Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುಂದಿನ ತಿಂಗಳಿನಿಂದ ಪೊಲೀಸರಿಗೆ...

ಮುಂದಿನ ತಿಂಗಳಿನಿಂದ ಪೊಲೀಸರಿಗೆ 2,000ರೂ. ಭತ್ಯೆ

ಗಂಗೊಳ್ಳಿಯಲ್ಲಿ ಕರಾವಳಿ ಕಾವಲು ಪೊಲೀಸ್ ಠಾಣೆ ಉದ್ಘಾಟಿಸಿ ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ13 Jan 2017 9:18 PM IST
share
ಮುಂದಿನ ತಿಂಗಳಿನಿಂದ ಪೊಲೀಸರಿಗೆ 2,000ರೂ. ಭತ್ಯೆ

ಉಡುಪಿ, ಜ.13: ಹೊಸ ವರ್ಷದಲ್ಲಿ ಜ.1ರಿಂದಲೇ ಪೊಲೀಸ್ ಸಿಬ್ಬಂದಿಗಳಿಗೆ ನೀಡಬೇಕಿದ್ದ, ತಾಂತ್ರಿಕ ಕಾರಣಗಳಿಂದ ನೀಡಲು ಸಾಧ್ಯವಾಗದ 2,000ರೂ. ವಿಶೇಷ ಭತ್ಯೆಯನ್ನು ಫೆ.1ರಂದು ನೀಡುವ ಸಂಬಳದಿಂದಲೇ ನೀಡಲಾಗುವುದು ಎಂದು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರಕಟಿಸಿದ್ದಾರೆ.

ಶುಕ್ರವಾರ ಗಂಗೊಳ್ಳಿ ಮೀನುಗಾರಿಕಾ ಬಂದರು ಸಮೀಪ ನಿರ್ಮಿಸಲಾದ ಕರಾವಳಿ ಕಾವಲು ಪೊಲೀಸ್ ಠಾಣೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಪೊಲೀಸರದ್ದು ಅತ್ಯಂತ ಕಷ್ಟದ ಕೆಲಸ. ತೀವ್ರವಾದ ಒತ್ತಡದಲ್ಲಿ ಅವರು ಕೆಲಸ ಮಾಡುತ್ತಾರೆ. ಅವರಿಗೆ ಒಂದಿಷ್ಟು ಸವಲತ್ತು ನೀಡುವುದರಲ್ಲಿ ಯಾವುದೇ ತಪ್ಪಿಲ್ಲ. ರಾಜ್ಯದಲ್ಲಿ 2013ರಿಂದ ಅವರಿಗೆ ಯಾವುದೇ ಭತ್ಯೆ ನೀಡಿಲ್ಲ. ಹೀಗಾಗಿ ಅವರಿಗೆ ಔರಾದ್‌ಕರ್ ಸಮಿತಿ ಶಿಫಾರಸ್ಸು ಮಾಡಿದಂತೆ ಸಮವಸ್ತ್ರ ಭತ್ಯೆ, ರಿಸ್ಕ್ ಅಲಾಯೆನ್ಸ್ ಸೇರಿದಂತೆ ಒಟ್ಟು 2000ರೂ. ಭತ್ಯೆಯನ್ನು ನೀಡಲು ನಿರ್ಧರಿಸ ಲಾಗಿದೆ. ಇದನ್ನು ಜನವರಿಯಿಂದಲೇ ನೀಡಲು ನಿರ್ಧರಿಸಲಾಗಿತ್ತು. ಆದರೆ ಕೆಲವು ಕಾರಣಗಳಿಂದ ಸಾಧ್ಯವಾಗದ್ದರಿಂದ ಫೆ.1ರ ವೇತನದಿಂದಲೇ ಅದನ್ನು ಸೇರಿಸಿ ನೀಡಲು ನಿರ್ಧರಿಸಲಾಗಿದೆ ಎಂದರು.

