Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ...

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಚೆನ್ನಾಗಿದೆ: ಪರಮೇಶ್ವರ್

ಜಿ.ರಾಜಶೇಖರ್ ಪ್ರಶಸ್ತಿ ನಿರಾಕರಣೆಗೆ ಪ್ರತಿಕ್ರಿಯೆ ನೀಡದ ಗೃಹ ಸಚಿವರು

ವಾರ್ತಾಭಾರತಿವಾರ್ತಾಭಾರತಿ13 Jan 2017 10:25 PM IST
share
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಚೆನ್ನಾಗಿದೆ: ಪರಮೇಶ್ವರ್

ಗಂಗೊಳ್ಳಿ, ಜ.13: ಕಳೆದೆರಡು ವರ್ಷಗಳಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಚೆನ್ನಾಗಿಯೇ ಇದೆ. ಕೋಮುಸಂಘರ್ಷದ ವ್ಯರ್ಥತೆಯನ್ನು ಜನತೆ ಅರ್ಥ ಮಾಡಿಕೊಂಡಿದ್ದಾರೆ. ಇದೊಂದು ಒಳ್ಳೆಯ ಬೆಳವಣಿಗೆ ಎಂದು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ನೂತನವಾಗಿ ನಿರ್ಮಿಸಲಾದ ಕರಾವಳಿ ಕಾವಲು ಪೊಲೀಸ್ ಠಾಣೆಯನ್ನು ಉದ್ಘಾಟಿಸಲು ಆಗಮಿಸಿದ ಗೃಹ ಸಚಿವರು ಸುದ್ದಿಗಾರರೊಂದಿಗೆ ಮಾತನಾಡುತಿದ್ದರು.

ಪ್ರಸ್ತುತ ಇರುವ ಹದಗೆಟ್ಟ ಸನ್ನಿವೇಶದ ಹಿನ್ನೆಲೆಯಲ್ಲಿ ತನಗೆ ಒದಗಿಬಂದ ಸಾಹಿತ್ಯ ಅಕಾಡೆಮಿ ಪುಸ್ತಕ ಪ್ರಶಸ್ತಿಯನ್ನು ಸ್ವೀಕರಿಸಲು ನಿರಾಕರಿಸಿರುವ ಪ್ರಸಿದ್ಧ ಚಿಂತಕ ಹಾಗೂ ವಿಮರ್ಶಕ ಜಿ.ರಾಜಶೇಖರ್ ಅವರ ನಿರ್ಧಾರದ ಕುರಿತು ಅಭಿಪ್ರಾಯವನ್ನು ಕೇಳಿದಾಗ, ನನಗೆ ಆ ಬಗ್ಗೆ ಮಾಹಿತಿ ಇಲ್ಲ. ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡ ಬಳಿಕವಷ್ಟೇ ನಾನು ಪ್ರತಿಕ್ರಿಯೆ ನೀಡಲು ಸಾಧ್ಯ. ಅವರು ಯಾವ ಅರ್ಥದಲ್ಲಿ, ಯಾವ ಉದ್ದೇಶದಲ್ಲಿ ಹೀಗೆ ಮಾಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ ಎಂದು ಡಾ.ಪರಮೇಶ್ವರ್ ನುಡಿದರು.

 ಅಲ್ಪಸಂಖ್ಯಾತರ ಕುರಿತಂತೆ ಈಗ ಇರುವ ಅಸಹನೆಯ ಕುರಿತು ಇರಬಹುದು ಎಂದಾಗ, ಎಲ್ಲಿ ಈಗ ಎಲ್ಲವೂ ಸರಿಯಾಗಿದೆಯಲ್ಲ. ಜನ ಇದರ ವ್ಯರ್ಥತೆಯನ್ನು ತಿಳಿದುಕೊಂಡಿದ್ದಾರೆ. ಇದು ಒಳ್ಳೆಯ ಬೆಳವಣಿಗೆ ಎಂದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಚೆನ್ನಾಗಿದೆ. ಕೆಲವು ಟೀಕೆಗಾಗಿ ಟೀಕೆ ಮಾಡುತ್ತಾರೆ. ಹೀಗೆ ಟೀಕೆ ಮಾಡಿದಾಗ ನಮಗೂ ಅದನ್ನು ವಿಮರ್ಶಿಸಲು ಸಾದ್ಯವಾಗುತ್ತಿದೆ ಎಂದರು.

ಹೆಗಡೆ ಎಲ್ಲಿ ಹೋಗುತ್ತಾರೆ?

ಕುಂದಾಪುರ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಶಿರಸಿಯಲ್ಲಿ ವೈದ್ಯರಿಗೆ ಹಲ್ಲೆ ನಡೆಸಿದ ಆರೋಪದಲ್ಲಿ ಶಿರಸಿಯ ಸಂಸದ ಅನಂತ ಕುಮಾರ ಹೆಗಡೆ ಮೇಲೆ ಈಗಾಗಲೇ ಎಫ್‌ಐಆರ್ ದಾಖಲಾಗಿದೆ. ಓರ್ವ ಸಂಸದನ ಮೇಲೆ ಪ್ರಕರಣ ದಾಖಲಿಸಿಕೊಳ್ಳುವುದು ಸುಲಭದ ಮಾತಲ್ಲ. ಆದರೂ ಪೊಲೀಸರು ಯೋಜನಾಬದ್ದವಾಗಿ ಸಾಕ್ಷಿಯನ್ನಾಧರಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈಗಾಗಲೇ ಅವರು ತಲೆಮರೆಸಿಕೊಂಡಿದ್ದಾರೆ. ಎಷ್ಟು ದಿನಗಳವರೆಗೆ ಅವರು ತಲೆಮರೆಸಿಕೊಂಡಿರಲು ಸಾಧ್ಯ. ಒಂದಲ್ಲ ಒಂದು ದಿನ ಸಿಗಲೇಬೇಕಲ್ಲ ಎಂದರು.

ಅಭಿಷೇಕ್ ಆತ್ಮಹತ್ಯೆ:

ಶೃಂಗೇರಿ ಕಾಲೇಜು ವಿದ್ಯಾರ್ಥಿ ಹಾಗೂ ಎಬಿವಿಪಿ ಕಾರ್ಯಕರ್ತ ಅಭಿಷೇಕ್ ಆತ್ಮಹತ್ಯೆ ಪ್ರಕಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆ ನಡೆಸಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದೇನೆ. ತಪ್ಪು ಮಾಡಿದವರಿಗೆ ಶಿಕ್ಷೆಯಾಗುತ್ತದೆ ಎಂದರು.

ಕೊಲ್ಲೂರು ಪೊಲೀಸರಿಗೆ ಕ್ವಾಟರ್ಸ್‌ಗಳಿಗೆ ಶಾಸಕರು ಪ್ರಸ್ತಾವನೆ ಸಲ್ಲಿಸಿದರೆ ತಕ್ಷಣವೇ ಬೇಡಿಕೆ ಈಡೇರಿಸಲಾಗುವುದು ಎಂದು ಭರವಸೆ ನೀಡಿದರು.

ಎಂಎಲ್‌ಸಿ ಪ್ರತಾಪಚಂದ್ರ ಶೆಟ್ಟಿ, ಶಾಸಕ ಗೋಪಾಲ ಪೂಜಾರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ಅಧ್ಯಕ್ಷ ಎಂ.ಎ ಗಫೂರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಮೀನುಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಬಿ. ಹಿರಿಯಣ್ಣ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X