ಅರಂತೋಡಿನಲ್ಲಿ ಮಾನವ ಹಕ್ಕುಗಳ ಬಗ್ಗೆ ವಿಚಾರಗೋಷ್ಠಿ
ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಿಂದ ಚಾಲನೆ

ಸುಳ್ಯ, ಜ.13 : ಮಾನವ ಹಕ್ಕು ಕುರಿತು ವಿಚಾರಸಂಕಿರಣ ಅರಂತೋಡಿನ ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆಯಿತು.
ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಸಹಯೋಗದಲ್ಲಿ ತೆಕ್ಕಿಲ್ ಪ್ರತಿಷ್ಠಾನ ಹಾಗೂ ತೆಕ್ಕಿಲ್ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳ ಜಂಟಿ ಆಶ್ರಯದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಮಾನವ ಹಕ್ಕು ಆಯೋಗದ ಅಧ್ಯಕ್ಷೆ ಮೀರಾ ಸಿ ಸಕ್ಷೇನಾ ಕಾರ್ಯಕ್ರಮ ಉದ್ಘಾಟಿಸಿದರು.
ಮಾನವ ಹಕ್ಕುಗಳ ಉಲ್ಲಂಘನೆ ಆದಲ್ಲಿ ಆಯೋಗದ ಶುಲ್ಕ ರಹಿತ ದೂರವಾಣಿ ಸಂಖ್ಯೆಗೆ ಕೆರೆ ಮಾಡಿ ದೂರು ನೀಡಬಹುದು. ದೂರು ಪರಿಶೀಲಿಸಿ ಮಾನವ ಹಕ್ಕುಗಳ ಉಲ್ಲಂಘನೆಯಾಗಿರುವುದು ಕಂಡು ಬಂದಲ್ಲಿ ಅಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದವರು ಹೇಳಿದರು.
ಮಾನವ ಹಕ್ಕು ಕುರಿತಾಗಿ ಮನೋಹರ್ ರಂಗನಾಥ್ ಮಾಹಿತಿ ನೀಡಿದರು.
ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷ ಟಿ.ಎಂ.ಶಹೀದ್ ಅಧ್ಯಕ್ಷತೆ ವಹಿಸಿದ್ದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವೇದಮೂರ್ತಿ, ಬೆಳ್ಳಾರೆ ಜ್ಞಾನಗಂಗಾ ಸ್ಕೂಲ್‌ನ ಅಧ್ಯಕ್ಷ ಎಂ.ಪಿ.ಉಮೇಶ್, ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ, ತಾಲೂಕು ಪಂಚಾಯತ್ ಸದಸ್ಯೆ ಪುಷ್ಪಾ ಮೇದಪ್ಪ, ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಲೀಲಾವತಿ, ಉಪಾಧ್ಯಕ್ಷ ಶಿವಾನಂದ ಕುಕ್ಕುಂಬಳ, ಅರಂತೋಡು ಸೊಸ್ಯಟಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಸಿಡಿಪಿಒ ಸುಕನ್ಯಾ ಅತಿಥಿಗಳಾಗಿದ್ದರು.
ಪಾಪ್ಯುಲರ್ ಎಜ್ಯುಕೇಶನ್ ಸೊಸೈಟಿ ಸಂಚಾಲಕ ಕೆ.ಆರ್.ಗಂಗಾಧರ್, ದುರ್ಗಾಮಾತಾ ಭಜನಾ ಮಂದಿರದ ಅಧ್ಯಕ್ಷ ಯು.ಎಂ.ನಾರಾಯಣ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲವಿಚಾರಕ ಪ್ರಶಾಂತ್, ವಾಹನ ಚಾಲಕ-ಮಾಲಕರ ಸಂಘದ ಅಧ್ಯಕ್ಷ ವೆಂಕಟ್ರಮಣ ಮೇರ್ಕಜೆ, ಬದ್ರಿಯಾ ಜುಮ್ಮಾ ಮಸೀದಿಯ ಅಧ್ಯಕ್ಷ ಕೆ.ಎಂ.ಮಹಮ್ಮದ್, ರಬ್ಬರ್ ಬೆಳೆಗಾರರ ಸಂಘದ ಅಧ್ಯಕ್ಷ ಹೊನ್ನಪ್ಪ ಅಡ್ತಲೆ, ಶಾಲಾ ಸಂಚಾಲಕ ಟಿ.ಎಂ.ಜಾವೇದ್, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಯು.ಕೆ.ತೀರ್ಥರಾಮ, ಮುಖ್ಯೋಪಾಧ್ಯಾಯರಾದ, ಕೆ.ದಾಮೋದರ, ಕೆ.ಎಸ್.ಹರಿಣಾಕ್ಷಿ, ತೆಕ್ಕಿಲ್ ಪ್ರತಿಷ್ಠಾನದ ಕಾರ್ಯದರ್ಶಿ ಅಶ್ರಪ್ ಗುಂಡಿ ವೇದಿಕೆಯಲ್ಲಿದ್ದರು.