2017ರಲ್ಲಿ ಹೊಸ ವೇತನ ಆಯೋಗ ರಚನೆಯಾಗಲಿದೆ. ರಾಜ್ಯದಲ್ಲಿ ಪೊಲೀಸರ ವೇತನ ಹೆಚ್ಚಳ ಕುರಿತಂತೆ ನೇಮಿಸಲಾದ ಔರಾದ್ಕರ್ ಸಮಿತಿ ಇತರ ರಾಜ್ಯಗಳ ಪೊಲೀಸರ ವೇತನಗಳನ್ನು ಪರಿಶೀಲಿಸಿ ನೀಡಿರುವ ವರದಿಯ ಶಿಪಾರಸ್ಸುಗಳನ್ನು ವೇತನ ಆಯೋಗದ ಮುಂದಿರಿಸಲಾಗುವುದು. ಅಂತಿಮವಾಗಿ ಆಯೋಗ ನೀಡುವ ಶಿಫಾರಸ್ಸುಗಳನ್ನು ಸರಕಾರ ಜಾರಿಗೊಳಿಸಲಿೆ ಎಂದು ಪರಮೇಶ್ವರ್ ತಿಳಿಸಿದರು.

ರಾಜ್ಯದ ಪೊಲೀಸ್ ಇಲಾಖೆ ಶಿಸ್ತಿಗೆ ಹೆಸರಾಗಿದ್ದು, ಯಾವುದೇ ಕಾರಣಕ್ಕೂ ಪೊಲೀಸರ ಶಿಸ್ತು ಉಲ್ಲಂಘನೆ ಸಲ್ಲದು. ಪೊಲೀಸ್ ಸಿಬ್ಬಂದಿಯಎಲ್ಲಾ ರೀತಿಯ ಮನವಿಗಳಿಗೆ ಸೂಕ್ತವಾಗಿ ಸ್ಪಂದಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

 ಐರೋಡಿಯಲ್ಲಿ ತರಬೇತಿ ಕೇಂದ್ರ:

ರಾಜ್ಯದಲ್ಲಿರುವ 350 ಕಿ.ಮೀ. ಉದ್ದದ ಕರಾವಳಿ ತೀರದ ಭದ್ರತಾ ವ್ಯವಸ್ಥೆಗಳನ್ನು ನೋಡಿಕೊಳ್ಳಲು ರಚಿಸಲಾಗಿರುವ ಕರಾವಳಿ ಕಾವಲು ಪೊಲೀಸರಿಗೆ ವಿಶೇಷ ತರಬೇತಿ ನೀಡುವ ಉದ್ದೇಶದಿಂದ ಉಡುಪಿ ಜಿಲ್ಲೆಯ ಐರೋಡಿಯಲ್ಲಿ ಕರ್ನಾಟಕ ರಾಜ್ಯ ಮರೈನ್ ಪೊಲೀಸ್ ತರಬೇತಿ ಕೇಂದ್ರವನ್ನು ಪ್ರಾರಂಬಿಸಲಾಗುವುದು. ಇದಕ್ಕಾಗಿ ರಾಜ್ಯ ಸರಕಾರ 25 ಎಕರೆ ಜಾಗವನ್ನು ನೀಡಲಿದೆ. ಮೂಲಭೂತ ಸೌಕರ್ಯಗಳಿಗಾಗಿ ಕೇಂದ್ರಕ್ಕೆ ಪ್ರಸ್ತಾಪ ಸಲ್ಲಿಸಲಾಗುತ್ತಿದೆ ಎಂದು ಡಾ.ಜಿ.ಪರಮೇಶ್ವರ್ ವಿವರಿಸಿದರು.

ಸಮುದ್ರದ ಬಗ್ಗೆ ಮಾಹಿತಿ ಇರುವವರನ್ನೇ ಈ ಪಡೆಗೆ ಸೇರಿಸಿಕೊಳ್ಳುವ ಉದ್ದೇಶದಿಂದ ಕರಾವಳಿ ತೀರದ ಅರ್ಹ ಅ್ಯರ್ಥಿಗಳಿಗೆ ನೇಮಕಾತಿಯಲ್ಲಿ ಆದ್ಯತೆ ನೀಡಲಾಗುವುದು ಹಾಗೂ ಕರಾವಳಿ ಕಾವಲು ಪಡೆಯ ಸಮವಸ್ತ್ರವನ್ನು ಬದಲಾಯಿಸುವ ಚಿಂತನೆಯೂ ಇದೆ. ಕರಾವಳಿ ಪೊಲೀಸರಿಗೆ ಸಮುದ್ರದಲ್ಲಿ ಈಜುವ ಬಗ್ಗೆ, ಸಮುದ್ರದಲ್ಲಿ ಆಪತ್ತಿನಲ್ಲಿರುವವನ್ನು ರಕ್ಷಿಸುವ ಬಗ್ಗೆ ವಿಶೇಷ ತರಬೇತಿಯ ಅಗತ್ಯವಿದೆ ಸಚಿವರು ತಿಳಿಸಿದರು.

