Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಇವೆರಡು ರಾಜ್ಯದ ಅತ್ಯಂತ ಕಲುಷಿತ ನಗರಗಳು...

ಇವೆರಡು ರಾಜ್ಯದ ಅತ್ಯಂತ ಕಲುಷಿತ ನಗರಗಳು : ಅಧ್ಯಯನ ವರದಿಯಲ್ಲಿ ಬಹಿರಂಗ

ವಾರ್ತಾಭಾರತಿವಾರ್ತಾಭಾರತಿ12 Jan 2017 7:46 PM IST
share
ಇವೆರಡು ರಾಜ್ಯದ ಅತ್ಯಂತ ಕಲುಷಿತ ನಗರಗಳು : ಅಧ್ಯಯನ ವರದಿಯಲ್ಲಿ ಬಹಿರಂಗ

ಹೊಸದಿಲ್ಲಿ, ಜ.12: ಬೆಂಗಳೂರು ಮತ್ತು ತುಮಕೂರು ರಾಜ್ಯದ ಅತ್ಯಂತ ಕಲುಷಿತ ನಗರಗಳಾಗಿವೆ ಎಂದು ಇತ್ತೀಚೆಗೆ ನಡೆಸಲಾದ ಅಧ್ಯಯನದಿಂದ ತಿಳಿದುಬಂದಿದೆ.

    ರಾಜ್ಯದ 20 ನಗರಗಳ ವಾಯುಮಾಲಿನ್ಯ ದತ್ತಾಂಶಗಳನ್ನು ಹೋಲಿಕೆ ಮಾಡಿದ್ದು ಬೆಂಗಳೂರು, ತುಮಕೂರು ಮತ್ತು ದಾವಣಗೆರೆ ಅತ್ಯಂತ ಕಲುಷಿತ ನಗರಗಳೆಂದು ಘೋಷಿಸಲ್ಪಟ್ಟಿದೆ. ರಾಯಚೂರು, ಕಲಬುರ್ಗಿ, ಹುಬ್ಬಳ್ಳಿ ಮತ್ತು ಧಾರವಾಡ ನಗರಗಳ ವಾಯುಮಾಲಿನ್ಯ ಮಟ್ಟ ಕೂಡಾ ರಾಷ್ಟ್ರೀಯ ಸರಾಸರಿಗಿಂತ ಮಿಗಿಲಾಗಿದೆ.

   ಗ್ರೀನ್‌ಪೀಸ್ ಎಂಬ ಎನ್‌ಜಿಒ ಸಂಸ್ಥೆ 24 ರಾಜ್ಯಗಳ 168 ನಗರಗಳನ್ನು ಅಧ್ಯಯನಕ್ಕೆ ಆಯ್ದುಕೊಂಡಿತ್ತು. ಉತ್ತರ ಭಾಗದ ನಗರಗಳಿಗೆ ಹೋಲಿಸಿದಲ್ಲಿ ದಕ್ಷಿಣ ಭಾಗದ ನಗರಗಳ ಲ್ಲಿ ಸ್ವಚ್ಛವಾದ ಗಾಳಿಯ ಪ್ರಮಾಣ ಹೆಚ್ಚಿದೆ ಎಂದು ವರದಿ ತಿಳಿಸಿದೆ. ಪಿಎಂ-10 (10 ಮೈಕ್ರಾನ್ ಡಯಾಮೀಟರ್ ಪ್ರಮಾಣದ ದೂಳಿನ ಕಣ) ಪ್ರಮಾಣವನ್ನು ಆಧಾರವಾಗಿಟ್ಟುಕೊಂಡು ಈ ಅಧ್ಯಯನ ನಡೆಸಲಾಗಿದೆ. ಬೆಂಗಳೂರು ಮತ್ತು ತುಮಕೂರಿನಲ್ಲಿ ವಾರ್ಷಿಕ ಪಿಎಂ-10 ಪ್ರಮಾಣ ಪ್ರತೀ ಕ್ಯೂಬಿಕ್ ಮೀಟರ್‌ಗೆ ಸುಮಾರು 120 ಮೈಕ್ರೋಗ್ರಾಂ ಮತ್ತು ದಾವಣಗೆರೆಯಲ್ಲಿ 100 ಮೈಕ್ರೋಗ್ರಾಂ ಆಗಿದೆ. ರಾಯಚೂರಿನಲ್ಲಿ ಈ ಪ್ರಮಾಣ 90 ಆಗಿದೆ. (ರಾಷ್ಟ್ರೀಯ ಸರಾಸರಿ 60 ).

