ಕಾರು ಢಿಕ್ಕಿ: ಪಾದಚಾರಿ ಮೃತ್ಯು
ಮಂಗಳೂರು, ಜ. 13: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಮೃತಪಟ್ಟಿರುವ ಘಟನೆ ಕೊಲ್ನಾಡು ಬಳಿ ಶುಕ್ರವಾರ ನಡೆದಿದೆ.
ಮೃತರನ್ನು ಕೊಲ್ನಾಡು ನಿವಾಸಿ ರಾಜೇಂದ್ರ ಶೆಟ್ಟಿ ಎಂದು ಗುರುತಿಸಲಾಗಿದೆ.
ಇವರು ಕೊಲ್ನಾಡು ಪೆಟ್ರೋಲ್ ಬಂಕ್ ಬಳಿಯಿಂದ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಉಡುಪಿಯಿಂದ ಮಂಗಳೂರಿಗೆ ಬರುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಪರಿಣಾಮವಾಗಿ ಅವರು ರಸ್ತೆಗೆಸೆಯಲ್ಪಟ್ಟು ತಲೆ, ಮೈ ಹಾಗೂ ಕೈ, ಕಾಲುಗಳಿಗೆ ಗಂಭೀರ ಸ್ವರೂಪ ಗಾಯಗಳಾಗಿದ್ದು, ತಕ್ಷಣ ಅವರನ್ನು ಸಮೀಪದ ಮುಲ್ಕಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು.
ಗಾಯಾಳುವನ್ನು ಪರೀಕ್ಷಿಸಿದ ವೈದ್ಯರು ಮಾರ್ಗಮಧ್ಯೆ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಈ ಬಗ್ಗೆ ಸುರತ್ಕಲ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





