Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರೈತ ಪ್ರಶಸ್ತಿ ಪಡೆಯುವಾಸೆ: ನಟ ಪ್ರಕಾಶ್...

ರೈತ ಪ್ರಶಸ್ತಿ ಪಡೆಯುವಾಸೆ: ನಟ ಪ್ರಕಾಶ್ ರೈ

ಸಂದೇಶ ಪ್ರಶಸ್ತಿ ಪ್ರದಾನ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ13 Jan 2017 10:36 PM IST
share
ರೈತ ಪ್ರಶಸ್ತಿ ಪಡೆಯುವಾಸೆ: ನಟ ಪ್ರಕಾಶ್ ರೈ

ಮಂಗಳೂರು, ಜ. 13: ಸಿನಿಮಾ, ರಂಗಭೂಮಿಯನ್ನು ದಾಟಿ ರೈತರ ಪರವಾಗಿ ಕೆಲಸದಲ್ಲಿ ತೊಡಗಿರುವ ನನಗೆ ಈ ಸಂದೇಶ ಪ್ರತಿಷ್ಠಾನದಿಂದ ‘ಉತ್ತಮ ರೈತ ಪ್ರಶಸ್ತಿ’ ಪಡೆಯುವ ಆಸೆ ಇದೆ ಎಂದು ಬಹುಭಾಷಾ ನಟ ಪ್ರಕಾಶ್ ರೈ ಹೇಳಿದ್ದಾರೆ.

ಸಂದೇಶ ಸಂಸ್ಕೃತಿ ಮತ್ತು ಶಿಕ್ಷಣ ಪ್ರತಿಷ್ಠಾನ ವತಿಯಿಂದ ಇಂದು ನಂತೂರ್ ಬಳಿಯ ಪ್ರೇಮನಗರದಲ್ಲಿ ನಡೆದ ಸಂದೇಶ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ‘ಸಂದೇಶ ಮಾಧ್ಯಮ ಪ್ರಶಸ್ತಿ’ ಸ್ವೀಕರಿಸಿ ಅವರು ಮಾತನಾಡುತ್ತಿದ್ದರು.

 ‘ಪ್ರಕಾಶ್‌ರಾಜ್ ಫೌಂಡೇಶನ್’ ಸಂಸ್ಥೆಯನ್ನು ಆರಂಭಿಸಿದ್ದೇನೆ. ಹಳ್ಳಿಯೊಂದನು ದತ್ತು ಪಡೆದಿದ್ದೇನೆ. ಈ ಮೂಲಕ ಹೆಚ್ಚೆಚ್ಚು ರೈತ ಪರ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದೇನೆ ಎಂದು ಪ್ರಕಾಶ್ ರೈ ಹೇಳಿದರು.

ಸಂದೇಶ ಪ್ರತಿಷ್ಠಾನದವರು ನನ್ನನ್ನು ಗುರುತಿಸಿ ಗೌರವಿಸಿದ್ದಾರೆ. ನನ್ನ ನೆಲದಲ್ಲಿ, ನನ್ನ ಊರಿನಲ್ಲಿ ಗೌರವ ಪಡೆಯುವುದೆಂದರೆ ನನಗೆ ಹೆಮ್ಮೆಯ ವಿಚಾರ. ಅವರು ನೀಡಿರುವ ಗೌರವ ನನ್ನ ಜವಾಬ್ದಾರಿಯನ್ನು ಇನ್ನಷ್ಟು ಹೆಚ್ಚಿಸಿದೆ. ನನಗೆ ಸ್ಫೂರ್ತಿದಾಯಕವಾಗಿದೆ ಎಂದರು.

ಇದೇ ಸಂದರ್ಭದಲ್ಲಿ ನಾಡೋಜ ಡಾ.ಕಮಲಾ ಹಂಪನ ಅವರಿಗೆ ‘ಸಂದೇಶ ಸಾಹಿತ್ಯ ಪ್ರಶಸ್ತಿ’, ಯವರಾಜ್ ಅವರಿಗೆ ‘ಸಂದೇಶ ಕಲಾ ಪ್ರಶಸ್ತಿ’, ಅನಿಲ್ ಪತ್ರಾವೊ ಅವರಿಗೆ ‘ಸಂದೇಶ ಕೊಂಕಣಿ ಸಂಗೀತ ಪ್ರಶಸ್ತಿ’, ಜಾನ್ ದೇವರಾಜ್ ಅವರಿಗೆ ‘ಸಂದೇಶ ವಿಶೇಷ ಪ್ರಶಸ್ತಿ’ ಶಮಿತಾ ರಾವ್ ಮತ್ತು ರೆನಿಟಾ ಲೋಬೊ ಅವರಿಗೆ ‘ಸಂದೇಶ ಶಿಕ್ಷಣ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.

ಸಮಾರಂಭದ ಬಳ್ಳಾರಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಹಾಗೂ ಸಂದೇಶ ಪ್ರತಿಷ್ಠಾನದ ಅಧ್ಯಕ್ಷ ಅ.ವಂ.ಹೆನ್ರಿ ಡಿಸೋಜಾ ವಹಿಸಿದ್ದರು.

ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಹಾಗೂ ಸಂದೇಶ ಪ್ರತಿಷ್ಠಾನದ ವಿಶ್ವಸ್ಥ ಅ.ವಂ.ಅಲೋಶಿಯಸ್ ಪೌಲ್ ಡಿಸೋಜಾ, ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಮನು ಬಳಿಗಾರ್, ಶಾಸಕ ಜೆ.ಆರ್‌ಲೋಬೊ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಹಾಗೂ ಸಂದೇಶ ಪ್ರತಿಷ್ಠಾನದ ವಿಶ್ವಸ್ಥ ರಾಯ್ ಕ್ಯಾಸ್ತಲಿನೊ, ಸಂದೇಶ ಪ್ರತಿಷ್ಠಾನದ ಟ್ರಸ್ಟಿ ರೆ.ಫಾ.ಐವನ್ ಪಿಂಟೊ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X