Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯುವ ಸಮೂಹ ಡಿಜಿಟಲ್ ಪಾವತಿಯತ್ತ ಗಮನ...

ಯುವ ಸಮೂಹ ಡಿಜಿಟಲ್ ಪಾವತಿಯತ್ತ ಗಮನ ಹರಿಸಬೇಕಿದೆ- ನಿರ್ಮಲಾ ಸೀತಾರಾಮನ್

ವಾರ್ತಾಭಾರತಿವಾರ್ತಾಭಾರತಿ12 Jan 2017 11:46 PM IST
share
ಯುವ ಸಮೂಹ ಡಿಜಿಟಲ್ ಪಾವತಿಯತ್ತ ಗಮನ ಹರಿಸಬೇಕಿದೆ- ನಿರ್ಮಲಾ ಸೀತಾರಾಮನ್

ಪುತ್ತೂರು,ಜ.12: ದೇಶದಲ್ಲಿ ಸಾಕ್ಷರತೆ, ತಂತ್ರಜ್ಞಾನಗಳು ಸಾಕಷ್ಟು ಮುಂದುವರಿದಿದ್ದರೂ ಶೇ.90 ಮಂದಿ ನಗದು ರೂಪದಲ್ಲಿಯೇ ವ್ಯವಹಾರ ನಡೆಸುತ್ತಿದ್ದಾರೆ. ಯುವ ಸಮೂಹ ಡಿಜಿಟಲ್ ಪಾವತಿಯತ್ತ ಗಮನ ಹರಿಸಬೇಕಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಹಣಕಾಸು ಖಾತೆಯ ರಾಜ್ಯ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

ಅವರು ಗುರುವಾರ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ಆಯೋಜಿಸಲಾದ ರೇಡಿಯೋ ಪಾಂಚಜನ್ಯ ಬಾನುಲಿ ಕೇಂದ್ರ ಹಾಗೂ ವಿವೇಕಾನಂದ ಜಯಂತಿ ಆಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

 ದೇಶವನ್ನು ತೆರಿಗೆ ಕಳ್ಳರಿಂದ ತಪ್ಪಿಸಲು ಸರ್ಕಾರ ಆದೇಶ ತೆರಿಗೆ ಪಾವತಿಗೆ ಸಾಕಷ್ಟು ಅವಕಾಶಗಳನ್ನು ನೀಡಿತ್ತು. ಆದರೆ ದೇಶದ 24 ಲಕ್ಷ ಮಂದಿ ಮಾತ್ರ ತೆರಿಗೆ ಪಾವತಿಸಿ ಪ್ರಾಮಾಣಿಕತೆಯನ್ನು ಮೆರೆದರು. ಉಳಿದವರು ತಪ್ಪಿಸಿಕೊಳ್ಳದಂತೆ ಸರ್ಕಾರ ತೆರಿಗೆ ಕಳ್ಳರ ವಿರುದ್ದ ಸಮರ ಸಾರಿದೆ. ಇದರಿಂದಾಗಿ ಶೇ.80ಕ್ಕೂ ಅಧಿಕ ಕಪ್ಪು ಹಣ ಹೊರಗೆ ಬಂದಿದೆ ಎಂದು ಹೇಳಿದರು. ಮಾತೃ ಭಾಷೆಯಲ್ಲಿನ ಸೊಗಡನ್ನು ಜಗತ್ತಿನ ಇತರ ಯಾವ ಭಾಷೆಯಿಂದಲೂ ನೀಡಲು ಅಸಾಧ್ಯ. ರೇಡಿಯೋ ಪಾಂಚಜನ್ಯ ಸ್ಥಳೀಯ ಭಾಷೆಯನ್ನು ಉಳಿಸಿ ಬೆಳೆಸುವ ಕಾರ್ಯ ಮಾಡಬೇಕು ಎಂದರು. ದಿಕ್ಸೂಚಿ ಭಾಷಣ ಮಾಡಿದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿತ ಪ್ರಾಂತ ಸಹಪ್ರಚಾರ ಪ್ರಮುಖ್ ಪ್ರದೀಪ್ ಮಾತನಾಡಿ ಚರ್ಚೆ, ಯೋಚನೆ, ಉಪದೇಶ ಮಾಡುವವರು ಸಾಕಷ್ಟು ಮಂದಿಯಿದ್ದರೂ ಯಾರೂ ಕಾರ್ಯಗತಗೊಳಿಸುವವರಿಲ್ಲ. ಸ್ವಾಮೀ ವಿವೇಕಾನಂದರು ಯೋಚನೆ ಮಾಡಿದ್ದನ್ನು ತಳಮಟ್ಟದಲ್ಲಿ ಅನುಷ್ಠಾನಗೊಳಿಸದ್ದರು. ಇದರಿಂದಾಗಿ ಸ್ವಾಮಿ ವಿವೇಕಾನಂದರು ನಮಗೆ ಇಂದಿಗೂ ಮಾದರಿಯಾಗಿದ್ದಾರೆ ಎಂದರು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಪ್ರದಾನಿ ನರೇಂದ್ರ ಮೋದಿ ಅವರು ನೋಟು ಅಮಾನ್ಯೀಕರಣದ ಬಗ್ಗೆ ಮಾತನಾಡಿದ ವಿಚಾರಗಳ ಕಿರು ಹೊತ್ತಗೆಯನ್ನು ಬಿಡುಗಡೆಗೊಳಿಸಲಾಯಿತು ಮತ್ತು ವಿವೇಕಾನಂದ ಜಯಂತಿ ಪ್ರಯುಕ್ತ ಆಯೋಜಿಸಲಾದ ವಿವಿಧ ಸ್ಪರ್ಧೆಗಳ ಬಹುಮಾನ ವಿತರಿಸಲಾಯಿತು. ವೇದಿಕೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ವಿವೇಕಾನಂದ ಕಾಲೇಜ್‌ನ ಸ್ಥಾಪಕ ಸಮಚಾಲಕ ಕೆ. ರಾಮಭಟ್ ಉರಿಮಜಲು, ರೇಡಿಯೋ ಪಾಂಚಜನ್ಯ ಸಮಿತಿ ಕಾರ್ಯದರ್ಶಿ ಶ್ರೀಕಾಂತ ಕೊಳತ್ತಾಯ, ಸದಸ್ಯ ಬಿ.ಟಿ. ರಂಜನ್ ಮತ್ತಿತರರು ಉಪಸ್ಥಿತರಿದ್ದರು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಎಂ. ಕೃಷ್ಣ ಭಟ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ರೇಡಿಯೋ ಪಾಂಚಜನ್ಯ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ಕುಂಟಿನಿ ವಂದಿಸಿದರು. ಉಪನ್ಯಾಸಕಿ ವಿಜಯ ಸರಸ್ವತಿ ಕಾರ್ಯಕ್ರಮ ನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X