದೆ. ಈಗಾಗಲೇ 20 ಬಸ್‌ಗಳ ಸಂಚಾರ ಆರಂಭವಾಗಿದೆ. ಬಾಕಿ 45 ಬಸ್‌ಗಳ ಸಂಚಾರ ಇನ್ನಷ್ಟೆ ಆರಂಭವಾಗಬೇಕಾಗಿದೆ.


ಾಜ್ಯ ಸರಕಾರವು ಹೊಸ ನಗರ ಸಾರಿಗೆ ಬಸ್‌ಗಳ ಖರೀದಿಗೆ ಅನುಮೋದನೆ ನೀಡಿರುವುದರಿಂದ, ಮುಂದಿನ ದಿನಗಳಲ್ಲಿ ಶಿವಮೊಗ್ಗ ನಗರದಲ್ಲಿ ಮತ್ತಷ್ಟು ಹೊಸ ಸರಕಾರಿ ಸಿಟಿ ಬಸ್‌ಗಳು ಓಡಾಡುವ ಸಾಧ್ಯತೆಯಿದೆ. ಇದರಿಂದ ನಗರದ ಲಕ್ಷಾಂತರ ನಾಗರಿಕರಿಗೆ ಅನುಕೂಲವಾಗಲಿದೆ. ಹಾಲಿ ನಗರದಲ್ಲಿರುವ ಕಾರಾಗೃಹವು ವಿಚಾರಣಾಧೀನ ಬಂದಿಖಾನೆಯಾಗಿದೆ.

ಈ ಹಿನ್ನೆಲೆಯಲ್ಲಿ ನಗರದ ಹೊರವಲಯ ಸೋಗಾನೆ ಗ್ರಾಮದಲ್ಲಿ ಹೊಸ ಕಾರಾಗೃಹ ನಿರ್ಮಾಣ ಮಾಲಾಗುತ್ತಿದ್ದು, ಈಗಾಗಲೇ ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣ ಹಂತಕ್ಕೆ ಬಂದಿದೆ. ಈ ನೂತನ ಕಾರಾಗೃಹವನ್ನು ಕೇಂದ್ರ ಕಾರಾಗೃಹವಾಗಿ ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ನೂತನ ಕಾರಾಗೃಹದಲ್ಲಿ 100 ಮಹಿಳಾ ಹಾಗೂ 500 ಪುರುಷ ಸಜಾ ಬಂದಿಗಳನ್ನು ಇರಿಸಲು ಅವಕಾಶವಾಗುವಂತೆ ಶಿವಮೊಗ್ಗದ ನೂತನ ಕಾರಾಗೃಹವನ್ನು ಕೇಂದ್ರ ಕಾರಾಗೃಹವಾಗಿ ಮೇಲ್ದರ್ಜೆಗೇರಿಸಲು ಸರಕಾರದಿಂದ ಅಧಿಕೃತವಾಗಿ ಅನುಮತಿ ಸಿಕ್ಕಂತಾಗಿದೆ.

ಕೆಎಸ್ಸಾರ್ಟಿಸಿಗೆ ಉಚಿತ ಭೂಮಿ
ನಗರದ ಸಂತೆಕಡೂರು ಗ್ರಾಮದಲ್ಲಿ ಸರಕಾರಿ ಸಿಟಿ ಬಸ್ ಡಿಪೋ ನಿರ್ಮಾಣಕ್ಕೆ ಅಗತ್ಯವಿರುವ ನಿವೇಶನಕ್ಕೆ ಜಿಲ್ಲಾಡಳಿತವು ದರ ನಿಗದಿ ಮಾಡಿ ಕೆಎಸ್ಸಾರ್ಟಿಸಿಗೆ ಮಂಜೂರು ಮಾಡಿತ್ತು. ಉಚಿತವಾಗಿ ಭೂಮಿ ನೀಡುವಂತೆ ಕೆಎಸ್ಸಾರ್ಟಿಸಿಯು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು.
 ಈ ಹಿಂದಿನ ಸಚಿವ ಸಂಪುಟ ಸಭೆಯಲ್ಲಿ ಇದು ಚರ್ಚೆಯಾಗಿ ಸರಕಾರಿ ಸಿಟಿ ಬಸ್ ಡಿಪೋ ನಿರ್ಮಾಣಕ್ಕೆ ಉಚಿತವಾಗಿ ನೀಡುವ ನಿರ್ಧಾರವನ್ನು ಕೈಗೊಳ್ಳಲಾಗಿತ್ತು. ಪಾರ್ಕ್ ನಿರ್ಮಿಸಲು ಸಾರ್ವಜನಿಕರ ಆಗ್ರಹ


ನೂತನ ಕಾರಾಗೃಹ ಕಾರ್ಯಾರಂಭಗೊಂಡ ನಂತರ ನಗರದ ಹೃದಯ ಭಾಗದಲ್ಲಿರುವ ಹಳೆಯ ಕಾರಾಗೃಹ ಪ್ರದೇಶವನ್ನು ಸಾರ್ವಜನಿಕ ಉಪಯೋಗಕ್ಕೆ ಮೀಸಲಿಡಬೇಕೆಂದು ಸ್ಥಳೀಯ ಸಾರ್ವಜನಿಕರ ಒತ್ತಾಯವಾಗಿದೆ.

ಬೆಂಗಳೂರಿನ ಫ್ರೀಡಂ ಪಾರ್ಕ್ ಮಾದರಿಯಲ್ಲಿ ಈ ಪ್ರದೇಶ ಅಭಿವೃದ್ಧಿಪಡಿಸಬೇಕೆಂಬ ಯೋಜನೆಯನ್ನು ಈ ಹಿಂದೆ ಜಿಲ್ಲಾಡಳಿತ ರೂಪಿಸಿತ್ತು. ಈ ಬಗ್ಗೆ ರಾಜ್ಯ ಸರಕಾರ ಇನ್ನಷ್ಟೆ ಸೂಕ್ತ ನಿರ್ಧಾರ ಕೈಗೊಳ್ಳಬೇಕಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X