ಮಾಜಿ ಸಚಿವ ಕೃಷ್ಣ ಪಾಲೇಮಾರ್ ಹೇಳಿಕೆಯಲ್ಲಿ ಹುರುಳಿಲ್ಲ: ಮೇಯರ್ ಹರಿನಾಥ್

ಮಂಗಳೂರು, ಜ.13: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಹಲವು ಕಡೆ ನೀರು ಕುಡಿಯಲು ಯೋಗ್ಯವಾಗಿಲ್ಲ ಎಂದು ಮಾಜಿ ಸಚಿವ ಕೃಷ್ಣ ಜೆ.ಪಾಲೇಮಾರ್ ನೀಡಿದ ಹೇಳಿಕೆಯಲ್ಲಿ ಯಾವುದೇ ಹುರುಳಿಲ್ಲ ಎಂದು ಮೇಯರ್ ಹರಿನಾಥ್ ಹೇಳಿದ್ದಾರೆ.
ಶುಕ್ರವಾರ ಪಾಲಿಕೆ ಕಚೇರಿಯಲ್ಲಿ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮಾಜಿ ಸಚಿವರು ತಿಳಿಸಿದಂತೆ ಜಲಕಲ್ಯಾಣ ನೀರಿನ ಟ್ಯಾಂಕ್‌ಗಳನ್ನು ಅಧಿಕೃತ ಪ್ರಯೋಗಾಲಯಗಳಲ್ಲಿ ಪರೀಕ್ಷಿಸಲಾಗಿದೆ. ಅದರಲ್ಲಿ ಬಂದ ವರದಿಯ ಪ್ರಕಾರ ನೀರು ಕುಡಿಯಲು ಯೋಗ್ಯವಾಗಿದೆ. ಸಚಿವರು ವಿನಾಕಾರಣ ಈ ರೀತಿ ಆರೋಪ ಮಾಡಿದ್ದರಿಂದ ನಗರದ ವರ್ಚಸ್ಸಿಗೆ ಧಕ್ಕೆಯಾಗಲಿದೆ. ಜವಾಬ್ಧಾರಿಯುತ ಸ್ಥಾನದಲ್ಲಿರುವ ಅವರು ಪಾಲಿಕೆ ಜೊತೆ ಕೈಜೋಡಿಸಲಿ ಎಂದು ಮೇಯರ್ ಹರಿನಾಥ್ ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಶಾಸಕರಾದ ಜೆ.ಆರ್ ಲೋಬೋ, ಮೊಯಿದಿನ್ ಬಾವ, ಪಾಲಿಕೆ ಮುಖ್ಯ ಸಚೇತಕ ಶಶಿಧರ ಹೆಗ್ಡೆ, ಪಾಲಿಕೆ ಆಯುಕ್ತ ಮುಹಮ್ಮದ್ ನಝೀರ್ ಮತ್ತಿತರರು ಉಪಸ್ಥಿತರಿದ್ದರು.
Next Story





