ಜ.15: ಶಿವಯೋಗಿ ಸಿದ್ದರಾಮೇಶ್ವರ ಜಯಂತಿ
ಮಂಗಳೂರು, ಜ.12: ದ.ಕ. ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಆಚರಣೆಯು ಜ.15ರಂದು ಕೊಡಿಯಾಲ್‌ಬೈಲ್‌ನ ಕುದ್ಮುಲ್ ರಂಗರಾವ್ ಸಾರ್ವಜನಿಕ ವಿದ್ಯಾರ್ಥಿ ನಿಲಯದಲ್ಲಿ ಏರ್ಪಡಿಸಲಾಗಿದೆ.
ಕಾರ್ಯಕ್ರಮವನ್ನು ಅಂದು ಪೂರ್ವಾಹ್ನ 11ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಉದ್ಘಾಟಿಸಲಿದ್ದಾರೆ. ನಿವೃತ್ತ ಪ್ರಾಧ್ಯಾಪಕ ಡಾ.ಆರ್.ನರಸಿಂಹ ಮೂರ್ತಿಯವರು ಸಂದೇಶ ನೀಡಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