ಕರಾವಳಿ ಪ್ರದೇಶದಲ್ಲಿ ಸೂಕ್ತ ಭದ್ರತೆಗೆ ಮಾತ್ರವಲ್ಲದೇ, ಸಮುದ್ರದಲ್ಲಿ ಸಂಕಷ್ಟದಲ್ಲಿರುವ ಮೀನುಗಾರರನ್ನು ರಕ್ಷಿಸುವ ಉದ್ದೇಶದಿಂದ ಕರಾವಳಿ ಕಾವಲು ಪಡೆಗೆ ಹೆಲಿಕ್ಯಾಪ್ಟರ್ ಒದಗಿಸುವ ಕುರಿತಂತೆ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗುವುದು ಎಂದು ಡಾ ಪರಮೇಶ್ವರ್ ತಿಳಿಸಿದರು.

ರಾಜ್ಯದಲ್ಲಿ 25,000 ಪೊಲೀಸ್ ಸಿಬ್ಬಂದಿ ಹುದ್ದೆ ಖಾಲಿ ಇತ್ತು. ತಮ್ಮ ಸರಕಾರ ಬಂದ ನಂತರ ಒಂದೂವರೆ ವರ್ಷದಲ್ಲಿ 20,000 ಕಾನ್ಸ್‌ಟೇಬಲ್ ಗಳ ನೇಮಕಕ್ಕೆ ಕ್ರಮಕೈಗೊಳ್ಳಲಾಗಿದೆ. ಈಗಾಗಲೇ 16,000 ಕಾನ್ಸ್‌ಟೇಬಲ್ ನೇಮಕಾತಿ ಮುಗಿದಿದೆ. 1,000 ಎಸ್‌ಐಗಳ ನೇಮಕ ಪ್ರಕ್ರಿಯೆ ನಡೆಯುತ್ತಿದೆ ಎಂದರು.

ಕಳೆದ ಬಾರಿಯ ಬಜೆಟ್‌ನಲ್ಲಿ ಪೊಲೀಸರ ಗೃಹ ನಿರ್ಮಾಣಕ್ಕೆ 1818 ಕೋಟಿರೂ.ಗಳನ್ನು ಬಜೆಟ್‌ನಲ್ಲಿ ಒದಗಿಸಲಾಗಿದ್ದು, ಇದರಲ್ಲಿ ಈಗಾಗಲೇ 11,000 ಮನೆಗಳ ವಸತಿಗಳನ್ನು ನಿರ್ಮಿಸಲಾಗಿದೆ. ಅಗತ್ಯವಿದ್ದರೆ ಇನ್ನೂ 10,000 ಮನೆಗಳನ್ನು ಮಂಜೂರು ಮಾಡಲಾಗುವುದು. ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಮಹಿಳಾ ಪೊಲೀಸ್ ಠಾಣೆಗಳನ್ನು ಪ್ರಾರಂಭಿಸಲಾಗುತ್ತಿದ್ದು, ಈ ಠಾಣೆಗಳಲ್ಲಿ ಮಹಿಳಾ ಪೊಲೀಸರೇ ಎಲ್ಲಾ ರೀತಿಯ ಕರ್ತವ್ಯ ನಿರ್ವಹಿಸಲಿದ್ದಾರೆ. ಕುಂದಾಪುರದ ಅಗತ್ಯಗಳನ್ನು ಅವಲೋಕಿಸಿ ಇಲ್ಲಿಗೂ ಮಹಿಳಾ ಠಾಣೆ ಮಂಜೂರು ಮಾಡುವ ಬಗ್ಗೆ ಪರಿಶೀಲಿಸಲಾಗುವುದು ಎಂದರು.