         ಡೀಸೆಲ್ ಜನರೇಟರ್ ಸೆಟ್‌ಗಳು ಬೆಂಗಳೂರಿನ ವಾಯುಮಾಲಿನ್ಯಕ್ಕೆ ಪ್ರಧಾನ ಕಾರಣ ಎಂದು ಪೂರಕವಾಗಿ ನಡೆಸಲಾದ ಇನ್ನೊಂದು ಸಮೀಕ್ಷೆಯಲ್ಲಿ ತಿಳಿದು ಬಂದಿದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ನೇತೃತ್ವದಲ್ಲಿ ಇಂಧನ ಮತ್ತು ಸಂಪನ್ಮೂಲ ಸಂಸ್ಥೆ ಈ ಸಮೀಕ್ಷೆ ನಡೆಸಿತ್ತು. ವಾಯುಮಾಲಿನ್ಯ ಹೆಚ್ಚಳಕ್ಕೆ ಸಾಗಣೆ ವ್ಯವಸ್ಥೆ ಕೂಡಾ ಕಾರಣವಾಗಿದೆ. ವಾಹನಗಳ ಸಂಖ್ಯೆ ಹೆಚ್ಚಿರುವ ಕಾರಣವಾಹನಗಳಿಂದ ಹೊರಸೂಸುವ ಹೊಗೆಯ ಪ್ರಮಾಣ ಕೂಡಾ ಹೆಚ್ಚಿ ವಾಯುಮಾಲಿನ್ಯ ಹೆಚ್ಚಾಗಲು ಕಾರಣವಾಗುತ್ತಿದೆ. ಬೆಂಗಳೂರು ನಗರದಲ್ಲಿ ಹೊಗೆ ಉಗುಳುವ ಬೃಹತ್ ಕೈಗಾರಿಕೆಗಳು ಕಡಿಮೆ ಇರುವ ಕಾರಣ ವಾಯುಮಾಲಿನ್ಯ ಹೆಚ್ಚಳದಲ್ಲಿ ಕೈಗಾರಿಕೆಗಳ ಪಾಲು ಹೆಚ್ಚೇನಿಲ್ಲ. ಆದರೆ ಪೀಣ್ಯ ಕೈಗಾರಿಕಾ ವಲಯದಲ್ಲಿ ಕೈಗಾರಿಕೆಗಳು ವಾಯುಮಾಲಿನ್ಯ ಹೆಚ್ಚಳಕ್ಕೆ ಕಾರಣವಾಗಿದೆ.

 ರಾಷ್ಟ್ರೀಯ ಮಟ್ಟದಲ್ಲಿ 2015ರಲ್ಲಿ ನಡೆಸಲಾದ ಸಮೀಕ್ಷೆಯ ಪ್ರಕಾರ ಅತ್ಯಂತ ಕಲುಷಿತ 20 ನಗರಗಳಲ್ಲಿ ಪಿಎಂ-10 ಮಟ್ಟವು 268ರಿಂದ 168 ಮೈಕ್ರೋಗ್ರಾಂ ನಡುವೆ ಇತ್ತು.

ಇದರಲ್ಲಿ ದಿಲ್ಲಿ 268 ಮೈಕ್ರೋಗ್ರಾಂ ಮಟ್ಟದೊಂದಿಗೆ ಪ್ರಥಮ ಸ್ಥಾನದಲ್ಲಿದ್ದರೆ ಉತ್ತರ ಪ್ರದೇಶದ ಗಾಝಿಯಾಬಾದ್, ಅಲ್ಲಹಾಬಾದ್ ಮತ್ತು ಬರೇಲಿ ಆ ನಂತರದ ಸ್ಥಾನದಲ್ಲಿತ್ತು.

 ಉಸಿರಾಟಕ್ಕೆ ಸಮಸ್ಯೆಯಾಗುವ ಗಾಳಿಯಿಂದ ಈಗ ನಾವು ಆತಂಕಿತರಾಗಿದ್ದೇವೆ. ವಾಯುಮಾಲಿನ್ಯದ ಕಾರಣ ಸಾವಿಗೀಡಾಗುವವರ ಪ್ರಮಾಣ ತಂಬಾಕು ಸೇವನೆಯಿಂದ ಮೃತಪಡುವವರ ಪ್ರಮಾಣಕ್ಕಿಂತ ಸ್ವಲ್ಪ ಕಡಿಮೆ ಆಗಿದೆ ಎಂಬುದನ್ನು ಗಮನಿಸಬೇಕು ಎಂದು ಗ್ರೀನ್‌ಪೀಸ್ ಸಂಸ್ಥೆಯ ಅಧಿಕಾರಿ ಸುನಿಲ್ ದಹಿಯಾ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X