Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯೇನೆಪೊಯ ಅಂತಾರಾಷ್ಟ್ರೀಯ ಗುಣಮಟ್ಟ...

ಯೇನೆಪೊಯ ಅಂತಾರಾಷ್ಟ್ರೀಯ ಗುಣಮಟ್ಟ ಹೊಂದಿರುವ ಸಂಸ್ಥೆ: ಗೃಹ ಸಚಿವ ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ13 Jan 2017 12:41 PM IST
share
ಯೇನೆಪೊಯ ಅಂತಾರಾಷ್ಟ್ರೀಯ ಗುಣಮಟ್ಟ ಹೊಂದಿರುವ ಸಂಸ್ಥೆ: ಗೃಹ ಸಚಿವ ಪರಮೇಶ್ವರ್

ಮಂಗಳೂರು, ಜ.13: ರಾಜ್ಯ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಯೇನೆಪೊಯ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯ ಆವರಣದಲ್ಲಿ  ನೂತನ ಶಸ್ತ್ರ ಚಿಕಿತ್ಸಾ ವಿಭಾಗದ ಸಂಕೀರ್ಣವನ್ನು ಇಂದು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಯೇನೆಪೊಯ ವಿಶ್ವವಿದ್ಯಾನಿಲಯ ಅತ್ಯಾಧುನಿಕ ಸಂಶೋಧನಾ ವಿಭಾಗಗಳನ್ನು  ಹಾಗೂ ವೈದ್ಯಕೀಯ ಸೌಲಭ್ಯಗಳನ್ನು ಹೊಂದಿದ್ದು, ದೇಶದ ಒಂದು ಪ್ರತಿಷ್ಠಿತ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ. ಯೇನೆಪೊಯ ಸಂಸ್ಥೆ ಅಂತಾರಾಷ್ಟ್ರೀಯ ಗುಣಮಟ್ಟ ಹೊಂದಿರುವ ಸಂಸ್ಥೆಯಾಗಿದೆ ಎಂದು ಶ್ಲಾಘಿಸಿದರು. ವಂಶವಾಹಿನಿಯ ಸಂಶೋಧನೆಯನ್ನು ಕೈಗೆತ್ತಿಕೊಂಡಿರುವ ಯೇನೆಪೊಯ ವಿಶ್ವವಿದ್ಯಾನಿಲಯದ ಸಂಶೋಧನಾ ವಿಭಾಗ ಮುಂದಿನ ದಿನಗಳಲ್ಲಿ ಹಲವು ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಖಾಸಗಿ ವಿಶ್ವವಿದ್ಯಾನಿಲಯದ ಅತ್ಯಾಧುನಿಕ ವೈದ್ಯಕೀಯ ಸಲಕರಣೆಗಳನ್ನು ಹೊಂದಿರುವ ಸಂಸ್ಥೆಗಳ ಪೈಕಿ ಯೇನೆಪೊಯ ಸಂಸ್ಥೆ ದೇಶದ ಪ್ರತಿಷ್ಠಿತ ಸಂಸ್ಥೆಯಾಗಿ ಮೂಡಿ ಬಂದಿದೆ. ಇದಕ್ಕೆ ಸಂಸ್ಥೆಯ ಆಡಳಿತ ಮಂಡಳಿಯ ಬದ್ಧತೆ ಕಾರಣವಾಗಿದೆ ಎಂದು ಪರಮೇಶ್ವರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಪೊಲೀಸ್ ಇಲಾಖೆಯಲ್ಲಿ ಅಪರಾಧ ಪತ್ತೆಗಾಗಿ ಡಿಎನ್‌ಎ ಮಾದರಿಯ ಪರೀಕ್ಷೆಗಳನ್ನು ಮಾಡಲು ಹೈದರಾಬಾದ್, ಪುಣೆಗೆ ಸಂಪರ್ಕ ಮಾಡಬೇಕಾಗಿದ್ದು, ಪ್ರಸಕ್ತ ರಾಜ್ಯದಲ್ಲಿ ಈ ಸೌಲಭ್ಯಗಳನ್ನು ಅಭಿವೃದ್ಧಿ ಪಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಭಾರತದ ವೈದ್ಯರು ವಿದೇಶದ ದೊಡ್ಡ ದೊಡ್ಡ ಆಸ್ಪತ್ರೆಗಳಲ್ಲಿ ವೈದ್ಯರಾಗಿ ತಜ್ಞರಾಗಿ ಸೇವೆ ಸಲ್ಲಿಸುತ್ತಿರುವುದು ದೇಶಕ್ಕೆ ಹೆಮ್ಮೆಯ ಸಂಗತಿಯಾಗಿದೆ.

ನೋಟು ರದ್ದತಿಯಿಂದಾಗಿ ಸಮಾಜದಲ್ಲಿ ಹಲವು ಸಮಸ್ಯೆಗಳು ಎದರುರಾಗುತ್ತಿದ್ದು, ಇದರ ಪರಿಣಾಮ ಮುಂದಿನ ದಿನಗಳಲ್ಲಿ ಇನ್ನಷ್ಟು ತೀವ್ರಗೊಳ್ಳಲಿದೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X