ಬೈಂದೂರು ಶಾಸಕ ಗೋಪಾಲ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ರಾಜ್ಯ ಆಂತರಿಕಾ ಭದ್ರತಾ ವಿಭಾಗ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್.ರಾಜು ಪ್ರಾಸ್ತಾವಿಕವಾಗಿ ಮಾತನಾಡಿದರು.

ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪ ಚಂದ್ರ ಶೆಟ್ಟಿ, ರಾಜ್ಯ ಅಲ್ಪಸಂಖ್ಯಾತರ ನಿಗಮ ಅಧ್ಯಕ್ಷ ಎಂ.ಎ.ಗಪೂರ್, ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕ ಹರಿಶೇಖರನ್ ಪಿ., ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್, ಗಂಗೊಳ್ಳಿ ಗ್ರಾಪಂ ಆಡಳಿತಾಧಿಕಾರಿ ಸೀತಾರಾಮ ಶೆಟ್ಟಿ ಉಪಸ್ಥಿತರಿದ್ದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಟಿ.ಬಾಲಕೃಷ್ಣ ಸ್ವಾಗತಿಸಿದರು. ಕರಾವಳಿ ಕಾವಲು ಪಡೆ ಪೊಲೀಸ್ ಉಪಾಧೀಕ್ಷಕ ಟಿ.ಆರ್.ಜೈಶಂಕರ್ ವಂದಿಸಿದರು. ಜಿಲ್ಲಾ ಪೊಲೀಸ್ ನಿಯಂತ್ರಣ ಕೊಠಡಿಯ ಬಿ.ಮನಮೋಹನ ರಾವ್ ಕಾರ್ಯಕ್ರಮ ನಿರೂಪಿಸಿದರು.

ಪೊಲೀಸ್ ಸಿಬ್ಬಂದಿಗೆ 10 ವರ್ಷದಲ್ಲಿ ಬಡ್ತಿ

ಕಂದಾಯ ಇಲಾಖೆಯಲ್ಲಿ ಎರಡನೇ ದರ್ಜೆ ಗುಮಾಸ್ತನಾಗಿ ಸೇರುವಾತ 22 ವರ್ಷಗಳಲ್ಲಿ ಮೂರು ಬಡ್ತಿಗಳನ್ನು ಪಡೆದು ತಹಶೀಲ್ದಾರ್ ಆಗುವ ಅವಕಾಶ ಪಡೆದರೆ, ಪೊಲೀಸ್ ಇಲಾಖೆಗೆ ಕಾನ್‌ಸ್ಟೇಬಲ್ ಆಗಿ ಸೇರಿದವರು 22 ವರ್ಷದ ಬಳಿಕ ಹೆಡ್‌ಕಾನ್‌ಸ್ಟೇಬಲ್ ಆಗಿ ಬಡ್ತಿ ಪಡೆಯುವ ಕ್ರಮವನ್ನು ನಮ್ಮ ಸರಕಾರ ಬದಲಾಯಿಸಿದ್ದು, ಇನ್ನು 10 ವರ್ಷಗಳಿಗೆ ಹೆಡ್‌ಕಾನ್ಸ್ಟೇಬಲ್ ಆಗಲಿದ್ದಾರೆ.

ಅವಕಾಶವಿದ್ದರೆ, ಇನ್ನು ಮುಂದೆ ತನ್ನ ಸರ್ವಿಸ್‌ನಲ್ಲಿ ಆತ ಸರ್ಕಲ್ ಇನ್‌ಸ್ಪೆಕ್ಟರ್ ಆಗಿ ನಿವೃತ್ತಿ ಪಡೆಯಲೂ ಬಹುದು. ಒಂದು ವೇಳೆ ಬಡ್ತಿ ದೊರೆಯದಿದ್ದರೂ, ಆ ಶ್ರೇಣಿಯ ವೇತನ ಆತನಿಗೆ ದೊರೆಯುವಂತೆ ನಿಯಮವನ್ನು ಮಾರ್ಪಾಡು ಮಾಡಲಾಗಿದೆ ಎಂದು ಡಾ.ಪರಮೇಶ್ವರ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X