ರಾಜ್ಯಮಟ್ಟದ ಸರಕಾರಿ ನೌಕರರ ಕ್ರೀಡಾಕೂಟ
ಉಡುಪಿ, ಜ.12: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಫರ್ಧೆ ಜ.20,21,22ರಂದು ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ನಡೆಯಲಿದೆ.
ಕ್ರೀಡಾಕೂಟವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಉಡುಪಿ ಜಿಲ್ಲೆಯಿಂದ ಆಯ್ಕೆಯಾದ ಕ್ರೀಡಾಪಟುಗಳು ಜ.19ರಂದು ಶಿವಮೊಗ್ಗದಲ್ಲಿ ಹೆಸರು ನೋಂದಣಿ ಮಾಡುವಂತೆ ಸೂಚಿಸಲಾಗಿದೆ.
ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಸಹಾಯಕ ನಿರ್ದೇಶಕ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣ ಅಜ್ಜರಕಾಡು ಇಲ್ಲಿಂದ ಗುರುತಿನ ಚೀಟಿಯನ್ನು ಪಡೆದು ಆಯಾ ಇಲಾಖಾ ಮುಖ್ಯಸ್ಥರ ದೃಢೀಕರಣದೊಂದಿಗೆ ಶಿವಮೊಗ್ಗಕ್ಕೆ ತೆರಳುವಂತೆ ಜಿಲ್ಲಾ ಅಧ್ಯಕ್ಷ ಸುಬ್ರಮಣ್ಯ ಶೇರಿಗಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಡಾ.ರೋಶನ್ ಶೆಟ್ಟಿ, ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಅಥವಾ ಜಿಲ್ಲಾ ಸರಕಾರಿ ನೌಕರರ ಸಂಘ ಉಡುಪಿ (9448409658) ಇವರನ್ನು ಸಂಪರ್ಕಿಸುವಂತೆ ಕೋರಲಾಗಿದೆ.
Next Story





